More

    ವಾಣಿಜ್ಯ ಬಳಕೆಯ LPG ಸಿಲಿಂಡರ್​ ಬೆಲೆಯಲ್ಲಿ 100 ರೂ. ಹೆಚ್ಚಳ: ಎರಡು ತಿಂಗಳಲ್ಲಿ 2ನೇ ಬಾರಿ ದರ ಏರಿಕೆ

    ನವದೆಹಲಿ: ಸರ್ಕಾರಿ ಒಡೆತನದ ತೈಲ ಮಾರುಕಟ್ಟೆ ಕಂಪನಿಗಳು (ಒಎಂಸಿ) ನವೆಂಬರ್​ 1ರ ಬುಧವಾರದಂದು ತಕ್ಷಣದಿಂದಲೇ ಜಾರಿಗೆ ಬರುವಂತೆ ವಾಣಿಜ್ಯ ಬಳಕೆಯ ಎಲ್​ಪಿಜಿ ಸಿಲಿಂಡರ್ ಬೆಲೆಯಲ್ಲಿ 100 ರೂಪಾಯಿ ಹೆಚ್ಚಳ ಮಾಡಿದ್ದು, ಗ್ರಾಹಕರ ಜೇಬಿಗೆ ಹೊರೆಯಾಗಲಿದೆ.

    ಕಳೆದ ಎರಡು ತಿಂಗಳಲ್ಲಿ ವಾಣಿಜ್ಯ ಸಿಲಿಂಡರಿನ ಬೆಲೆಯಲ್ಲಿ ಎರಡು ಬಾರಿ ಅಧಿಕವಾಗಿದೆ. ಅಂದಹಾಗೆ ವಾಣಿಜ್ಯ ಮತ್ತು ಗೃಹಬಳಕೆಯ ಎಲ್​ಪಿಜಿ ಸಿಲಿಂಡರ್‌ಗಳ ದರಗಳು ಪ್ರತಿ ತಿಂಗಳ ಮೊದಲ ದಿನದಂದು ಮಾಸಿಕ ಪರಿಷ್ಕರಣೆಗಳಿಗೆ ಒಳಪಡುತ್ತವೆ. ಅದರಂತೆ ವಾಣಿಜ್ಯ ಬಳಕೆಯ ಸಿಲಿಂಡರ್​ ಬೆಲೆ 100 ರೂ. ದುಬಾರಿಯಾಗಿದ್ದರೆ, ಗೃಹಬಳಕೆಯ ಎಲ್​ಪಿಜಿ ಸಿಲಿಂಡರ್​ ದರದಲ್ಲಿ ಯಾವುದೇ ವ್ಯತ್ಯಾಸ ಕಂಡುಬಂದಿಲ್ಲ.

    ಇತ್ತೀಚಿನ ದರ ಪರಿಷ್ಕರಣೆಯೊಂದಿಗೆ 19 ಕೆಜಿ ತೂಕದ ವ್ಯಾಣಿಜ್ಯ ಬಳಕೆಯ ಎಲ್​ಪಿಜಿ ಸಿಲಿಂಡರ್​ ಬೆಲೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 1731 ರೂ.ನಿಂದ 1833 ರೂಪಾಯಿಗೆ ಏರಿಕೆಯಾಗಿದೆ. ಮುಂಬೈನಲ್ಲಿ 1785.50 ರೂ., ಕೋಲ್ಕತದಲ್ಲಿ 1943 ರೂ., ಚೆನ್ನೈನಲ್ಲಿ 1999.50 ರೂ., ಮತ್ತು ಬೆಂಗಳೂರಿನಲ್ಲಿ 1914.50 ರೂಪಾಯಿಗೆ ಏರಿಕೆಯಾಗಿದೆ.

    ಅಕ್ಟೋಬರ್‌ 1ರಂದು ತೈಲ ಕಂಪನಿಗಳು ವಾಣಿಜ್ಯ ಬಳಕೆ ಎಲ್​ಪಿಜಿ ಸಿಲಿಂಡರ್​ ದರದಲ್ಲಿ 209 ರೂ.ಗಳಷ್ಟು ಏರಿಕೆ ಮಾಡಿತ್ತು. ಕಳೆದ ತಿಂಗಳು 19 ಕೆಜಿ ತೂಕದ ಸಿಲಿಂಡರ್​ ಬೆಲೆ ಮುಂಬೈನಲ್ಲಿ 1,684 ರೂ., ಕೋಲ್ಕತ್ತಾದಲ್ಲಿ 1,839.50 ರೂ. ಮತ್ತು ಚೆನ್ನೈನಲ್ಲಿ 1,898 ರೂ. ಇತ್ತು.

    ಆದಾಗ್ಯೂ, ಗೃಹಬಳಕೆಯ ಎಲ್‌ಪಿಜಿ ಬೆಲೆಯಲ್ಲಿ ಯಾವುದೇ ವ್ಯತ್ಯಾಸ ಕಂಡುಬಂದಿಲ್ಲ. ದೆಹಲಿಯಲ್ಲಿ 14.2 ಕೆಜಿ ಸಿಲಿಂಡರ್‌ಗೆ 903 ರೂ. ಇದೆ. ಬೆಂಗಳೂರಿನಲ್ಲಿ 905 ರೂಪಾಯಿ ಇದೆ. (ಏಜೆನ್ಸೀಸ್​)

    ಬೆಳಗ್ಗೆ ಎದ್ದ ತಕ್ಷಣ ಧೂಮಪಾನ ಮಾಡ್ತೀರಾ? ಹಾಗಾದರೆ ಈ ಕಾಯಿಲೆ ಬರಬಹುದು ಎಚ್ಚರ!

    ಕನ್ನಡಕ್ಕೆ ಬಲ ಕಾಯ್ದೆ ಶೀಘ್ರ ಜಾರಿ: ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಅಧಿನಿಯಮ ಈ ತಿಂಗಳಲ್ಲೇ ಅನುಷ್ಠಾನ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts