More

    ಅಭಿವೃದ್ಧಿ ಹೊಂದಿದ ದೇಶಕ್ಕೆದೃಢಸಂಕಲ್ಪ

    ನವಲಗುಂದ: ಪ್ರಧಾನಮಂತ್ರಿ ನರೇಂದ್ರ ಮೋದಿ ಭಾರತವನ್ನು 2047ರ ಹೊತ್ತಿಗೆ ಅಭಿವೃದ್ಧಿ ಹೊಂದಿದ ದೇಶವಾಗಿ ಪರಿವರ್ತಿಸುವ ದೃಢಸಂಕಲ್ಪ ಮಾಡಿದ್ದಾರೆ ಎಂದು ಬಿಜೆಪಿ ರೈತ ಮೋರ್ಚಾ ರಾಜ್ಯ ಉಪಾಧ್ಯಕ್ಷ ಷಣ್ಮುಖ ಗುರಿಕಾರ ಹೇಳಿದರು.
    ಮಂಗಳವಾರ ಪಟ್ಟಣದ ಗಣಪತಿ ದೇವಸ್ಥಾನ ಆವರಣದಲ್ಲಿ ಹಮ್ಮಿಕೊಂಡಿದ್ದ ವಿಕಸಿತ ಭಾರತ ಸಂಕಲ್ಪ ಯಾತ್ರೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
    ಕೇಂದ್ರ ಸರ್ಕಾರ ನಾಗರಿಕರ ಅಭಿವೃದ್ಧಿಗೆ ನೂರಾರು ಯೋಜನೆಗಳನ್ನು ರೂಪಿಸಿದೆ. ಈ ಯೋಜನೆಗಳ ಲಾಭ ಪಡೆದ ಫಲಾನುಭವಿಗಳು ದೇಶದ ಪ್ರತಿ ಮನೆಯಲ್ಲೂ ಇದ್ದಾರೆ, ಕೇಂದ್ರ ಸರ್ಕಾರದ ಯೋಜನೆಗಳು ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ತಲುಪಿಸುವುದು ಕೇಂದ್ರ ಸರ್ಕಾರದ ಗುರಿಯಾಗಿದೆ ಎಂದರು.
    ನಗರ ಘಟಕ ಅಧ್ಯಕ್ಷ ಅಣ್ಣಪ್ಪ ಬಾಗಿ ಮಾತನಾಡಿ, ಮುದ್ರಾ, ಜನಧನ, ಪಿ.ಎಂ. ವಿಶ್ವಕರ್ಮ ಯೋಜನೆ, ಉಜ್ವಲ, ಕೃಷಿ ಸಮ್ಮಾನ್, ಅನ್ನ ಭಾಗ್ಯ ಸೇರಿ ವಿವಿಧ ಯೋಜನೆಗಳ ಮಾಹಿತಿ ಎಲ್​ಇಡಿ ಪರದೆಯ ವಾಹನಗಳ ಮೂಲಕ ಗ್ರಾಪಂ ಹಾಗೂ ನಗರ ಪ್ರದೇಶದಲ್ಲಿ ಸಂಚರಿಸಿ ಜನರಿಗೆ ಜಾಗೃತಿ ಮೂಡಿಸುತ್ತಿದೆ ಎಂದರು.
    ಬ್ಯಾಂಕ್ ಆಫ್ ಬರೋಡಾ ವ್ಯವಸ್ಥಾಪಕ ಮಹೇಶ ಗುಜಮಾಗಡಿ ಮಾತನಾಡಿದರು. ಇದೇ ವೇಳೆ ಪಿಎಂ ಸ್ವನಿಧಿ ಯೋಜನೆಗಳ ಅರ್ಹ ಫಲಾನುಭವಿಗಳಿಗೆ ಸಾಂಕೇತಿಕವಾಗಿ ಆದೇಶ ಪತ್ರ ವಿತರಿಸಿದರು.
    ಜಗದೀಶ ಕಣವಿ, ವೆಂಕಟೇಶ ಜೋಗನ್ನವರ, ಎಂ.ಆರ್. ಕುಲಕರ್ಣಿ, ಎಸ್.ಬಿ ಪಾಟೀಲ, ಬಸವರಾಜ ಕಟ್ಟಿಮನಿ, ಶರಣಪ್ಪ ಹಕ್ಕರಕಿ, ರಿಯಾಜ್ ಅಹಮ್ಮದ್ ನಾಶಿಪುಡಿ, ಮಂಜು ಸುಣಗಾರ ಇದ್ದರು. ಬಸನಗೌಡ ಪಾಟೀಲ ನಿರೂಪಿಸಿದರು, ಬಸವರಾಜ ಕಾತರಕಿ ವಂದಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts