More

  ಸ್ಪರ್ಧಾತ್ಮಕ ಪರೀಕ್ಷೆ ಎದುರಿಸಲು ಆತಂಕ ಬೇಡ

  ಮಸ್ಕಿ: ಪ್ರತಿಯೊಬ್ಬರೂ ಶಿಕ್ಷಣ ಮಹತ್ವ ಅರಿಯುವುದರೊಂದಿಗೆ ಉತ್ತಮ ಆರೋಗ್ಯ ಕಾಪಾಡಿಕೊಳ್ಳಬೇಕು ಎಂದು ಪ್ರೊಬೇಷನರಿ ಸಹಾಯಕ ಆಯುಕ್ತೆ ಸಾಹಿತ್ಯ ಆಲದಕಟ್ಟಿ ಹೇಳಿದರು.

  ಪಟ್ಟಣದ ಪತ್ರಿಕಾಭವನದಲ್ಲಿ ಪತ್ರಕರ್ತರ ಸಂಘದಿಂದ ಸತ್ಕಾರ ಸ್ವೀಕರಿಸಿ ಗುರುವಾರ ಮಾತನಾಡಿದರು. ಸರ್ಕಾರ ಯುವ ಸಮುದಾಯಕ್ಕೆ ಸಾಕಷ್ಟು ಅವಕಾಶಗಳನ್ನು ಕಲ್ಪಿಸಿದ್ದು, ಅದರ ಸದುಪಯೋಗ ಪಡೆದುಕೊಂಡು ಜೀವನದಲ್ಲಿ ಉನ್ನತ ಹುದ್ದೆ ಅಥವಾ ವ್ಯಾಪಾರದ ಮೂಲಕ ಸಮಾಜಕ್ಕೆ ಕಾಣಿಕೆ ನೀಡಬೇಕು ಎಂದರು.

  ಸ್ಪರ್ಧಾತ್ಮಕ ಪರೀಕ್ಷೆ ಎದುರಿಸಲು ವಿದ್ಯಾರ್ಥಿಗಳು ಆತಂಕಪಡದೆ ಸದಾ ಪ್ರಯತ್ನಶೀಲರಾಗಬೇಕು. ನಾನು 5ನೇ ಯತ್ನದಲ್ಲಿ ಯುಪಿಎಸ್‌ಸಿ ಪರೀಕ್ಷೆಯಲ್ಲಿ ತೇರ್ಗಡೆಯಾದೆ. ನಾನು ನನ್ನ ವೃತ್ತಿ ಜೀವನದಲ್ಲಿ ಸರ್ಕಾರದ ನಿಯಾಮವಳಿ ಪ್ರಕಾರ ಜನಸಾಮಾನ್ಯರ ಕಷ್ಟಗಳಿಗೆ ಸ್ಪಂದಿಸುವ ಧೃಡ ಸಂಕಲ್ಪ ಮಾಡಿರುವೆ. ಸಾರ್ವಜನಿಕರು ಮತ್ತು ಅಧಿಕಾರಿಗಳ ನಡುವೆ ಸೌಹಾರ್ದ ವಾತಾವರಣ ನಿರ್ಮಾಣವಾಗಬೇಕು. ಸರ್ಕಾರಿ ಕೆಲಸಗಳು ನಿರ್ದಿಷ್ಟ ಸಮಯದಲ್ಲಿ ಮಾಡಿಕೊಡಲು ಕೆಲವು ಅಡೆತಡೆಗಳಿದ್ದಾಗ ಸಾರ್ವಜನಿಕರು ಸಹಕರಿಸಬೇಕು ಎಂದು ಸಾಹಿತ್ಯ ಆಲದಕಟ್ಟಿ ಹೇಳಿದರು.
  ತಹಸೀಲ್ದಾರ್ ಅರಮನೆ ಸುಧಾ, ಪತ್ರಕರ್ತರ ಸಂಘದ ತಾಲೂಕು ಅಧ್ಯಕ್ಷ ವೀರೇಶ ಸೌದ್ರಿ ಸ್ವಾಗತಿಸಿದರು. ಜಿಲ್ಲಾ ಪ್ರತಿನಿಧಿ ಅಬ್ದುಲ್ ಅಜೀಜ್, ಪತ್ರಕರ್ತರಾದ ಇಂದರಪಾಷ, ರವಿ ಗೌಡನಬಾವಿ ಇದ್ದರು.

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts