More

    ಸರ್ಕಾರಿ ಶಾಲಾ ಕಾಲೇಜಿಗೆ ಖಾಸಗಿ ಶಿಕ್ಷಣ ಸಂಸ್ಥೆಗಳಿಂದ ಸ್ಪರ್ಧೆ

    ಬಾಳೆಹೊನ್ನೂರು: ಶಿಕ್ಷಣ ಕ್ಷೇತ್ರ ಸ್ಪರ್ಧಾತ್ಮಕವಾಗಿ ಮುನ್ನಡೆಯುತ್ತಿದ್ದು, ಖಾಸಗಿ ಶಿಕ್ಷಣ ಸಂಸ್ಥೆಗಳು ಹೊಸ ಚಟುವಟಿಕೆಗಳೊಂದಿಗೆ ಸರ್ಕಾರಿ ಶಾಲಾ ಕಾಲೇಜುಗಳಿಗೆ ಸ್ಪರ್ಧೆ ನೀಡುತ್ತಿವೆ ಎಂದು ಸರ್ಕಾರಿ ಪಿಯು ಕಾಲೇಜಿನ ಅಭಿವೃದ್ಧಿ ಸಮಿತಿ ಸದಸ್ಯ ಹಿರಿಯಣ್ಣ ಹೇಳಿದರು.

    ಸರ್ಕಾರಿ ಸ್ವತಂತ್ರ ಪಿಯು ಕಾಲೇಜು ಶನಿವಾರ ಆಯೋಜಿಸಿದ್ದ ಕಾಲೇಜು ವಾರ್ಷಿಕ ಚಟುವಟಿಕೆಗಳ ಸಮಾರೋಪದಲ್ಲಿ ಮಾತನಾಡಿ, ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಮಾತ್ರ ಖಾಸಗಿ ಶಾಲೆಗಳಲ್ಲಿ ದಾಖಲಾತಿ ಮಾಡಿಕೊಳ್ಳುತ್ತಾರೆ. ಆದರೆ ಸರ್ಕಾರಿ ಶಾಲಾ ಕಾಲೇಜುಗಳು ಎಲ್ಲರನ್ನೂ ದಾಖಲಾತಿ ಮಾಡಿಕೊಂಡು ಗುಣಮಟ್ಟದ ಶಿಕ್ಷಣ ನೀಡುತ್ತಿವೆ. ಖಾಸಗಿ ಶಾಲೆಗಳಲ್ಲಿ ಮಾತ್ರ ಗುಣಮಟ್ಟದ ಶಿಕ್ಷಣ ದೊರೆಯುತ್ತದೆ ಎಂಬ ತಪ್ಪು ಭಾವನೆ ಪಾಲಕರಕಲ್ಲಿ ಬೆಳೆದಿದೆ. ಆದರೆ ಸರ್ಕಾರಿ ವಿದ್ಯಾಸಂಸ್ಥೆಗಳಲ್ಲಿ ಗುಣಮಟ್ಟದ ಶಿಕ್ಷಣ ದೊರೆಯುತ್ತಿದೆ. ಕಾಲೇಜಿನಲ್ಲಿ ಮುಂಬರುವ ವರ್ಷ ವಿಜ್ಞಾನ ಪ್ರಯೋಗಾಲಯ ಆರಂಭವಾಗಲಿದೆ ಎಂದು ಹೇಳಿದರು. ಪ್ರಾಚಾರ್ಯ ಬಿ.ಎಚ್.ಕೃಷ್ಣಮೂರ್ತಿ ಮಾತನಾಡಿ, ಪ್ರಸಕ್ತ ಶೈಕ್ಷಣಿಕ ವರ್ಷ ಕಾಲೇಜಿಗೆ ಸುವರ್ಣ ಕ್ಷಣಗಳಾಗಿದ್ದು, ಸಾಕಷ್ಟು ಅಭಿವೃದ್ಧಿ ಕಾರ್ಯಗಳು ನಡೆದಿವೆ. ಆಡಳಿತ ಮಂಡಳಿ ನಿಷ್ಕಲ್ಮಶವಾಗಿ ಕಾರ್ಯನಿರ್ವಹಿಸಿ ಕಾಲೇಜಿನ ಅಭಿವೃದ್ಧಿಗೆ ಕೈ ಜೋಡಿಸಿದೆ ಎಂದರು.ಕಳೆದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಪುರಸ್ಕರಿಸಲಾಯಿತು. ಬಿ.ಕಣಬೂರು ಗ್ರಾಪಂ ಅಧ್ಯಕ್ಷ ಎಂ.ವಿ.ಸದಾಶಿವ ಆಚಾರ್ಯ, ಸದಸ್ಯೆ ಶಶಿಕಲಾ ಉಮೇಶ್, ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯ ರಿಚರ್ಡ್ ಮಥಾಯಿಸ್ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts