2020 ಹೊಸವರ್ಷ: ಗೋಲ್ಡನ್ ಲೈಫಿಗೆ ಸೂಪರ್ ಐಡಿಯಾ ಕೊಟ್ಟಿದ್ದಾರೆ ಐಪಿಎಸ್ ಅಧಿಕಾರಿ ರವಿ.ಡಿ.ಚೆನ್ನಣ್ಣವರ್

Ravi_D_Channannavar 1 JAN 20
Published on

ಒಂದೊಳ್ಳೆ ಲೈಫು, ಚಿಕ್ಕದಾದ್ರೂ ಚೊಕ್ಕ ಕೆಲಸ. ಅದ್ದೂರಿ ಅಲ್ಲದಿದ್ರೂ ಗೌರವವಾಗಿ ಬದುಕಿ, ಸ್ವಲ್ಪ ಉಳಿಸಿ ಕೂಡಿಡುವಷ್ಟು

ಆದಾಯ…. ಇಂತಹ ಸಣ್ಣ ಸಣ್ಣ ಕನಸುಗಳನ್ನು ಹೊತ್ತ ಎಷ್ಟೋ ಜೀವಗಳು ಇವುಗಳ ನನಸಿನ ಬಗ್ಗೆ ಪ್ರತಿನಿತ್ಯ ಕನವರಿಸುತ್ತಿರುತ್ತವೆ. ತೋಳಲ್ಲಿ ಶಕ್ತಿ ಇದ್ದರೂ ಏನು ಮಾಡಬೇಕೆಂಬ ಗೊಂದಲ, ಗೋಜಲು. ಏನು ಮಾಡಿದರೆ ಅದೇನು ಆಗುವುದೋ ಎಂಬ ಭಯ, ದುಗುಡ. ಈ ಆತಂಕ, ಭಯವನ್ನು ಗಂಟು ಮೂಟೆ ಕಟ್ಟಿ ಪಕ್ಕಕ್ಕಿಟ್ಟು ಮುನ್ನಡೆದ ಅದೆಷ್ಟೋ ಮಂದಿ ಕೇವಲ ಆತ್ಮವಿಶ್ವಾಸ ಎಂಬ ಬಂಡವಾಳ ಹೂಡಿ ಕೋಟಿ ಕೋಟಿ ಗಳಿಸುತ್ತಿದ್ದಾರೆ. ಇಂತಹ ಹಲವು ಸ್ಪೂರ್ತಿದಾಯಕರ ಜತೆಗೆ ವಿಜಯವಾಣಿಯ ಅಪಾರ ಓದುಗರು ನ್ಯಾಯಮಾರ್ಗದಿಂದ ದುಡಿಮೆ ದುಪ್ಪಟ್ಟು ಮಾಡುವ ಬಗ್ಗೆ ತಮ್ಮ ಅನುಭವ, ಸಲಹೆಗಳನ್ನು ಧಾರೆ ಎರೆದಿದ್ದಾರೆ. ಹೊಸ ವರ್ಷದ ದಿನ ನೀವು ಓದುವ ಈ ಆತ್ಮವಿಶ್ವಾಸದ ಸೂತ್ರಗಳು ನಿಮ್ಮ ಜೀವನಕ್ಕೆ ಹೊಸ ದಾರಿಯಾಗಲಿ ಎಂಬುದು ವಿಜಯವಾಣಿ ಆಶಯ, ಕಳಕಳಿ.
ಶಿಕ್ಷಕರಾಗಿ, ಪುಸ್ತಕ ಬರೆಯಿರಿ
ಪ್ರತಿವರ್ಷ 10-15 ಲಕ್ಷ ಮಂದಿ ಐಎಎಸ್, ಐಪಿಎಸ್ ಪರೀಕ್ಷೆ ಬರೆಯುತ್ತಾರೆ. ಇದರಲ್ಲಿ ಕೆಲವರಿಗಷ್ಟೇ ಯಶಸ್ಸು ಸಿಗುತ್ತದೆ. ಯಶಸ್ಸು ಸಿಗದೇ ಇರದವರು ಉತ್ತಮ ಶಿಕ್ಷಕರಾಗಿ ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಿ ನಡೆಸುವವರಿಗೆ ತರಬೇತಿ ಕೊಡಬಹುದು. ತಾವು ಅಧ್ಯಯನ ಮಾಡಿರುವ ಐಚ್ಛಿಕ ವಿಷಯವನ್ನು ಆಧರಿಸಿ ಪರೀಕ್ಷಾರ್ಥಿಗಳ ಅಧ್ಯಯನಕ್ಕೆ ಪುಸ್ತಕ ಬರೆಯಬಹುದು. ಖಾಸಗಿ ಕಂಪನಿ, ಕಾರ್ಖಾನೆಗಳಲ್ಲಿ ಸಂಪನ್ಮೂಲ ವ್ಯಕ್ತಿಯಾಗಬಹುದು. ವಿಷಯಾಧಾರಿತ ಪ್ರಾಜೆಕ್ಟ್​ಗಳಿಗೆ ಸಂಬಂಧಿಸಿದಂತೆ ಟೀಮ್ ಲೀಡರ್ ಆಗಬಹುದು.

| ರವಿ.ಡಿ.ಚೆನ್ನಣ್ಣವರ್ ಐಪಿಎಸ್ ಅಧಿಕಾರಿ

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net