ಇಂದ್ರಪ್ರಸ್ಥ ವಿದ್ಯಾಲಯದಲ್ಲಿ ಪ್ರಾರಂಭೋತ್ಸವ

New Project (3)
Published on

ಉಪ್ಪಿನಂಗಡಿ: ಇಲ್ಲಿನ ಇಂದ್ರಪ್ರಸ್ಥ ವಿದ್ಯಾಲಯದಲ್ಲಿ ಮಂಗಳವಾರ ಶಾಲಾ ಪ್ರಾರಂಭೋತ್ಸವ ಆಚರಿಸಲಾಯಿತು.

ವಿದ್ಯಾಲಯಕ್ಕೆ ಆಗಮಿಸಿದ ವಿದ್ಯಾರ್ಥಿಗಳು ತರಗತಿಗೆ ತೆರಳುವ ಮುನ್ನ ಭಾರತಮಾತೆಯ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದರು. ಆಧುನಿಕ ಸಂವಹನಾತ್ಮಕ ಸಾಮರ್ಥ್ಯ ಹೊಂದುವ ದೃಷ್ಟಿಯಿಂದ ಶಾಲಾ ಕೊಠಡಿಗಳಲ್ಲಿ ಅಳವಡಿಸಲಾದ ಇಂಟರಾಕ್ಟಿವ್ ಬೋರ್ಡ್, ಸ್ಟೆಮ್ ಶಿಕ್ಷಣದ ಪರಿಕರ ಉದ್ಘಾಟಿಸಲಾಯಿತು.

ವಿದ್ಯಾಲಯಕ್ಕೆ ಹೊಸದಾಗಿ ಸೇರ್ಪಡೆಗೊಂಡ ವಿದ್ಯಾರ್ಥಿಗಳನ್ನು ಸ್ವಾಗತಿಸಿಲಾಯಿತು. ರಮೇಶ್ ಎಂ.ಬಾಯಾರು ಮುಖ್ಯ ಅತಿಥಿಯಾಗಿದ್ದರು. ಸಂಸ್ಥೆಯ ಸಂಚಾಲಕ ಸುಬ್ರಹ್ಮಣ್ಯ ಭಟ್, ಆಡಳಿತ ಮಂಡಳಿ ಅಧ್ಯಕ್ಷ ಕರುಣಾಕರ ಸುವರ್ಣ, ಸದಸ್ಯರು, ಶಿಕ್ಷಕ-ಶಿಕ್ಷಕೇತರ ವೃಂದದವರು ಉಪಸ್ಥಿತರಿದ್ದರು. ಮುಖ್ಯಶಿಕ್ಷಕಿ ವೀಣಾ ಆರ್.ಪ್ರಸಾದ್ ಸ್ವಾಗತಿಸಿದರು. ಸಹ ಶಿಕ್ಷಕಿಯರಾದ ರೇಷ್ಮಾ ಯು., ದಿವ್ಯಾ ಕಾರ್ಯಕ್ರಮ ನಿರೂಪಿಸಿದರು. ಜ್ಯೋತಿ ಕಿರಣ್ ವಂದಿಸಿದರು. ವಿದ್ಯಾಲಯದ ವಿದ್ಯಾರ್ಥಿಗಳಿಂದ ಪಹಲ್ಗಾಮ್ ಘಟನೆ, ಆಪರೇಷನ್ ಸಿಂಧೂರ ಕಥನ ಒಳಗೊಂಡ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net