More

    ಭ್ರಷ್ಟಾಚಾರ ನಿರ್ಮೂಲನೆಗೆ ಬದ್ಧರಾಗಿ: ಎಂ.ಎಸ್.ದಿವಾಕರ

    ಹೊಸಪೇಟೆ: ದೇಶದ ಅಭಿವೃದ್ಧಿಗೆ ಮಾರಕವಾಗಿರುವ ಭ್ರಷ್ಟಾಚಾರದ ನಿರ್ಮೂಲನೆಗೆ ಅಧಿಕಾರಿಗಳು ಕಂಕಣಬದ್ಧರಾಗಬೇಕು ಎಂದು ಜಿಲ್ಲಾಧಿಕಾರಿ ಎಂ.ಎಸ್. ದಿವಾಕರ ಕಿವಿಮಾತು ಹೇಳಿದರು.
    ಜಿಲ್ಲಾಡಳಿತ ಹಾಗೂ ಕರ್ನಾಟಕ ಲೋಕಾಯುಕ್ತ ಸಂಸ್ಥೆಯ ಸಹಯೋಗದಲ್ಲಿ ಶನಿವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಭ್ರಷ್ಟಾಚಾರ ವಿರುದ್ಧ ಜಾಗೃತಿ ಸಪ್ತಾಹವನ್ನು ಉದ್ಘಾಟಿಸಿ ಅವರು ಮಾತನಾಡಿದರು.
    ಭ್ರಷ್ಟಾಚಾರದಿಂದ ದೇಶದ ಆರ್ಥಿಕತೆ, ಅಭಿವೃದ್ಧಿಗೆ ಹಿನ್ನೆಡೆ ಯಾಗುತ್ತದೆ. ಈ ಹಿನ್ನೆಲೆಯಲ್ಲಿ ಭ್ರಷ್ಟಾಚಾರದ ನಿರ್ಮೂಲನೆ ಅತ್ಯವಶ್ಯಕವಾಗಿದ್ದು, ಪ್ರತಿಯೊಬ್ಬ ಅಧಿಕಾರಿಗಳು ಪ್ರಾಮಾಣಿಕವಾಗಿ ಕೆಲಸ ಮಾಡಿ, ದೇಶ, ರಾಜ್ಯ ಹಾಗೂ ಜಿಲ್ಲೆಯ ಅಭಿವೃದ್ಧಿಗೆ ಶ್ರಮಿಸಬೇಕು. ಸರ್ವೋಚ್ಛ ನ್ಯಾಯಾಲಯದ ನಿರ್ದೇಶನದಂತೆ ಭ್ರಷ್ಟಾಚಾರ ನಿರ್ಮೂಲನೆಗಾಗಿ ಎಲ್ಲಾ ಇಲಾಖೆಗಳಲ್ಲಿ ವಿಜಿಲೆನ್ಸ್ ರಚನೆಗೆ ಚಿಂತನೆ ನಡೆಸಲಾಗಿದೆ. ಈ ದಿಸೆಯಲ್ಲಿ ಭ್ರಷ್ಟಾಚಾರ ತಡೆಗೆ ನಮ್ಮಲ್ಲಿರುವ ಲೋಕಾಯುಕ್ತ ವ್ಯವಸ್ಥೆ ಇತರೆ ರಾಜ್ಯಗಳಿಗೆ ಮಾದರಿಯಾಗಿದೆ ಎಂದು ಮೆಚ್ಚುಗೆ ಸೂಚಿಸಿದರು.

    ಭ್ರಷ್ಟಾಚಾರ ನಿರ್ಮೂಲನೆಗೆ ಬದ್ಧರಾಗಿ: ಎಂ.ಎಸ್.ದಿವಾಕರ

    ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಲ್. ಶ್ರೀಹರಿಬಾಬು ಮಾತನಾಡಿ, ಭ್ರಷ್ಟಾಚಾರ ವಿರುದ್ಧ ಜಾಗೃತಿ ಕಾರ್ಯಕ್ರಮಗಳು ಮೇಲಿಂದ ಮೇಲೆ ನಡೆಯಬೇಕು. ಇದರಿಂದ ಸಾರ್ವಜನಿಕರು ಮತ್ತು ಅಧಿಕಾರಿಗಳ ವಲಯದಲ್ಲಿ ಅರಿವು ಹೆಚ್ಚುತ್ತದೆ. ಸಾಮಾನ್ಯವಾಗಿ ಲೋಕಾಯುಕ್ತ ಟ್ರಾö್ಯಪ್ ಬಗ್ಗೆ ಅಷ್ಟೇ ತಿಳಿದಿರುತ್ತೆ. ಅನಾವಶ್ಯಕವಾಗಿ ಅಧಿಕಾರಿಗಳಿಗೆ ಬ್ಲಾಕ್ ಮೇಲ್ ಮಾಡುವುದು, ತೊಂದರೆ ಕೊಡುವ ಪ್ರಕರಣಕ್ಕೆ ರಿವರ್ಸ್ ಟ್ರಾö್ಯ ಪ್ ಮಾಡಬಹುದು. ಈ ಬಗ್ಗೆ ಜಾಗೃತಿ ಕಾರ್ಯಕ್ರಮಗಳ ಮೂಲಕ ಜನರಿಗೆ ಮಾಹಿತಿ ನೀಡಬೇಕು ಎಂದು ಸಲಹೆ ನೀಡಿದರು.

    ಕರ್ನಾಟಕ ಲೋಕಾಯುಕ್ತ ಬಳ್ಳಾರಿ ಪೊಲೀಸ್ ಅಧೀಕ್ಷಕ ಎಂ.ಎನ್. ಶಶಿಧರ ಮಾತನಾಡಿ, ಸರ್ಕಾರದ ಹಲವಾರು ಯೋಜನೆಗಳು ಅರ್ಹ ಫಲಾನುಭವಿಗಳಿಗೆ ದೊರೆಯದೇ ಮಧ್ಯವರ್ತಿಗಳ ಪಾಲಾಗುತ್ತಿದೆ. ಅಧಿಕಾರಿಗಳು ಪ್ರಾಮಾಣಿಕವಾಗಿ ಕೆಲಸ ಮಾಡಿದಾಗ ಮಾತ್ರ ಅರ್ಹರಿಗೆ ಯೋಜನೆ ತಲುಪಲಿದ್ದು, ದೇಶದ ಅಭಿವೃದ್ಧಿ ಸಾಧ್ಯವಾಗುತ್ತದೆ. ಭ್ರಷ್ಟಾಚಾರದ ವಿರುದ್ಧ ಜಾಗೃತಿ ಮೂಡಿಸಲು `ಭ್ರಷ್ಟಾಚಾರ ವಿರೋಧಿಸಿ; ರಾಷ್ಟçಕ್ಕೆ ಬದ್ಧರಾಗಿ’ ಎಂಬ ಘೋಷ ವಾಕ್ಯದೊಂದಿಗೆ ಈ ಬಾರಿ ಜಾಗೃತಿ ಸಪ್ತಾಹ ಹಮ್ಮಿಕೊಳ್ಳಲಾಗಿದೆ ಎಂದು ವಿವರಿಸಿದರು.

    ಇದೇ ವೇಳೆ ಭ್ರಷ್ಟಾಚಾರ ವಿರುದ್ಧ ಜಾಗೃತಿ ಸಪ್ತಾಹದಲ್ಲಿ ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ ವಿವಿಧ ಇಲಾಖೆಗಳ ಅಧಿಕಾರಿಗಳು, ನೌಕರರಿಗೆ ಪ್ರತಿಜ್ಞಾವಿಧಿ ಬೋಧಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts