ವಿಶೇಷ ಕೌಶಲ್ಯದಿಂದ ಜಾಗತಿಕ ಮಟ್ಟದಲ್ಲಿ ಸ್ಪರ್ಧೆ ಸಾಧ್ಯ

gan (14)
Published on

ಕುಂದಾಪುರ: ನಮ್ಮ ಬದುಕಿನಲ್ಲಿ ನಾವು ಸ್ವಾವಲಂಬಿಯಾಗಿರುವುದಕ್ಕೆ ಹೆಚ್ಚು ಗಮನ ಕೊಡಬೇಕು. ಜಾಗತಿಕ ಮಟ್ಟದಲ್ಲಿ ಸ್ಪರ್ಧಿಸಬೇಕಾದರೆ ನಾವು ವಿಶೇಷ ಕೌಶಲ್ಯಗಳನ್ನು ಹೊಂದಿರಬೇಕು. ಸಿಎ, ಸಿಎಸ್ ಕೋರ್ಸ್‌ನಿಂದ ಔದ್ಯೋಗಿಕ ಹಾಗೂ ವೈಯಕ್ತಿಕವಾಗಿಯೂ ಉತ್ತಮ ಬದುಕು ಕಟ್ಟಿಕೊಳ್ಳಲು ಸಾಧ್ಯ ಎಂದು ಕೆ.ವಿ.ಸಿ ಸಂಸ್ಥೆಯ ಸಿಎ ದೀಪಿಕಾ ವಸನಿ ಹೇಳಿದರು. ಕೋಟೇಶ್ವರದ ವಕ್ವಾಡಿ ಗುರುಕುಲ ಪದವಿ ಪೂರ್ವ ಕಾಲೇಜಿನಲ್ಲಿ ಶನಿವಾರ ನಡೆದ ಸಿಎ, ಸಿಎಸ್ ಫೌಂಡೇಶನ್ ಕೋರ್ಸ್‌ನ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದರು. ಪ್ರಾಂಶುಪಾಲೆ ಡಾ. ರೂಪಾ ಶೆಣೈ ಅಧ್ಯಕ್ಷತೆ ವಹಿಸಿದ್ದರು. ಲೆಕ್ಕಶಾಸ್ತ್ರ ಉಪನ್ಯಾಸಕ ಪ್ರಶಾಂತ ಉಪಸ್ಥಿತರಿದ್ದರು. ಉಪನ್ಯಾಸಕಿ ರಶ್ಮಿಕಾ ಸ್ವಾಗತಿಸಿ, ನಿರೂಪಿಸಿದರು. ಉಪನ್ಯಾಸಕಿ ಪವಿತ್ರ ಶೆಟ್ಟಿ ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net