More

    ಬಂಗಾರದ ಬಬಲೇಶ್ವರವಾಗಿಸಲು ಬದ್ಧ

    ವಿಜಯಪುರ: ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ. ಪಾಟೀಲರು ಮಾಡಿರುವ ಅಭಿವೃದ್ಧಿ ಕಾರ್ಯಗಳನ್ನು ಪರಿಗಣಿಸಿ ಬಬಲೇಶ್ವರ ಮತಕ್ಷೇತ್ರದ ಮತದಾರರು ಅವರನ್ನು ಆಯ್ಕೆಮಾಡಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಸುನೀಲಗೌಡ ಪಾಟೀಲ ಹೇಳಿದ್ದಾರೆ.

    ಮಾಧ್ಯಮ ಪ್ರಕಟಣೆಯಲ್ಲಿ ಅವರು, ಎಂ.ಬಿ. ಪಾಟೀಲರು ಬಬಲೇಶ್ವರವನ್ನು ನಂದನವನವನ್ನಾಗಿ ಈಗಾಗಲೇ ಮಾಡಿದ್ದು, ಮುಂದಿನ ದಿನಗಳಲ್ಲಿ ಬಂಗಾರದ ಬಬಲೇಶ್ವರವನ್ನಾಗಿ ಮಾಡಲು ಸೂಕ್ತಕ್ರಮವನ್ನು ತೆಗೆದುಕೊಳ್ಳುತ್ತಾರೆ. ವಿರೋಧಿಗಳ ನಾಟಕಕ್ಕೆ ಮತದಾರರು ಮನ್ನಣೆ ನೀಡದೆ ಅಭಿವೃದ್ಧಿಯನ್ನು ಬೆಂಬಲಿಸಿದ್ದಾರೆ. ಪಾಟೀಲರ ಗೆಲುವಿಗೆ ಶ್ರಮಿಸಿದ ಪಕ್ಷದ ಕಾರ್ಯಕರ್ತರು, ಮುಖಂಡರು, ಅಭಿಮಾನಿಗಳು ಹಾಗೂ ಮತನೀಡಿದ 93923 ಮತದಾರರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ.
    ಜಲಕ್ರಾಂತಿಯಿಂದ ಅಭಿವೃದ್ಧಿಹೊಂದಿರುವ ಬಬಲೇಶ್ವರದಲ್ಲಿ ಕ್ಷೀರಕ್ರಾಂತಿ, ಫುಡ್‌ಪಾರ್ಕ್, ರೈತರನ್ನು ಕೃಷಿ ಉದ್ಯಮಿಗಳನ್ನಾಗಿ ಮಾಡಲು ಯೋಜನೆ ರೂಪಿಸಲಾಗಿದೆ. ರೈತರು, ಮಹಿಳೆಯರು ಮತ್ತು ಯುವಕರು ಸ್ವಾವಲಂಬಿ ಬದುಕು ಸಾಗಿಸಲು ಆರ್ಥಿಕವಾಗಿ ಸಬಲರಾಗಲು ಕ್ರಮ ಕೈಗೊಳ್ಳಲಿದ್ದೇವೆ ಎಂದು ತಿಳಿಸಿದ್ದಾರೆ.

    ಕಾಂಗ್ರೆಸ್ ಪಕ್ಷ ಈಗಾಗಲೇ ಘೋಷಿಸಿರುವ ಗೃಹಜ್ಯೋತಿ, ಗೃಹಲಕ್ಷ್ಮಿ, ಅನ್ನಭಾಗ್ಯ, ಯುವನಿಧಿ, ಮಹಿಳೆಯರಿಗೆ ಸರಕಾರಿ ಬಸ್ಸುಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ನೀಡುವ ಯೋಜನೆಗಳು ಕೆಲವೇ ದಿನಗಳಲ್ಲಿ ಜಾರಿಗೆ ಬರಲಿವೆ. ಇದರಿಂದ ಮಹಿಳಾ ಸಮುದಾಯ ಸೇರಿದಂತೆ ನಮ್ಮ ಬಬಲೇಶ್ವರ ಮತಕ್ಷೇತ್ರದ ಜನರ ಸರ್ವಾಂಗೀಣ ಅಭಿವೃದ್ಧಿಗೆ ನೆರವಾಗಲಿದೆ ಎಂದು ಪಾಟೀಲರು ತಿಳಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts