More

    ಕಾಂಗ್ರೆಸ್‌ನಿಂದ ಸಾಮಾನ್ಯರಿಗೂ ಆದ್ಯತೆ

    ಲಕ್ಷ್ಮೇಶ್ವರ: ರಾಜ್ಯದಲ್ಲಿ ಆಡಳಿತದಲ್ಲಿರುವ ಕಾಂಗ್ರೆಸ್ ಪಕ್ಷ ಎಲ್ಲ ವರ್ಗದ ಜನರಿಗೆ ಆದ್ಯತೆ ನೀಡುವ ಮೂಲಕ ಸರ್ವರನ್ನೂ ಸಮಾನತೆಯಿಂದ ಕಾಣುತ್ತಿದೆ. ಶ್ರೀಮಂತರಿಗೆ ಮಾತ್ರ ಅನೂಕೂಲ ಕಲ್ಪಿಸುವುದು ನಮ್ಮ ಪಕ್ಷದ ಸಿದ್ಧಾಂತವಲ್ಲ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಸುಜಾತಾ ದೊಡ್ಡಮನಿ ಪ್ರತಿಪಾದಿಸಿದರು.
    ಸೋಮವಾರ ಸಮೀಪದ ಶಿಗ್ಲಿ ಗ್ರಾಮದಲ್ಲಿ ಹಾವೇರಿ- ಗದಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಆನಂದಸ್ವಾಮಿ ಗಡ್ಡದೇವರಮಠ ಅವರ ಚುನಾವಣೆ ಪ್ರಚಾರ ಸಭೆಯಲ್ಲಿ ಮಾತನಾಡಿದರು.
    ಕಾಂಗ್ರೆಸ್ ಎಲ್ಲ ವರ್ಗಗಳ ಅಭಿವೃದ್ಧಿಗಾಗಿ ಹತ್ತಾರು ಯೋಜನೆಗಳನ್ನು ಜಾರಿಗೆ ತಂದಿದೆ. ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ ನೇತೃತ್ವದ ಸರ್ಕಾರ ಮತದಾರರಿಗೆ ನೀಡಿದ್ದ ಆಶ್ವಾಸನೆಗಳನ್ನು ಈಡೇರಿಸಿ ನುಡಿದಂತೆ ನಡೆದಿದೆ. ಗ್ಯಾರಂಟಿಗಳಿಂದ ಸಾಕಷ್ಟು ಕುಟುಂಬಗಳಿಗೆ ಅನೂಕೂಲವಾಗಿವೆ ಎಂದ ಅವರು, ಪಕ್ಷದ ಅಭ್ಯರ್ಥಿಯಾಗಿ ಉತ್ಸಾಹಿ ಯುವಕ ಕಣದಲ್ಲಿದ್ದಾನೆ. ಅವನನ್ನು ಬೆಂಬಲಿಸಿ ಹೆಚ್ಚಿನ ಮತಗಳ ಅಂತರದಿಂದ ಆಯ್ಕೆ ಮಾಡಬೇಕು ಎಂದು ಮನವಿ ಮಾಡಿದರು.
    ಅಭ್ಯರ್ಥಿ ಆನಂದಸ್ವಾಮಿ ಗಡ್ಡದೇವರಮಠ ಮಾತನಾಡಿ, ಹಿರಿಯರು, ಕಾರ್ಯಕರ್ತರ ಆಶೀರ್ವಾದದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದೇನೆ. ಪಕ್ಷದ ಗೆಲುವಿಗಾಗಿ ಯುವಕರು ಹಗಲಿರುಳು ಕೆಲಸ ಮಾಡುತ್ತಿದ್ದಾರೆ. ಎಲ್ಲ ಕಡೆ ಯುವಶಕ್ತಿ ಪಕ್ಷವನ್ನು ಸೇರ್ಪಡೆಯಾಗುತ್ತಿದೆ. ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಗೆಲುವಿಗಾಗಿ ಎಲ್ಲರೂ ಒಂದಾಗಿ ಒಗ್ಗಟ್ಟಾಗಿ ದುಡಿಯುತ್ತಿದ್ದಾರೆ ಎಂದರು.
    ಅಧ್ಯಕ್ಷತೆಯನ್ನ ದುಂಡವ್ವ ಹಾದಿಮನಿ ವಹಿಸಿದ್ದರು. ಮಾಜಿ ಶಾಸರಾದ ಜಿ.ಎಸ್. ಗಡ್ಡದೇವರಮಠ, ರಾಮಣ್ಣ ಲಮಾಣಿ, ರಾಮಕೃಷ್ಣ ದೊಡ್ಡಮನಿ, ಜಿಪ ಮಾಜಿ ಅಧ್ಯಕ್ಷ ಎಸ್.ಪಿ. ಬಳಿಗಾರ, ಹುಮಾಯೂನ್ ಮಾಗಡಿ, ಡಿ.ಕೆ. ಹೊನ್ನಪ್ಪನವರ, ಜಿ.ಆರ್. ಕೊಪ್ಪದ, ರಾಜರತ್ನ ಹುಲಗೂರ, ರಾಮಣ್ಣ ಲಮಾಣಿ(ಶಿಗ್ಲಿ), ವಿ.ಜಿ. ಪಡಗೇರಿ, ರಾಜು ಮಡಿವಾಳರ, ಸೋಮಣ್ಣ ಬೆಟಗೇರಿ, ಕೋಟೆಪ್ಪ ವರ್ದಿ, ಯಲ್ಲಪ್ಪ ತಳವಾರ, ಬಸವರಡ್ಡಿ ಹನುಮರಡ್ಡಿ, ದೇವರರಾಜ ತೋಟದ, ಸಿದ್ರಾಮಣ್ಣ ಗುಂಜಳ, ರಫಿಕ್ ಕಲಬುರ್ಗಿ, ರಮೇಶ ಬಾಕಿ, ಶಿವಪ್ಪ ಕುರಿತು, ಭಾಗ್ಯಶ್ರೀ ಬಾಬಣ್ಣ, ಸುರೇಶ ಸ್ವಾದಿ, ಸಿದ್ದು ಸ್ವಾಮಿ, ಬಾಬುಸಾಬ್ ಸುಂಕದ, ರಾಜು ಓಲೇಕಾರ, ಸಂತೋಷ ತಾಂದಳೆ ಇತರರಿದ್ದರು.

    ಕೇಂದ್ರ ಸರ್ಕಾರದ 10 ವರ್ಷಗಳ ಸುಳ್ಳು ಭರವಸೆಗಳಿಂದ ಮತದಾರರು ಬೇಸತ್ತಿದ್ದಾರೆ. ಹೀಗಾಗಿ ಈ ಬಾರಿ ಕಾಂಗ್ರೆಸ್ ಬೆಂಬಲಿಸಲು ಮುಂದಾಗಿದ್ದಾರೆ. ವಿಧಾನಸಭೆ ಚುನಾವಣೆಗೆ ಮುನ್ನ ನೀಡಿದ್ದ ಪಂಚ ಗ್ಯಾರಂಟಿಗಳನ್ನು ಈಡೇರಿಸುವುದು ಕಾಂಗ್ರೆಸ್‌ನ ಬದ್ಧತೆಯಾಗಿದೆ. ಹಾವೇರಿ, ಗದಗ ಜಿಲ್ಲೆಯ ಎಲ್ಲ ಗ್ರಾಮಗಳಲ್ಲಿಯೂ ಕಾಂಗ್ರೆಸ್‌ಗೆ ಉತ್ತಮ ಬೆಂಬಲ ವ್ಯಕ್ತವಾಗುತ್ತಿದೆ.
    -ಆನಂದಸ್ವಾಮಿ ಗಡ್ಡದೇವರಮಠ, ಹಾವೇರಿ- ಗದಗ ಕಾಂಗ್ರೆಸ್ ಅಭ್ಯರ್ಥಿ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts