ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಸ್ಥಗಿತ

BYADAGI
Published on

ಬ್ಯಾಡಗಿ: ಇಲ್ಲಿನ ಒಣಮೆಣಸಿನಕಾಯಿ ಮಾರುಕಟ್ಟೆಯಲ್ಲಿ ಟೆಂಡರ್ ಪ್ರಕ್ರಿಯೆಯನ್ನು ಎಪಿಎಂಸಿ ಆಡಳಿತ ಮಂಡಳಿ ಹಾಗೂ ವರ್ತಕರ ಸಭೆಯಲ್ಲಿ ಮಾ. 19ರಿಂದ ಏ. 1ರ ವರೆಗೆ ವ್ಯವಹಾರ ಸ್ಥಗಿತಗೊಳಿಸಲು ನಿರ್ಧರಿಸಲಾಗಿದೆ ಎಂದು ಎಪಿಎಂಸಿ ಕಾರ್ಯದರ್ಶಿ ಸೋಮಶೇಖರ ಬಿ. ನ್ಯಾಮಗೌಡ್ರ ತಿಳಿಸಿದ್ದಾರೆ.

ನಾಡಿನ ವಿವಿಧ ಜಿಲ್ಲೆಗಳಲ್ಲಿ ಹಾಗೂ ಬೇರೆ ಬೇರೆ ರಾಜ್ಯಗಳಲ್ಲಿ ಕರೊನಾ ರೋಗ ಹರಡುವಿಕೆ ತಪ್ಪಿಸಲು ಮುಂಜಾಗ್ರತಾ ಕ್ರಮವಾಗಿ ಮಾರುಕಟ್ಟೆ ಬಂದ್ ಮಾಡಲಾಗಿದೆ. ರೈತರು ತಮ್ಮ ಬೆಳೆಯನ್ನು ಮಾರುಕಟ್ಟೆಗೆ ತರಬಾರದೆಂದು ಮನವಿ ಮಾಡಿದ್ದಾರೆ. ಇದಕ್ಕಾಗಿ ಮಾರುಕಟ್ಟೆಯ ಪ್ರಾಂಗಣದಲ್ಲಿ ಧ್ವನಿವರ್ಧಕದ ಮೂಲಕ ತಿಳಿಸಲಾಗಿದೆ. ರೈತರು ಮುಂದಿನ ಸರ್ಕಾರದ ನಿರ್ದೇಶನ ನೀಡುವವರೆಗೂ ನಿಯಮ ಪಾಲಿಸುವಂತೆ ಪತ್ರದಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net