More

    ಪೌರಕಾರ್ಮಿಕರ ಕಾರ್ಮಿಕರಿಗೆ ಸೌಲಭ್ಯ ಒದಗಿಸಿ

    ಕೂಡ್ಲಿಗಿ: ಕಾಂಗ್ರೆಸ್ ಆರನೇ ಗ್ಯಾರಂಟಿ ಯೋಜನೆಯನ್ನು ಜಾರಿಗೊಳಿಸಲು ಆಗ್ರಹಿಸಿ ಭಾರತ ಕಮ್ಯೂನಿಸ್ಟ್ ಪಕ್ಷ (ಸಿಪಿಐ) ತಾಲೂಕು ಘಟಕದ ಪದಾಧಿಕಾರಿಗಳು ಪಟ್ಟಣದ ತಹಸಿಲ್ ಕಚೇರಿ ಮುಂಭಾಗ ಶನಿವಾರ ನಡೆಸಿದರು.

    ಆರನೇ ಗ್ಯಾರಂಟಿ ಯೋಜನೆ ಜಾರಿಗೊಳಿಸಿ

    ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿದ್ದರಿಂದ ಜನರು ಬೆಲೆ ಏರಿಕೆಯಿಂದ ತತ್ತರಿಸಿ ಹೋಗಿರುವುದನ್ನು ತಪ್ಪಿಸಿದಂತಾಗಿದೆ. ಆದರೆ 6ನೇ ಗ್ಯಾರಂಟಿಯನ್ನು ಅನುಷ್ಠಾನ ಮಾಡಬೇಕು. ಅಂಗನವಾಡಿ ಕಾರ್ಯಕರ್ತೆಯರಿಗೆ ಮಾಸಿಕ 15 ಸಾವಿರ ರೂ. ಮತ್ತು ಸಹಾಯಕಿಯರಿಗೆ 10 ಸಾವಿರ ರೂ. ಹಾಗೂ ಆಶಾ ಕಾರ್ಯಕರ್ತೆಯರಿಗೆ ಮಾಸಿಕ 8 ಸಾವಿರ ರೂ. ಗೌರವಧನ ಹೆಚ್ಚಿಸಬೇಕು. ಎಪಿಎಂಸಿ ಕಾಯಿದೆಗಳನ್ನು ರದ್ದುಗೊಳಿಸಬೇಕು ಎಂದು ಸಿಪಿಐ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಚ್. ವೀರಣ್ಣ ಒತ್ತಾಯಿಸಿದರು.

    ಇದನ್ನೂ ಓದಿ: ಬೆಂಗಳೂರಿನಲ್ಲಿ ಹೆಚ್ಚಾಯ್ತು ಸೈಬರ್​​ ಕ್ರೈಂ ಪ್ರಕರಣಗಳು; ಕ್ಯೂಆರ್ ಕೋಡ್ ಸ್ಕ್ಯಾಮ್​​ಗಳೇ ಹೆಚ್ಚು ಎಚ್ಚರ..!

    ರೈತರ ಮೇಲೆ ದಾಖಲಾಗಿರುವ ರಾಜಕೀಯ ಪ್ರೇರಿತ ಮೊಕದ್ದಮೆಗಳನ್ನು ಹಿಂಪಡೆಯಬೇಕು. ಕಾರ್ಮಿಕರ ಕೆಲಸದ ಅವಧಿಯನ್ನು ಎಂಟು ಗಂಟೆಗೆ ಮಾಡಬೇಕು. ಪೌರಕಾರ್ಮಿಕರ ಸೇವೆಯನ್ನು ಖಾಯಂಗೊಳಿಸಿ ಸರ್ಕಾರಿ ಸೌಲಭ್ಯಗಳನ್ನು ವಿಸ್ತರಿಸಬೇಕು. ಅತಿಥಿ ಶಿಕ್ಷಕರು ಮತ್ತು ಉಪನ್ಯಾಸಕರನ್ನು ಖಾಯಂಗೊಳಿಸಬೇಕು ಎಂದು ಒತ್ತಾಯಿಸಿದರು. ಗ್ರೇಡ್-2 ತಹಸೀಲ್ದಾರ್ ಕುಮಾರಸ್ವಾಮಿ ಮನವಿ ಸಲ್ಲಿಸಿದರು.

    ಅಂಗನವಾಡಿ ಕಾರ್ಯಕರ್ತೆಯರ ಸಂಘದ ತಾಲೂಕು ಅಧ್ಯಕ್ಷೆ ಮಹಾಂತಮ್ಮ, ಸಿಪಿಐ ತಾಲೂಕು ಪ್ರಧಾನ ಕಾರ್ಯದರ್ಶಿ ಕರಿಯಪ್ಪ, ಕಟ್ಟಡ ಕಾರ್ಮಿಕರ ಸಂಘದ ತಾಲೂಕು ಅಧ್ಯಕ್ಷ ಯು. ಪೆನ್ನಪ್ಪ , ಪದ್ಮಾವತಿ ಸೇರಿದಂತೆ ಅಂಗನವಾಡಿ ಕಾರ್ಯಕರ್ತರು, ಕಟ್ಟಡ ಕಾರ್ಮಿಕರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts