More

    ಕೇಂದ್ರದ ಯೋಜನೆಗಳನ್ನು ಜನರಿಗೆ ತಲುಪಿಸಿ

    ಹೊಳೆಹೊನ್ನೂರು: ಪ್ರಧಾನಿ ಮೋದಿ ಅವರ ಯೋಜನೆಗಳನ್ನು ಪ್ರತಿಯೊಂದು ಮನೆಗೆ ತಲುಪಿಸಲು ಕಾರ್ಯಕರ್ತರು ಶ್ರಮಿಸಬೇಕು ಎಂದು ವಿಧಾನ ಪರಿಷತ್ ಸದಸ್ಯ ಡಿ.ಎಸ್.ಅರುಣ್ ತಿಳಿಸಿದರು.

    ಸಮೀಪದ ಅರಹತೊಳಲು ಕೈಮರದ ಬಿಜೆಪಿ ಕಾರ್ಯಾಲಯದಲ್ಲಿ ಹೊಳೆಹೊನ್ನೂರು, ಆನವೇರಿ ಹಾಗೂ ಅರಹತೊಳಲು ಮಹಾಶಕ್ತಿ ಕೇಂದ್ರಗಳ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಕ್ಷೇತ್ರದಲ್ಲಿ ಸಂಸದ ಬಿ.ವೈ.ರಾಘವೇಂದ್ರ ಕೈಗೊಂಡ ಅಭಿವೃದ್ಧಿ ಕಾರ್ಯಗಳು, ಸ್ವಚ್ಛ ಭಾರತ್ ಅಭಿಯಾನ, ಮಹಿಳಾ ಮೀಸಲಾತಿ, ಜಲ ಜೀವನ್ ಮಿಷನ್ ಯೋಜನೆ, ರೈಲ್ವೆ ಕಾಮಗಾರಿ ಸೇರಿದಂತೆ ಕೇಂದ್ರ ಸರ್ಕಾರದ ಜನಪರ ಯೋಜನೆಗಳನ್ನು ಜನರಿಗೆ ತಲುಪಿಸಿ ಎಂದು ಕಾರ್ಯಕರ್ತರಿಗೆ ಕರೆ ನೀಡಿದರು.
    ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಐದು ಗ್ಯಾರಂಟಿ ಯೋಜನೆಗೆ 50 ಸಾವಿರ ಕೋಟಿ ರೂ. ಅನುದಾನ ನೀಡಿದ್ದು ಬಿಟ್ಟರೆ ಜಿಲ್ಲೆಗೆ ಯಾವುದೇ ಅನುದಾನ ನೀಡಿಲ್ಲ. ಅಧಿಕಾರಕ್ಕೆ ಬಂದು ಒಂದು ವರ್ಷವಾದರೂ ಅಭಿವೃದ್ಧಿಯ ಬಗ್ಗೆ ಒಂದೇ ಒಂದು ಮಾತನಾಡದೇ ಕಾಲಹರಣ ಮಾಡುತ್ತಿದೆ. ಸರ್ಕಾರದ ಬೊಕ್ಕಸ ಖಾಲಿಯಾಗಿದ್ದು, ಜನರ ದಿಕ್ಕು ತಪ್ಪಿಸಲು ಕೇಂದ್ರದ ಮೇಲೆ ಬೊಟ್ಟು ಮಾಡುತ್ತಿದೆ. ಈ ಚುನಾವಣೆಯ ನಂತರ ಗ್ಯಾರಂಟಿ ಯೋಜನೆಗಳು ನಿಲ್ಲಿಸುವುದುರಲ್ಲಿ ಯಾವುದೇ ಸಂದೇಹವಿಲ್ಲ. ಈಗಾಗಲೇ ರಾಜ್ಯ ಸರ್ಕಾರ ದಿವಾಳಿಯಾಗಿದೆ ಎಂದು ದೂರಿದರು.
    ಕೇಂದ್ರ ಸರ್ಕಾರವು ಜನರಿಗೆ ಶಾಶ್ವತ ಯೋಜನೆಗಳನ್ನು ನೀಡುವಲ್ಲಿ ಸಫಲವಾಗುತ್ತಿದೆ. ಇದರೊಂದಿಗೆ ದೇಶದ ಆರ್ಥಿಕತೆಯನ್ನು ಕುಸಿಯದಂತೆ ನಿಭಾಯಿಸುವಲ್ಲಿ ಪ್ರಮುಖ ಪಾತ್ರವಹಿಸಿದೆ. ಮೋದಿ ಆಡಳಿತದಲ್ಲಿ ರಾಷ್ಟ್ರ ಸುಭಿಕ್ಷವಾಗಿದೆ ಎಂದರು.
    ಮಂಡಲ ಅಧ್ಯಕ್ಷ ಮಲ್ಲೇಶ್, ಮಾಜಿ ಶಾಸಕ ಕುಮಾರಸ್ವಾಮಿ, ವಿಧಾನಸಭಾ ಕ್ಷೇತ್ರದ ಸಂಚಾಲಕ ವಿರೂಪಾಕ್ಷಪ್ಪ, ಜಿಲ್ಲಾ ಚುನಾವಣಾ ಪ್ರಮುಖ ಶ್ರೀನಿವಾಸ್, ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಯೋಗೀಶ್, ಬಿಜೆಪಿ ಜಿಲ್ಲಾ ಕಾರ್ಯದರ್ಶಿ ರೇಖಾ ಬೋಸ್ಲೆ, ಮಂಡಲ ಪ್ರಧಾನ ಕಾರ್ಯದರ್ಶಿ ಚಂದ್ರು, ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಅರಕೆರೆ ಸಾಗರ್ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts