2020 ಹೊಸವರ್ಷ: ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮದ ಅಧ್ಯಕ್ಷೆ ರತ್ನಪ್ರಭಾ ಅವರಿಂದ ಗೋಲ್ಡನ್ ಲೈಫಿಗೆ ಸೂಪರ್ ಐಡಿಯಾ

K RatnaPrabha 1 JAN 20 600 400
Published on

ಒಂದೊಳ್ಳೆ ಲೈಫು, ಚಿಕ್ಕದಾದ್ರೂ ಚೊಕ್ಕ ಕೆಲಸ. ಅದ್ದೂರಿ ಅಲ್ಲದಿದ್ರೂ ಗೌರವವಾಗಿ ಬದುಕಿ, ಸ್ವಲ್ಪ ಉಳಿಸಿ ಕೂಡಿಡುವಷ್ಟು

ಆದಾಯ…. ಇಂತಹ ಸಣ್ಣ ಸಣ್ಣ ಕನಸುಗಳನ್ನು ಹೊತ್ತ ಎಷ್ಟೋ ಜೀವಗಳು ಇವುಗಳ ನನಸಿನ ಬಗ್ಗೆ ಪ್ರತಿನಿತ್ಯ ಕನವರಿಸುತ್ತಿರುತ್ತವೆ. ತೋಳಲ್ಲಿ ಶಕ್ತಿ ಇದ್ದರೂ ಏನು ಮಾಡಬೇಕೆಂಬ ಗೊಂದಲ, ಗೋಜಲು. ಏನು ಮಾಡಿದರೆ ಅದೇನು ಆಗುವುದೋ ಎಂಬ ಭಯ, ದುಗುಡ. ಈ ಆತಂಕ, ಭಯವನ್ನು ಗಂಟು ಮೂಟೆ ಕಟ್ಟಿ ಪಕ್ಕಕ್ಕಿಟ್ಟು ಮುನ್ನಡೆದ ಅದೆಷ್ಟೋ ಮಂದಿ ಕೇವಲ ಆತ್ಮವಿಶ್ವಾಸ ಎಂಬ ಬಂಡವಾಳ ಹೂಡಿ ಕೋಟಿ ಕೋಟಿ ಗಳಿಸುತ್ತಿದ್ದಾರೆ. ಇಂತಹ ಹಲವು ಸ್ಪೂರ್ತಿದಾಯಕರ ಜತೆಗೆ ವಿಜಯವಾಣಿಯ ಅಪಾರ ಓದುಗರು ನ್ಯಾಯಮಾರ್ಗದಿಂದ ದುಡಿಮೆ ದುಪ್ಪಟ್ಟು ಮಾಡುವ ಬಗ್ಗೆ ತಮ್ಮ ಅನುಭವ, ಸಲಹೆಗಳನ್ನು ಧಾರೆ ಎರೆದಿದ್ದಾರೆ. ಹೊಸ ವರ್ಷದ ದಿನ ನೀವು ಓದುವ ಈ ಆತ್ಮವಿಶ್ವಾಸದ ಸೂತ್ರಗಳು ನಿಮ್ಮ ಜೀವನಕ್ಕೆ ಹೊಸ ದಾರಿಯಾಗಲಿ ಎಂಬುದು ವಿಜಯವಾಣಿ ಆಶಯ, ಕಳಕಳಿ.

ಮಹಿಳೆಯರು ಮನೆಯಲ್ಲೇ ಕುಳಿತು ತಾವು ತಯಾರಿಸುವ ಉತ್ಪನ್ನಗಳನ್ನು ಆನ್​ಲೈನ್ ಮೂಲಕ ಮಾರಾಟ ಮಾಡಲು ಗಮನ ಹರಿಸಬೇಕು. ಇದರಿಂದ ಕೈಗಾರಿಕೆ ಆರಂಭಕ್ಕೆ ಅನುಮತಿಗಾಗಿ ಅಲೆದಾಟ ತಪ್ಪುತ್ತದೆ. ಚಟ್ನಿಪುಡಿ, ಹಪ್ಪಳ, ಉಪ್ಪಿನಕಾಯಿ,

ಎಲೆಕ್ಟ್ರಾನಿಕ್ಸ್ ಉಪಕರಣ ತಯಾರಿಸಿ ಮಾರಾಟಕ್ಕಾಗಿ ಬೀದಿ ಬೀದಿ ಅಲೆಯುವ ಬದಲು, ಫೇಸ್​ಬುಕ್, ಟ್ವಿಟರ್, ಇನ್​ಸ್ಟಾಗ್ರಾಂ ಮೊದಲಾದವುಗಳನ್ನು ಬಳಸಬಹುದು. ಬೇಡಿಕೆ ಬಂದರೆ ಆನ್​ಲೈನ್ ಮೂಲಕವೇ ಮಾರಾಟ ಮಾಡಬಹುದು. ಇದು ಸುಲಭ ಹಾಗೂ ಕಡಿಮೆ ಬಂಡವಾಳದಲ್ಲಿ ನಡೆಯುತ್ತದೆ. ತಂತ್ರಜ್ಞಾನ ಬಳಸಿಕೊಳ್ಳಬೇಕು ಅಷ್ಟೇ.

| ಕೆ. ರತ್ನಪ್ರಭಾ ಅಧ್ಯಕ್ಷೆ, ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮ

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net