More

    ವೃತ್ತಿಪರ ಕೋರ್ಸ್​ಗಳಿಗೆ ಏ.22, 23ರಂದು ಸಾಮಾನ್ಯ ಪ್ರವೇಶ ಪರೀಕ್ಷೆ

    ಬೆಂಗಳೂರು: 2020-21ನೇ ಸಾಲಿನ ಶೈಕ್ಷಣಿಕ ವರ್ಷಕ್ಕೆ ನ್ಯಾಚುರೋಪಥಿ, ಎಂಜಿನಿಯರಿಂಗ್, ಯೋಗ, ಕೃಷಿ ವಿಜ್ಞಾನ ಮೊದಲಾದ ವೃತ್ತಿಪರ ಕೋರ್ಸ್​ಗಳಿಗೆ ಏ.22 ಮತ್ತು 23ರಂದು ಸಾಮಾನ್ಯ ಪ್ರವೇಶ ಪರೀಕ್ಷೆ ನಡೆಯಲಿದ್ದು, ಕರ್ನಾಟಕ ಪರೀಕ್ಷಾ ಪ್ರಾಧಿಕಾರ ವೇಳಾಪಟ್ಟಿ ಬಿಡುಗಡೆ ಮಾಡಿದೆ.

    ಮೊದಲ ವರ್ಷದ ಅಥವಾ ಮೊದಲ ಸೆಮಿಸ್ಟರ್ ಎಂಜಿನಿಯರಿಂಗ್, ತಂತ್ರಜ್ಞಾನ, ಯೋಗ ಮತ್ತು ನ್ಯಾಚುರೋಪಥಿ, ಕೃಷಿ ವಿಜ್ಞಾನ, ಪಶು ವೈದ್ಯಕೀಯ ಮತ್ತು ಪಶುಸಂಗೋಪನೆ, ಬಿ.ಎಸ್ಸಿ ಕೃಷಿ, ಅರಣ್ಯ ವಿಜ್ಞಾನ, ರೆಷ್ಮೆ ಕೃಷಿ, ತೋಟಗಾರಿಕೆ, ಕೃಷಿ ಜೈವಿಕ ತಂತ್ರಜ್ಞಾನ, ಸಮುದಾಯ ವಿಜ್ಞಾನ, ಕೃಷಿ ಇಂಜಿನಿಯರಿಂಗ್, ಬಯೊ ಟೆಕ್ನಾಲಜಿ, ಹೈನುಗಾರಿಕೆ ತಂತ್ರಜ್ಞಾನ, ಬಿ.ಎಫ್.ಎಸ್ಸಿ(ಮೀನುಗಾರಿಕೆ) ಆಹಾರ ವಿಜ್ಞಾನ-ತಂತ್ರಜ್ಞಾನ, ಕೃಷಿ ಮಾರುಕಟ್ಟೆ -ಸಹಕಾರ, ಬಿ-ಫಾರ್ವ, ಡಿ-ಫಾರ್ವ ಕೋರ್ಸ್​ಗಳ ಪ್ರವೇಶಕ್ಕೆ ಪರೀಕ್ಷೆ ನಡೆಯಲಿದೆ. ಯೋಗ , ನ್ಯಾಚುರೋಪಥಿ ಕೋರ್ಸ್ ಪ್ರವೇಶಕ್ಕೆ ನೀಟ್ ಬೇಕಿಲ್ಲವಾದ್ದರಿಂದ ಸಿಇಟಿ ಮೂಲಕ ಪ್ರವೇಶ ಪಡೆಯಬಹುದಾಗಿದೆ.

    ಪರೀಕ್ಷೆಗಳ ವಿವರ

    ಏ.22ರ ಬೆಳಗ್ಗೆ 10.30ರಿಂದ 11.50ರವರೆಗೆ ಜೀವಶಾಸ್ತ್ರ, ಮಧ್ಯಾಹ್ನ 2.30ರಿಂದ 3.50ರವರೆಗೆ ಗಣಿತ ಪರೀಕ್ಷೆ ನಡೆಯಲಿದೆ. 23ರ ಬೆಳಗ್ಗೆ 10.30ರಿಂದ 11.50ರವರೆಗೆ ಭೌತಶಾಸ್ತ್ರ, ಮಧ್ಯಾಹ್ನ 2.30ರಿಂದ 3.50ರವರೆಗೆ ರಸಾಯನಶಾಸ್ತ್ರ ಪರೀಕ್ಷೆ ನಡೆಯಲಿದೆ. ಏ.24ರ ಬೆಳಗ್ಗೆ 11.30ರಿಂದ ಮಧ್ಯಾಹ್ನ 12.30ರವರೆಗೆ ಹೊರನಾಡು ಮತ್ತು ಗಡಿನಾಡು ಕನ್ನಡಿಗ ಅಭ್ಯರ್ಥಿಗಳಿಗೆ ಬೆಂಗಳೂರು ಕೇಂದ್ರದಲ್ಲಿ ಕನ್ನಡ ಭಾಷಾ ಪರೀಕ್ಷೆ ನಡೆಯಲಿದೆ.

    ವೆಬ್​ಸೈಟ್ ನೋಡಿ

    ವೈದ್ಯಕೀಯ, ದಂತವೈದ್ಯಕೀಯ, ಆಯುಷ್(ಆಯುರ್ವೆದ, ಯುನಾನಿ, ಹೋಮಿಯೋಪಥಿ) ಕೋರ್ಸ್​ಗಳಿಗೆ ಅಭ್ಯರ್ಥಿಗಳು ರಾಷ್ಟ್ರೀಯ ಪರೀಕ್ಷಾ ಪ್ರಾಧಿಕಾರ(ಎನ್​ಟಿಎ) ನಡೆಸುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ(ನೀಟ್)- 2020ರಲ್ಲಿ ಹಾಜರಾಗಬೇಕು. ಆರ್ಕಿಟೆಕ್ಚರ್ ಕೋರ್ಸ್​ನ ಪ್ರವೇಶಕ್ಕಾಗಿ ಅಭ್ಯರ್ಥಿಗಳು ಕೌನ್ಸಿಲ್ ಆಫ್ ಆರ್ಕಿಟೆಕ್ಚರ್ ನಡೆಸುವ ನ್ಯಾಷನಲ್ ಆಪ್ಟಿಟ್ಯೂಡ್ ಟೆಸ್ಟ್ ಇನ್ ಆರ್ಕಿಟೆಕ್ಚರ್ ಪರೀಕ್ಷೆ ಅಥವಾ ಜೆಇಇ ಪೇಪರ್-2 ಹಾಜರಾಗಬೇಕು. ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಪ್ರಾಧಿಕಾರದ ವೆಬ್​ಸೈಟ್ http://kea.kar.nic.in ಗೆ ಭೇಟಿ ನೀಡಿ ಮಾಹಿತಿ ಪಡೆಯಬಹುದಾಗಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಸಿನಿಮಾ

    Latest Posts