More

    ಪಿಸಿ ಆ್ಯಂಡ್ ಪಿಎನ್‌ಡಿಟಿ ಕಾಯ್ದೆ ಅನುಷ್ಠಾನಕ್ಕೆ ಸಮಿತಿ ರಚನೆ

    ಬೆಂಗಳೂರು: ರಾಜ್ಯದಲ್ಲಿ ಗರ್ಭಾವಸ್ಥೆ ಮತ್ತು ಪ್ರಸವಪೂರ್ವ ರೋಗ ನಿರ್ಣಯ ತಂತ್ರಗಳು (ಪಿಸಿ ಆ್ಯಂಡ್ ಪಿಎನ್‌ಡಿಟಿ) ಕಾಯ್ದೆ ಪರಿಣಾಮಕಾರಿ ಅನುಷ್ಠಾನಕ್ಕಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ರಾಜ್ಯ ಕಾರ್ಯಪಡೆ ಸಮಿತಿ (ಟಾಸ್ಕ್ ಫೋರ್ಸ್) ರಚಿಸಿ ಅದೇಶ ಹೊರಡಿಸಿದೆ.

    ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆಯುಕ್ತರ ಅಧ್ಯಕ್ಷತೆಯಲ್ಲಿ, ರಾಷ್ಟ್ರೀಯ ಆರೋಗ್ಯ ಅಭಿಯಾನದ ನಿರ್ದೇಶಕರು ಉಪಾಧ್ಯಕ್ಷರಾಗಿ ಹಾಗೂ ಆರೋಗ್ಯ ಇಲಾಖೆಯ ನಿರ್ದೇಶಕರು, ಯೋಜನಾ ನಿರ್ದೇಶಕರು (ಆರ್‌ಸಿಎಚ್), ಉಪ ನಿರ್ದೇಶಕರು (ಕುಟುಂಬಕಲ್ಯಾಣ) ಇವರನ್ನು ಸದಸ್ಯರನ್ನಾಗಿ ಮತ್ತು ಇಲಾಖೆಯ ಉಪನಿರ್ದೇಶಕರು (ವೈದ್ಯಕೀಯ ಕಾಯ್ದೆ) ಇವರನ್ನು ಸಂಚಾಲಕ ಸದಸ್ಯರನ್ನಾಗಿ ನೇಮಿಸಲಾಗಿದೆ.

    ಇವರು ಪಿಸಿ ಆ್ಯಂಡ್ ಪಿಎನ್‌ಡಿಟಿ ಕಾಯ್ದೆ ಅನ್ವಯ ರಾಜ್ಯ ಸಕ್ಷಮ ಪ್ರಾಧಿಕಾರ ಮತ್ತು ಜಿಲ್ಲಾ ಸಕ್ಷಮ ಪ್ರಾಧಿಕಾರ, ರಾಜ್ಯ ಮತ್ತು ಜಿಲ್ಲಾ ಸಲಹಾ ಸಮಿತಿ ತಪಾಸಣಾ ಮತ್ತು ಮೇಲ್ವಿಚಾರಣಾ ಸಮಿತಿಗಳ ನಿಯತಕಾಲಿಕ ಪರಿಶೀಲನೆ ಮತ್ತು ಮೇಲ್ವಿಚಾರಣೆ, ನಡೆಸಿ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯನ್ನು ಮಾಡಬೇಕು. ಅದರ ವರದಿಯನ್ನು ರಾಜ್ಯ ಮೇಲ್ವಿಚಾರಣಾ ಸಮಿತಿಗೆ ಸಲ್ಲಿಸಬೇಕು. ಗುಪ್ತ ಕಾರ್ಯಾಚರಣೆಗೆ ನಿಗದಿಪಡಿಸಿರುವ ಗುರಿಗಳ ಪ್ರಗತಿ ಪರಿಶೀಲನೆ ನಡೆಸಿ ಎರಡನೇ ತ್ರೈಮಾಸಿಕ ವೈದ್ಯಕೀಯ ಗರ್ಭಪಾತಗಳ ಪರಿಶೀಲನೆಯಲ್ಲಿ ಪಿಸಿ ಆ್ಯಂಡ್ ಪಿಎನ್‌ಡಿಟಿ ಕಾಯ್ದೆ ಮತ್ತು ನಿಯಮಗಳಲ್ಲಿ ತಿದ್ದುಪಡಿ ಅವಶ್ಯವಿದ್ದಲ್ಲಿ ರಾಜ್ಯ ಮೇಲ್ವಿಚಾರಣಾ ಸಮಿತಿಗೆ ಶಿಫಾರಸು ಮಾಡುವಂತೆ ಸೂಚಿಸಲಾಗಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts