More

    ಆಯುಕ್ತರ ಕಚೇರಿ ನಿರ್ಮಾಣಕ್ಕೆ 17 ಕೋಟಿ ರೂ.

    ಬೆಳಗಾವಿ: ನಗರದಲ್ಲಿ 17 ಕೋಟಿ ರೂ. ವೆಚ್ಚದಲ್ಲಿ ಸುಸಜ್ಜಿತ ಪೊಲೀಸ್ ಆಯುಕ್ತರ ಕಚೇರಿ ನಿರ್ಮಿಸಲಾಗುವುದು ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದರು. ನಗರದ ಕಾಲೇಜು ರಸ್ತೆ ಮಾರ್ಗದಲ್ಲಿರುವ ಪೊಲೀಸ್ ಲೈನ್‌ನಲ್ಲಿ ನಗರ ಪೊಲೀಸ್ ಆಯುಕ್ತರ ಕಚೇರಿ ನಿರ್ಮಾಣಕ್ಕೆ ಮಂಗಳವಾರ ಭೂಮಿಪೂಜೆ ನೆರವೇರಿಸಿ ಮಾತನಾಡಿದ ಅವರು, ಆಯುಕ್ತರ ಕಚೇರಿ ನಿರ್ಮಿಸಬೇಕು ಎಂಬುದು ಬಹಳ ದಿನಗಳ ಬೇಡಿಕೆ ಇತ್ತು.

    ಇಂದು ಈಡೇರುತ್ತಿದೆ. ನಗರದ ಮಧ್ಯದಲ್ಲೇ ಎರಡು ಎಕರೆ ಜಾಗವೂ ದೊರೆತಿದೆ. ನಿಗದಿತ ಕಾಲಮಿತಿಯಲ್ಲಿ ಕಟ್ಟಡದ ಕಾಮಗಾರಿ ಪೂರ್ಣಗೊಳಿಸಲಾಗುವುದು ಎಂದರು. ಕಟ್ಟಡದ ನೀಲಿನಕ್ಷೆ ವೀಕ್ಷಿಸಿದ ಅವರು, ಗುತ್ತಿಗೆದಾರರ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು. ನೀವು ನಿರ್ಮಿಸುತ್ತಿರುವುದು ಹಾಸ್ಟೆಲ್ ಅಲ್ಲ.

    ಪೊಲೀಸ್ ಆಯುಕ್ತರ ಕಚೇರಿ ಎನ್ನುವುದನ್ನು ಮರೆಯಬಾರದು ಎಂದ ಅವರು, ಸಣ್ಣಪುಟ್ಟ ಬದಲಾವಣೆಗೆ ನಿರ್ದೇಶನ ನೀಡಿದರು. ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ, ಬಿಜೆಪಿ ಗ್ರಾಮಾಂತರ ಜಿಲ್ಲಾ ಘಟಕದ ಅಧ್ಯಕ್ಷ ಸಂಜಯ ಪಾಟೀಲ, ಕೆಎಸ್‌ಆರ್‌ಪಿ ಎಡಿಜಿಪಿ ಅಲೋಕಕುಮಾರ್, ಉತ್ತರ ವಲಯ ಐಜಿಪಿ ರಾಘವೇಂದ್ರ ಸುಹಾಸ್, ನಗರ ಪೊಲೀಸ್ ಆಯುಕ್ತ ಡಾ. ಕೆ.ತ್ಯಾಗರಾಜನ್, ಜಿಲ್ಲಾ ಎಸ್‌ಪಿ ಲಕ್ಷ್ಮಣ ನಿಂಬರಗಿ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts