COVID19 ಎಫೆಕ್ಟ್: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಟೋಲ್ ಶುಲ್ಕ ಸಂಗ್ರಹ ರದ್ದು

toll nitk
Published on

ನವದೆಹಲಿ: ಕರೊನಾ ವೈರಸ್​ COVID19 ಸೋಂಕು ಹರಡುವಿಕೆ ತಡೆಯಲು ಕೇಂದ್ರ ಸರ್ಕಾರ ದೇಶವ್ಯಾಪಿ 21 ದಿನಗಳ ಲಾಕ್​ಡೌನ್ ಘೋಷಿಸಿದೆ. ಇದರ ಬೆನ್ನಲ್ಲೇ ಅನೇಕ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಂಡಿರುವ ಸರ್ಕಾರ ಇದೀಗ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಟೋಲ್ ಶುಲ್ಕವನ್ನು ತಾತ್ಕಾಲಿಕವಾಗಿ ರದ್ದುಗೊಳಿಸಿದೆ.

ಕರೊನಾ ವೈರಸ್ ಸೋಂಕು ಹರಡುತ್ತಿರುವ ಈ ಸಂದರ್ಭದಲ್ಲಿ ತುರ್ತು ಸೇವೆಗಳ ಲಭ್ಯತೆಯನ್ನು ಸುಲಭಗೊಳಿಸುವ ನಿಟ್ಟಿನಲ್ಲಿ ಈ ಕ್ರಮ ಕೈಗೊಂಡಿರುವುದಾಗಿ ಕೇಂದ್ರ ರಸ್ತೆ ಸಾರಿಗೆ ಮತ್ತು ರಾಷ್ಟ್ರೀಯ ಹೆದ್ದಾರಿ ಇಲಾಖೆ ಹೇಳಿಕೊಂಡಿದೆ.

ಈ ಸಂಬಂಧ ಹೇಳಿಕೆ ನೀಡಿರುವ ಸಾರಿಗೆ ಸಚಿವ ನಿತಿನ್ ಗಡ್ಕರಿ, COVID19 ಸೋಂಕು ಹರಡುತ್ತಿರುವ ಕಾರಣ, ಈ ಸಂಕಷ್ಟ ಮಯ ಸನ್ನಿವೇಶವನ್ನು ಎದುರಿಸಲು ದೇಶ ಸಮರ ಸಾರಿದ್ದು, ಲಾಜಿಸ್ಟಿಕ್ಸ್​ಗೆ ತೊಂದರೆ ಆಗಬಾರದು ಎಂಬ ಕಾರಣಕ್ಕೆ ದೇಶಾದ್ಯಂತ ಎಲ್ಲ ಟೋಲ್​ಗಳನ್ನೂ ತಾತ್ಕಾಲಿಕವಾಗಿ ರದ್ದುಗೊಳಿಸಲಾಗಿದೆ ಎಂದು ಹೇಳಿದ್ದಾರೆ.

ತುರ್ತು ಸೇವೆಗಳ ಲಭ್ಯತೆ, ಉಳಿದ ತುರ್ತು ಸಾರಿಗೆ ಸಂಚಾರಕ್ಕೂ ಇದು ಅನುಕೂಲವಾಗಲಿದೆ. ಸಮಯವೂ ಉಳಿತಾಯವಾಗಲಿದೆ ಎಂದು ಸಚಿವ ಗಡ್ಕರಿ ಹೇಳಿಕೊಂಡಿದ್ದಾರೆ. (ಏಜೆನ್ಸೀಸ್)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net