More

    ಹಿಂದುಳಿದ ವರ್ಗಗಳ ಆಯೋಗ ಅಧ್ಯಕ್ಷರಾಗಿ ಜಯಪ್ರಕಾಶ ಹೆಗ್ಡೆ ನೇಮಕ

    ಮಂಗಳೂರು: ಮಾಜಿ ಸಚಿವ, ಬಿಜೆಪಿ ಮುಖಂಡ ಕೆ. ಜಯಪ್ರಕಾಶ ಹೆಗ್ಡೆ ರಾಜ್ಯ ಸರ್ಕಾರದ ಹಿಂದುಳಿದ ವರ್ಗಗಳ ಆಯೋಗ ಅಧ್ಯಕ್ಷರಾಗಿ ಕೆ.ಜಯಪ್ರಕಾಶ್ ಹೆಗ್ಡೆ ನೇಮಕಗೊಂಡಿದ್ದಾರೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೋಮವಾರ ಈ ನೇಮಕಾತಿ ಆದೇಶ ಹೊರಡಿಸಿದ್ದಾರೆ.

    ಕುಂದಾಪುರ ತಾಲೂಕಿನ ಕೊರ್ಗಿಯವರಾದ ಹೆಗ್ಡೆಯವರು ನಿವೃತ್ತ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾಗಿದ್ದ ಕೆ.ಚಂದ್ರಶೇಖರ ಹೆಗ್ಡೆಯವರ ಪುತ್ರ. ಉಚ್ಚ ನ್ಯಾಯಾಲಯದಲ್ಲಿ ವಕೀಲರಾಗಿ ಕಾರ್ಯನಿರ್ವಹಿಸಿದ್ದಾರೆ. ಹಿಂದಿನ ಬ್ರಹ್ಮಾವರ ವಿಧಾನಸಭಾ ಕ್ಷೇತ್ರದಿಂದ 2 ಬಾರಿ ಪಕ್ಷೇತರ ಶಾಸಕರಾಗಿ ಚುನಾಯಿತರಾದ ಹೆಗ್ಗಳಿಕೆ ಹೆಗ್ಡೆಯವರದ್ದು. ಬಳಿಕ ಜನತಾದಳ ಸೇರ್ಪಡೆಗೊಂಡ ಅವರು 1997ರಲ್ಲಿ ಜೆ.ಎಚ್. ಪಟೇಲರ ನೇತೃತ್ವದ ಜನತಾದಳ ಸರ್ಕಾರದಲ್ಲಿ ಮೀನುಗಾರಿಕಾ ಸಚಿವರಾಗಿ ಸೇವೆ ಸಲ್ಲಿಸಿದರು. 2009ರಲ್ಲಿ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರಕ್ಕೆ ನಡೆದ ಉಪ ಚುನಾವಣೆಯಲ್ಲಿ ಕಾಂಗ್ರಸ್‌ನಿಂದ ಸ್ಪರ್ಧಿಸಿ ಬಿಜೆಪಿಯ ಸದಾನಂದ ಗೌಡ ವಿರುದ್ಧ ಸೋತಿದ್ದರು. 2012ರಲ್ಲಿ ನಡೆದ ಉಪಚುನಾವಣೆಯಲ್ಲಿ ಇದೇ ಕ್ಷೇತ್ರದಿಂದ ಲೋಕಸಭೆಗೆ ಆಯ್ಕೆಯಾಗಿದ್ದರು. ಬಿಜೆಪಿ ಚುನಾವಣಾ ಪ್ರಣಾಳಿಕೆ ಸಮಿತಿ ಸದಸ್ಯರಾಗಿದ್ದರು. ಆ ಬಳಿಕ ಅವರು ಬಿಜೆಪಿ ಸೇರ್ಪಡೆಯಾಗಿದ್ದರೂ ಸೂಕ್ತ ಸ್ತಾನಮಾನ ಸಿಕ್ಕಿರಲಿಲ್ಲ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts