ಸಮುದಾಯ ಅಭಿವೃದ್ಧಿಗೆ ಡಾ. ವೀರೇಂದ್ರ ಹೆಗ್ಗಡೆ ಅವರ ಧರ್ಮಸ್ಥಳ ಸಂಸ್ಥೆ ಮಾದರಿ

Alavandi hatti Village Cheque Issue
ಹಟ್ಟಿ ಗ್ರಾಮದ ಶ್ರೀ ಬೀರಲಿಂಗೇಶ್ವರ ದೇವಸ್ಥಾನ ಅಭಿವೃದ್ಧಿಗಾಗಿ ಜೀರ್ಣೋದ್ಧಾರ ಸಮಿತಿಗೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ 1ಲಕ್ಷ ರೂ. ಅನುದಾನದ ಚೆಕ್ ವಿತರಿಸಲಾಯಿತು.
Published on

ಅಳವಂಡಿ: ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆ ಡಾ. ವೀರೇಂದ್ರ ಹೆಗ್ಗಡೆ ಅವರ ಮಾರ್ಗದರ್ಶನದಂತೆ ದೇವಸ್ಥಾನ, ಧಾರ್ಮಿಕ ಕೇಂದ್ರ ಹಾಗೂ ಸಮುದಾಯದ ಅಭಿವೃದ್ಧಿಗೆ ಕೈಜೋಡಿಸುತ್ತಾ ಬಂದಿದೆ ಎಂದು ಎಸ್‌ಕೆಡಿಆರ್‌ಡಿಪಿ ಜಿಲ್ಲಾ ನಿರ್ದೇಶಕ ಸದಾನಂದ ಬಂಗೇರ ಹೇಳಿದರು.

ಸಮೀಪದ ಹಟ್ಟಿ ಗ್ರಾಮದ ಶ್ರೀ ಬೀರಲಿಂಗೇಶ್ವರ ದೇವಸ್ಥಾನ ಅಭಿವೃದ್ಧಿಗಾಗಿ ಜೀರ್ಣೋದ್ಧಾರ ಸಮಿತಿಗೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ 1 ಲಕ್ಷ ರೂ. ಚೆಕ್ ವಿತರಿಸಿ ಗುರುವಾರ ಮಾತನಾಡಿದರು. ಕಳೆದ 38 ವರ್ಷಗಳಿಂದ ಧರ್ಮಸ್ಥಳ ಸಂಸ್ಥೆ ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ ಹಾಗೂ ಅರಣ್ಯ, ಜಲ ರಕ್ಷಣೆ ಜತೆಗೆ ವಿವಿಧ ಜಾಗೃತಿ ಕಾರ್ಯಕ್ರಮ ಆಯೋಜಿಸಿ ಜನರಲ್ಲಿ ಅರಿವು ಮೂಡಿಸುತ್ತಿದೆ.

ಸಂಸ್ಥೆಯ ಸಂಘದಲ್ಲಿ ಎಲ್ಲರೂ ಸೇರಿ ಸೌಲಭ್ಯ ಪಡೆದುಕೊಳ್ಳಬೇಕು. ಸಂಘದ ಸದಸ್ಯರ ಮಕ್ಕಳ ಶಿಕ್ಷಣಕ್ಕೆ ಪ್ರೋತ್ಸಾಹ ಧನ ನೀಡಲಾಗುತ್ತಿದೆ ಎಂದರು.

ಗ್ರಾಪಂ ಅಧ್ಯಕ್ಷ ತೋಟಪ್ಪ ಶಿಂಟ್ರ, ತಾಲೂಕು ಯೋಜನಾಧಿಕಾರಿ ಜಗದೀಶ, ವಲಯ ಮೇಲ್ವಿಚಾರಕ ಮೋಟಯ್ಯ ಹಿರೇಮಠ, ಪ್ರಮುಖರಾದ ಭರಮಪ್ಪ ನಗರ, ನಿಂಗನಗೌಡ ಪಾಟೀಲ, ನಿಂಗಪ್ಪ, ಗುಡದಪ್ಪ, ಹೊನ್ನಪ್ಪಗೌಡ, ಹನುಮವ್ವ ಪೂಜಾರಿ, ಈರಪ್ಪ, ಗುಡದಪ್ಪ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net