More

    ನೂತನ ತಾಲೂಕು ಅಭಿವೃದ್ಧಿಗೆ ಬದ್ಧ : ರಸ್ತೆ ಸುಧಾರಣೆ ಕಾಮಗಾರಿಗೆ ಭೂಮಿಪೂಜೆ

    ದೇವರಹಿಪ್ಪರಗಿ: ನೂತನ ತಾಲೂಕಿನ ಸರ್ವತೋಮುಖ ಅಭಿವೃದ್ಧಿಯೇ ನಮ್ಮ ಸರ್ಕಾರದ ಗುರಿಯಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಉಮೇಶ ಕತ್ತಿ ಹೇಳಿದರು.

    ಪಟ್ಟಣದ 1008 ಜಗದ್ಗುರು ಪಂಚಾಚಾರ್ಯ ಕಲ್ಯಾಣ ಮಂಟಪದಲ್ಲಿ ಲೋಕೋಪಯೋಗಿ ಇಲಾಖೆಯಿಂದ ಶಿರಾಡೋಣ-ಲಿಂಗಸೂರ ರಾಜ್ಯ ಹೆದ್ದಾರಿ 41ರ 84 ಕಿಮೀ ನಿಂದ 88.80 ಕಿ.ಮೀ ರಸ್ತೆ ಸುಧಾರಣೆ ಕಾಮಗಾರಿಗೆ ಮಂಗಳವಾರ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.

    ರಾಜ್ಯದಲ್ಲೇ ನಾಲ್ಕು ತಾಲೂಕುಗಳನ್ನು ಒಳಗೊಂಡ ಕ್ಷೇತ್ರ ಮತ್ತೊಂದಿಲ್ಲ. ಇಂತಹ ದೊಡ್ಡ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಗಾಗಿ ಸಾವಿರಾರು ಕೋಟಿ ರೂ. ಅನುದಾನ ತಂದು ಅಭಿವೃದ್ಧಿಪಡಿಸುತ್ತಿರುವ ಶಾಸಕ ಸೋಮನಗೌಡ ಪಾಟೀಲ ಸಾಸನೂರ ಅವರ ಕಾರ್ಯಶ್ಲಾಘನೀಯ ಎಂದರು.

    ಈ ಭಾಗದ ರೈತರ ಬಹು ನಿರೀಕ್ಷಿತ ಗುತ್ತಿ ಬಸವಣ್ಣ ಏತ ನೀರಾವರಿ ಕಾಲುವೆ ಖುದ್ದು ಪರಿಶೀಲಿಸಿ ನೀರು ಬಿಡಲು ಸೂಚಿಸಲಾಗಿದೆ. ಜಿಲ್ಲೆಯ ನೀರಾವರಿ ಕ್ಷೇತ್ರದ ಅಭಿವೃದ್ಧಿಗೆ ಸರ್ಕಾರದಿಂದ ಸಿಗಬೇಕಾದ ಸಹಾಯ ಸಹಕಾರಕ್ಕೆ ಉಸ್ತುವಾರಿ ಸಚಿವನಾಗಿ ಶಾಸಕರಿಗೆ ಸಾಥ್ ನೀಡುತ್ತೇನೆ. ತಿಂಗಳಿಗೊಮ್ಮೆಯಾದರೂ ಕ್ಷೇತ್ರದಲ್ಲಿ ಸಂಚರಿಸಿ ಅಭಿವೃದ್ಧಿ ಕಾರ್ಯಗಳಿಗೆ ಚುರುಕು ಮುಟ್ಟಿಸುವ ಕೆಲಸ ಮಾಡುತ್ತೇನೆ ಎಂದು ತಿಳಿಸಿದರು.

    ಶಾಸಕ ಸೋಮನಗೌಡ ಪಾಟೀಲ ಸಾಸನೂರ ಮಾತನಾಡಿ, ರಾಜ್ಯ ಸರ್ಕಾರದಿಂದ ನೀರಾವರಿ ಕ್ಷೇತ್ರದ ಅಭಿವೃದ್ಧಿ, ರಸ್ತೆ ಅಭಿವೃದ್ಧಿ, 1.5 ಸಾವಿರ ಕೋಟಿ ರೂ. ನೀರಾವರಿ ಕ್ಷೇತ್ರದ ಅಭಿವೃದ್ಧಿಗೆ ಸೇರಿ ಸಾವಿರಾರು ಕೋಟಿ ರೂ. ಅನುದಾನ ನೀಡಿದೆ. ನೂತನ ತಾಲೂಕಿಗೆ ಇನ್ನೂ ಹೆಚ್ಚಿನ ಅನುದಾನವನ್ನು ಸರ್ಕಾರದ ಮಟ್ಟದಲ್ಲಿ ಸಹಾಯ ಸಹಕಾರದಿಂದ ಕ್ಷೇತ್ರದ ಅಭಿವೃದ್ಧಿಗೆ ಸಹಕರಿಸಿ, ಗುತ್ತಿ ಬಸವಣ್ಣ ಏತ ನೀರಾವರಿ ಯೋಜನೆಯ ಕಾಲುವೆಗಳಿಗೆ ನೀರು ಹರಿಸುವ ಮೂಲಕ ಈ ಭಾಗದ ರೈತರಿಗೆ ಅನುಕೂಲ ಕಲ್ಪಿಸಲಾಗುತ್ತಿದೆ ಎಂದು ಹೇಳಿದರು.

    ಸಿಂದಗಿ ಶಾಸಕ ರಮೇಶ ಭೂಸನೂರ. ಜಿಲ್ಲಾಧಿಕಾರಿಗಳಾದ ವಿಜಯಮಹಾಂತೇಶ ದಾನಮ್ಮನವರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಚ್.ಡಿ. ಆನಂದಕುಮಾರ, ಜಿಪಂ ಸಿಇಒ ರಾಹುಲ ಶಿಂಧೆ, ತಹಸೀಲ್ದಾರ್ ಸಿ.ಎ. ಗುಡದಿನ್ನಿ, ಲೋಕೋಪಯೋಗಿ ಅಧಿಕಾರಿ ಸಿ. ಬಿ. ಚಿಕ್ಕಲಗೆ, ತಾರಾನಾಥ ನಾಯಕ, ತಾಪಂ ಇಒ ಸುನೀಲ ಮದ್ದೀನ್, ಬಿಜೆಪಿ ಮಂಡಲ ಅಧ್ಯಕ್ಷ ಭೀಮನಗೌಡ ಸಿದ್ದರೆಡ್ಡಿ, ಸಿದ್ದು ಬುಳ್ಳಾ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts