More

    ಕಾಮನ್‌ವೆಲ್ತ್ ಗೇಮ್ಸ್ ಪದಕ ವಿಜೇತ ಗುರುರಾಜ ಪೂಜಾರಿ ಹುಟ್ಟೂರಿಗೆ ಆಗಮನ, ಜಿಲ್ಲಾಡಳಿತದಿಂದ ಗೌರವ

    ಡುಪಿ: ಇಂಗ್ಲೆಂಡ್ ಬರ್ಮಿಂಗ್ ಹ್ಯಾಂನಲ್ಲಿ ನಡೆಯುತ್ತಿರುವ ಕಾಮನ್‌ವೆಲ್ತ್ ಗೇಮ್ಸ್ ಕ್ರೀಡಾಕೂಟದಲ್ಲಿ ಭಾರತವನ್ನು ಪ್ರತಿನಿಧಿಸಿ ವೇಯ್ಟ ಲಿಪ್ಟಿಂಗ್ ಸ್ಪರ್ಧೆಯಲ್ಲಿ ಕಂಚಿನ ಪದಕ ಪಡೆದು ಉಡುಪಿಗೆ ಆಗಮಿಸಿದ ಕುಂದಾಪುರದ ಗುರುರಾಜ ಪೂಜಾರಿ ಅವರನ್ನು ಜಿಲ್ಲಾಡಳಿತದ ವತಿಯಿಂದ ಅಜ್ಜರಕಾಡು ಮಹಾತ್ಮಗಾಂಧಿ ಮೈದಾನದಲ್ಲಿ ಗೌರವಿಸಲಾಯಿತು. ಗುರುರಾಜ ಪೂಜಾರಿಯನ್ನು ಜಿಲ್ಲಾಧಿಕಾರಿ ಕೂರ್ಮಾರಾವ್ ಸ್ವಾಗತಿಸಿದರು.

    ಜಿಲ್ಲಾಡಳಿತದ ಅಭಿನಂದನೆ ಸ್ವೀಕರಿಸಿ ಮಾತನಾಡಿದ ಗುರುರಾಜ ಪೂಜಾರಿ, ಕಾಮನ್​ವೆಲ್ತ್​​ ಗೇಮ್ಸ್‌ನಲ್ಲಿ ರಜತ ಪದಕ ಪಡೆಯುವ ಗುರಿಯಿಂದ 4 ವರ್ಷಗಳಿಂದ ಕಠಿಣ ಪರಿಶ್ರಮಪಟ್ಟಿದ್ದೇನೆ. ತೀವ್ರ ಪೈಪೋಟಿಯ ನಡುವೆ ವೇಯ್ಟ್​​ ಲಿಪ್ಟಿಂಗ್ 61 ಕೆಜಿ ವಿಭಾಗದಲ್ಲಿ ದೇಶಕ್ಕೆ ಇದೇ ಮೊದಲ ಬಾರಿಗೆ ಕಂಚಿನ ಪದಕ ಲಭಿಸಿದೆ. ಯಾವುದೇ ಕ್ರೀಡೆಯಲ್ಲಿ ಕೌಟುಂಬಿಕ ಹಿನ್ನೆಲೆ ಪರಿಣಾಮ ಬೀರುವುದಿಲ್ಲ. ಕಠಿಣ ಅಭ್ಯಾಸದಿಂದ ಗುರಿ ಸಾಧನೆ ಸಾಧ್ಯ. ಬಾಲ್ಯದಿಂದಲೇ ಒಂದು ಕ್ರೀಡೆಯಲ್ಲಿ ಹೆಚ್ಚಿನ ಗಮನಹರಿಸಿದರೆ ಯಶಸ್ಸು ಕಾಣಬಹುದು ಎಂದು ಹೇಳಿದರು.

    ಇದನ್ನೂ ಓದಿ: ಕಾಮನ್‌ವೆಲ್ತ್ ಗೇಮ್ಸ್, ಭಾರತಕ್ಕೆ ಮತ್ತೊಂದು ಪದಕ; ಕಂಚು ಗೆದ್ದ ಕುಂದಾಪುರದ ಗುರುರಾಜ್ ಪೂಜಾರಿ..

    ಅಪರ ಜಿಲ್ಲಾಧಿಕಾರಿ ವೀಣಾ ಬಿ.ಎನ್., ಪೌರಾಯುಕ್ತ ಡಾ.ಉದಯ ಶೆಟ್ಟಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಡಾ.ರೋಶನ್ ಕುಮಾರ್ ಶೆಟ್ಟಿ ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts