ಶಿವಮೊಗ್ಗದಲ್ಲಿ ಮತ್ತೆ ಕೋಮುಸಂಘರ್ಷ; 2 ಗುಂಪುಗಳ ಮಧ್ಯೆ ಗಲಾಟೆ, ಕಲ್ಲು ತೂರಾಟ, ಚಾಕು ಇರಿತ..

Pub crime
Published on

ಶಿವಮೊಗ್ಗ: ಮಲೆನಾಡಿನ ಶಿವಮೊಗ್ಗದಲ್ಲಿ ಮತ್ತೆ ಕೋಮುಸಂಘರ್ಷ ಉಂಟಾಗಿದ್ದು, ಎರಡು ಗುಂಪುಗಳ ಮಧ್ಯೆ ಗಲಾಟೆ, ಕಲ್ಲು ತೂರಾಟ, ಚಾಕು ಇರಿತ ನಡೆದಿದೆ. ಶಿವಮೊಗ್ಗದ ಭದ್ರಾವತಿಯಲ್ಲಿ ಈ ಘಟನೆ ನಡೆದಿದ್ದು, ಪೊಲೀಸ್ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ.

ಭದ್ರಾವತಿಯ ಗಾಂಧಿ ವೃತ್ತದಲ್ಲಿ ಘಟನೆ ಎರಡು ಗುಂಪುಗಳ ನಡುವೆ ನಡೆದ ಗಲಾಟೆಯಲ್ಲಿ ಅರವಿಂದ್, ಗೌತಮ್ ಎಂಬುವರಿಗೆ ಗಾಯಗಳಾಗಿದ್ದು, ಅವರನ್ನು ಭದ್ರಾವತಿ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಆಸ್ಪತ್ರೆ ಬಳಿ ಮತ್ತೆ ಎರಡು ಕೋಮಿನ ನಡುವೆ ಗಲಾಟೆ, ಕಲ್ಲು ತೂರಾಟ ನಡೆದಿದೆ. ಅಲ್ಲದೆ ಹರೀಶ್ ಎಂಬುವನಿಗೆ ಗಾಯವಾಗಿದ್ದು, ರಿಜ್ವಾನ್ ಎಂಬಾತನ ಚಾಕು ಇರಿತಕ್ಕೆ ಒಳಗಾಗಿದ್ದಾನೆ. ಆತನನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಗಲಾಟೆ ನಡೆದ ಸ್ಥಳಕ್ಕೆ ಭದ್ರಾವತಿ ಹಳೇನಗರ ಪೊಲೀಸರು ಭೇಟಿ ನೀಡಿ, ಗುಂಪುಗಳನ್ನು ಚದುರಿಸಿದ್ದು, ಪರಿಸ್ಥಿತಿಯನ್ನು ಅವಲೋಕಿಸಿ ಮುಂದಿನ ಕ್ರಮಕೈಗೊಂಡಿದ್ದಾರೆ. ಅಲ್ಲದೆ ಕಾನೂನು ಸುವ್ಯವಸ್ಥೆಗಾಗಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net