More

    ಸುಭದ್ರ ದೇಶ ನಿರ್ಮಾಣಕ್ಕೆ ಪಣತೊಡಿ

    ಹನೂರು: ಪ್ರತಿಯೊಬ್ಬರೂ ಸಂವಿಧಾನದ ಹಕ್ಕು ಮತ್ತು ಕರ್ತವ್ಯವನ್ನು ಪಾಲಿಸುವುದರ ಜತೆಗೆ ಸುಭದ್ರ ದೇಶ ನಿರ್ಮಾಣಕ್ಕೆ ಪಣ ತೊಡಬೇಕು ಎಂದು ಸಾಲೂರು ಬೃಹನ್ಮಠದ ಪೀಠಾಧಿಪತಿ ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮೀಜಿ ತಿಳಿಸಿದರು.

    ತಾಲೂಕಿನ ಮಲೆಮಹದೇಶ್ವರ ಬೆಟ್ಟದ ಸಾಲೂರು ಬೃಹನ್ಮಠದ ಆವರಣದಲ್ಲಿ ಶುಕ್ರವಾರ ಆಯೋಜಿಸಿದ್ದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.

    ಡಾ.ಅಂಬೇಡ್ಕರ್ ಅವರು ರಚಿಸಿರುವ ಸಂವಿಧಾನದ ಅಂಶಗಳ ಆಧಾರದ ಮೇಲೆ ಸರ್ಕಾರ ಆಡಳಿತ ನಡೆಸುತ್ತಿದೆ. ಹಾಗಾಗಿ ಸರ್ವರ ಒಳಿತನ್ನು ಬಯಸಿ ಸಮಾನತೆಯನ್ನು ತಂದುಕೊಟ್ಟ ಸಂವಿಧಾನ ಕೇವಲ ಒಂದು ಸಮುದಾಯದ ಗ್ರಂಥವಲ್ಲ. ಅದು ವಿಧಿ-ವಿಧಾನಗಳನ್ನು ಹೊಂದಿರುವ ಇಡೀ ದೇಶದ ಪವಿತ್ರ ಗ್ರಂಥ. ಹಾಗಾಗಿ ಪ್ರತಿಯೊಬ್ಬರೂ ಸಂವಿಧಾನದ ಆಶಯಗಳನ್ನು ಪಾಲಿಸುವುದರ ಜತೆಗೆ ಸದೃಢ ದೇಶ ನಿರ್ಮಾಣಕ್ಕೆ ಹಾಗೂ ದೇಶದ ಐಕ್ಯತೆಗೆ ಪಣ ತೊಡಬೇಕಿದೆ ಎಂದು ಹೇಳಿದರು. ಬಳಿಕ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

    ಈ ಸಂದರ್ಭದಲ್ಲಿ ಗುಂಡೇಗಾಲ ಸಾಲೂರು ಶಾಖಾ ಮಠದ ಶ್ರೀ ಮಲ್ಲಿಕಾರ್ಜುನ ಸ್ವಾಮೀಜಿ, ಶ್ರೀ ಮಲೆಮಹದೇಶ್ವರ ಸ್ವಾಮಿ ಕ್ಷೇತ್ರ ಪ್ರಾಧಿಕಾರದ ಕಾರ್ಯದರ್ಶಿ ಸರಸ್ವತಿ, ಪ್ರಾಂಶುಪಾಲ ಮಹದೇವ ಪ್ರಭುಸ್ವಾಮಿ, ಮುಖ್ಯ ಶಿಕ್ಷಕರಾದ ಶಿವಕುಮಾರಸ್ವಾಮಿ, ಕೆಂಪಸಿದ್ದು, ಪ್ರಾಧಿಕಾರದ ನೌಕರರು, ಶ್ರೀ ಮಠದ ಭಕ್ತರು, ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಗ್ರಾಮಸ್ಥರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts