More

    ಪಠ್ಯಪುಸ್ತಕ ಪರಿಷ್ಕರಣೆ ವಿವಾದ; ರೋಹಿತ್ ಚಕ್ರತೀರ್ಥ ವಿರುದ್ಧ ದೂರು ದಾಖಲು: ಬಂಧನಕ್ಕೆ ಆಗ್ರಹ..

    ರಾಮನಗರ: ಪಠ್ಯಪುಸ್ತಕ ಪರಿಷ್ಕರಣಾ ಸಮಿತಿ ಅಧ್ಯಕ್ಷರಾಗಿದ್ದ ರೋಹಿತ್ ಚಕ್ರತೀರ್ಥ ಬಂಧನಕ್ಕೆ ಆಗ್ರಹಿಸಿ ದೂರು ದಾಖಲಾಗಿದೆ. ಎಸ್​ಸಿ-ಎಸ್​ಟಿ ದೌರ್ಜನ್ಯ ತಡೆ ಕಾಯ್ದೆಯಡಿ ರೋಹಿತ್ ಚಕ್ರತೀರ್ಥನನ್ನು ಬಂಧಿಸಬೇಕು ಎಂದು ಆಗ್ರಹಿಸಿ ದೂರು ನೀಡಲಾಗಿದೆ.

    ಇರುಳಿಗ (ಅರಣ್ಯವಾಸಿ) ಕ್ಷೇಮಾಭಿವೃದ್ದಿ ಸಂಘದ ಅಧ್ಯಕ್ಷ ಕೃಷ್ಣಮೂರ್ತಿ ಎಂಬವರು ಈ ಸಂಬಂಧ ರಾಮನಗರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ದೂರು ನೀಡಿದ್ದಾರೆ. ಪರಿಷ್ಕೃತ ಪಠ್ಯದಲ್ಲಿ ಆದಿವಾಸಿ ಕಾಡುಜನಾಂಗದ ಬಗ್ಗೆ ಅವಹೇಳನ ಮಾಡಲಾಗಿದೆ. ಹತ್ತನೇ ತರಗತಿಯ ಕನ್ನಡ ಪಠ್ಯ ಪುಸ್ತಕದಲ್ಲಿ ನಮ್ಮ ಆದಿವಾಸಿ ಕಾಡು ಜನಾಂಗದ ಬಗ್ಗೆ ಅವಹೇಳನಕಾರಿಯಾಗಿ ಪಠ್ಯ ಮುದ್ರಿಸಲಾಗಿದೆ. ಹೀಗಾಗಿ ರೋಹಿತ್ ಚಕ್ರತೀರ್ಥ ಮತ್ತು ಇತರ ಸದ್ಯರನ್ನು ಬಂಧಿಸಿ ಕ್ರಮಕೈಗೊಳ್ಳಬೇಕು ಎಂದು ದೂರು ನೀಡಲಾಗಿದೆ.

    ಈ ದೂರಿನ ಮೇರೆಗೆ ರಾಮನಗರ ಎಸ್​ಪಿ ಅವರು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ಡಾ.ಎಸ್.ಸೆಲ್ವಕುಮಾರ್‌ ಅವರಿಗೆ ಪತ್ರ ಬರೆದಿದ್ದಾರೆ. ತಮಗೆ ಬಂದಿರುವ ಸದರಿ ದೂರಿನ ಬಗ್ಗೆ ಪರಿಶೀಲಿಸಿ ಸಂಬಂಧಪಟ್ಟ ಪಠ್ಯಪುಸ್ತಕ ಪರಿಷ್ಕರಣಾ ಸಮಿತಿ ಅಧ್ಯಕ್ಷರಾಗಿದ್ದ ರೋಹಿತ್ ಚಕ್ರತೀರ್ಥ ಹಾಗೂ ಇತರ ಸದಸ್ಯರ ಮೇಲೆ ಕ್ರಮ ತೆಗೆದುಕೊಳ್ಳುವಂತೆ ಪತ್ರ ಬರೆದು, ದೂರಿನ ಪ್ರತಿಯನ್ನೂ ಲಗತ್ತಿಸಿ ಕಳಿಸಿ ಕೋರಿದ್ದಾರೆ.

    ದೇಶದಲ್ಲಿ ಅತ್ಯಾಚಾರ ಪ್ರಕರಣಗಳ ಇಳಿಕೆ; ಅದಕ್ಕೆ ಕಾರಣ ಮೋದಿ ಸರ್ಕಾರದ ಇದೊಂದು ಕ್ರಮ..

    ಪ್ರವಾದಿ ಮುಹಮ್ಮದ್ ಬಗ್ಗೆ ವಿವಾದಾತ್ಮಕ ಹೇಳಿಕೆ; ವಕ್ತಾರರಿಬ್ಬರನ್ನು ಅಮಾನತುಗೊಳಿಸಿದ ಬಿಜೆಪಿ…

    ಹೆಂಡತಿಯ ಅಜ್ಜಿಯ ಮೇಲೇ ಅತ್ಯಾಚಾರ ಮಾಡಿದ 60 ವರ್ಷದ ಕಾಮುಕ; ಆರೋಪಿಯ ಬಂಧನ..

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts