ಹಾನಿಯಾದ ಮನೆಗಳಿಗೆ ಪರಿಹಾರ ಕ್ರಮ: ದಿನೇಶ್ ಗುಂಡೂರಾವ್ ಭರವಸೆ

Bel_Gundurao

ಬೆಳ್ತಂಗಡಿ: ಮಳೆಯಿಂದ ಹಾನಿಯಾದ ಬೆಳ್ತಂಗಡಿಯ ಎರಡು ಪ್ರದೇಶಗಳಿಗೆ ದ.ಕ.ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಶುಕ್ರವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಬೆಳ್ತಂಗಡಿ ತಾಲೂಕಿನ ಮದಡ್ಕ-ಪಡಂಗಡಿ ಸಂಪರ್ಕ ಕಿಂಡಿ ಅಣೆಕಟ್ಟು ಕುಸಿತವಾದ ಪ್ರದೇಶ ಪರಿಶೀಲನೆ ನಡೆಸಿ ಸ್ಥಳೀಯರೊಡನೆ ಮಾತಾನಾಡಿ ಸಮಸ್ಯೆ ಆಲಿಸಿದರು. ಬಳಿಕ ಲಾಯಿಲ ಗ್ರಾಮದ ಗುರಿಂಗಾನ ಪ್ರದೇಶಕ್ಕೆ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿ ಸ್ಥಳೀಯರಿಂದ ಪಡೆದುಕೊಂಡು ಇಲಾಖೆ ಅಧಿಕಾರಿಗಳಿಂದ ಎಲ್ಲ ಮಾಹಿತಿ ಪಡೆದುಕೊಂಡರು. ಮಳೆ ಬರುತ್ತಿರುವ ಕಾರಣ ಈಗ ಯಾವುದೇ ಕ್ರಮ ಕೈಗೊಳ್ಳಲು ಸಾಧ್ಯವಿಲ್ಲ ಮಳೆ ಕಡಿಮೆಯಾದ ಬಳಿಕ ಇಲಾಖೆಯಿಂದ ವರದಿ ತರಿಸಿಕೊಂಡು ಕಿಂಡಿ ಅಣೆಕಟ್ಟಿನ ಕೆಲಸ ಕಾರ್ಯ ನಡೆಸಲಾಗುವುದು ಹಾಗೂ ಹಾನಿಯಾಗಿರುವ ಮನೆಗಳಿಗೆ ಪರಿಹಾರ ನೀಡುವ ಕ್ರಮಗೊಳ್ಳಲಾಗುವುದು ಎಂದು ಮಾಧ್ಯಮಗಳಿಗೆ ಸಚಿವರು ಮಾಹಿತಿ ನೀಡಿದರು.

ಬೆಳ್ತಂಗಡಿ ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂ, ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್, ಪುತ್ತೂರು ಎ.ಸಿ.ಜುಬಿನ್ ಮೋಹಪಾತ್ರ, ಸಹಾಯಕ ಕಾರ್ಯನಿರ್ವಾಹಕ ಅಭಿಯಂತರು ಎಇಇ ನಿತಿನ್, ದ.ಕ.ಪೊಲೀಸ್ ವರಿಷ್ಠಾಧಿಕಾರಿ ಯತೀಶ್, ಬೆಳ್ತಂಗಡಿ ತಹಸೀಲ್ದಾರ್ ಪೃಥ್ವಿ ಸಾನಿಕಂ, ಜಿಪಂ ಮುಖ್ಯಕಾರ್ಯನಿರ್ವಹಣಾಧಿಕಾರಿ ಡಾ.ಆನಂದ್ ಕೆ., ತಾಪಂ ಕಾರ್ಯನಿರ್ವಾಹಣಾಧಿಕಾರಿ ಭವನಿ ಶಂಕರ್, ಕಂದಾಯ ಇಲಾಖೆ ಅಧಿಕಾರಿಗಳು, ಬೆಳ್ತಂಗಡಿ ಸರ್ಕಲ್ ಇನ್ಸ್ಪೆಕ್ಟರ್ ನಾಗೇಶ್ ಕದ್ರಿ, ಬೆಳ್ತಂಗಡಿ ಇನ್ಸ್ಪೆಕ್ಟರ್ ಸುಬ್ಬಾಪೂರ್ ಮಠ ಉಪಸ್ಥಿತರಿದ್ದರು.

Share This Article

ಬಿಕ್ಕಳಿಕೆ ಏಕೆ ಬರುತ್ತದೆ? ಕಿರಿಕಿರಿ ಉಂಟುಮಾಡುವ ಅದನ್ನು ನಿಯಂತ್ರಿಸುವುದು ಹೇಗೆ?

 ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…

ಈ ದಿನಾಂಕದಂದು ಜನಿಸಿದವರು ದಾನದಲ್ಲಿ ಕರ್ಣನನ್ನು ಮೀರಿಸುತ್ತಾರೆ! ನೀವೂ ಹುಟ್ಟಿದ್ದು ಇದೇ ದಿನಾನಾ?

ಜ್ಯೋತಿಷ್ಯಶಾಸ್ತ್ರದಲ್ಲಿ ಸಂಖ್ಯಾಶಾಸ್ತ್ರವೂ ಒಂದು. ಇದರ ಪ್ರಕಾರ ವ್ಯಕ್ತಿಯ ಜನ್ಮ ದಿನಾಂಕವು ಅವನ ವ್ಯಕ್ತಿತ್ವದ ಬಗ್ಗೆ ಮತ್ತು…

ಗೋಲ್ಡನ್ ಅವರ್ ರಹಸ್ಯ: ಮುಂಜಾನೆ ಬೇಗ ಏಳುವುದರಿಂದ ಇದೆ 6 ಪ್ರಯೋಜನಗಳು

 ಬೆಂಗಳೂರು: ಮನೆಯಲ್ಲಿ ಕೆಲವರು ಸೂರ್ಯೋದಯಕ್ಕೂ ಮೊದಲೇ ಏಳುವ ಅಭ್ಯಾಸ ಇಟ್ಟುಕೊಂಡಿರುತ್ತಾರೆ. ಮುಂಜಾನೆ ಬೇಗ ಏಳುವುದನ್ನು ರೂಢಿ…