More

    ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಯಶಸ್ಸಿಗೆ ಶ್ರಮ ವಹಿಸಿ: ಡಿಡಿಪಿಯು ಸಿ.ಚಲುವಯ್ಯ ಕಿವಿಮಾತು

    ಮಂಡ್ಯ: ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಯಶಸ್ಸು ಗಳಿಸಬೇಕಾದರೆ ನಿರಂತರವಾಗಿ ಶ್ರಮವಹಿಸಿ ಅಧ್ಯಯನ ಮಾಡುವುದು ಅತ್ಯವಶ್ಯಕ ಎಂದು ಡಿಡಿಪಿಯು ಸಿ.ಚಲುವಯ್ಯ ಕಿವಿಮಾತು ಹೇಳಿದರು.
    ನಗರದ ಕೆಎಚ್‌ಬಿ ಕಾಲನಿಯಲ್ಲಿರುವ ಮಂಡ್ಯ ಕೃಷಿಕ್ ಸರ್ವೋದಯ ಟ್ರಸ್ಟ್ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕೇಂದ್ರದಲ್ಲಿ ಜಿಲ್ಲೆಯ ಬಿಇಡಿ ಪ್ರಶಿಕ್ಷಣಾರ್ಥಿಗಳಿಗೆ ಶಿಕ್ಷಕರ ಅರ್ಹತಾ ಪರೀಕ್ಷೆ ಮತ್ತು ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕ ಪರೀಕ್ಷೆ ಬಗ್ಗೆ ಆಯೋಜಿಸಿದ್ದ ಉಚಿತ ಮಾಹಿತಿ ಮಾರ್ಗದರ್ಶನ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.
    ಐಎಎಸ್ ಉತ್ತೀರ್ಣರಾಗಿ ಉದ್ಯೋಗಕ್ಕೆ ಆಯ್ಕೆಯಾಗಿರುವ ಅಭ್ಯರ್ಥಿಗಳ ಜೀವನದ ಕಷ್ಟಗಳ ಬಗ್ಗೆ ತಿಳಿದುಕೊಳ್ಳಿ. ಇದು ಪ್ರೇರಣೆಯಾಗಲಿದೆ. ಟ್ರಸ್ಟ್ ಜಿಲ್ಲೆಯ ವಿದ್ಯಾರ್ಥಿಗಳ ಒಳಿತಿಗಾಗಿ ಇಂತಹ ಕಾರ್ಯಕ್ರಮಗಳನ್ನು ಆಯೋಜಿಸುತ್ತಿರುವುದು ಪ್ರಶಂಸನೀಯ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
    ಅಧ್ಯಕ್ಷತೆ ವಹಿಸಿ ಮಾತನಾಡಿದ ಟ್ರಸ್ಟ್‌ನ ಉಪಾಧ್ಯಕ್ಷ ಡಾ.ಎಂ.ಮಾದಯ್ಯ, ನೀವೆಲ್ಲರೂ ಶಿಕ್ಷಕ ವೃತ್ತಿಯನ್ನು ಆಯ್ಕೆ ಮಾಡಿಕೊಂಡಿದ್ದೀರಿ. ಶಿಕ್ಷಕ ವೃತ್ತಿ ಪವಿತ್ರವಾದದ್ದು. ದೇಶದ ಸತ್ಪ್ರಜೆಗಳನ್ನು ತಯಾರು ಮಾಡುವ ವೃತ್ತಿ ಪೂಜನೀಯ ಎಂದರು.
    ಶೈಕ್ಷಣಿಕ ಸಂಯೋಜಕ ಎಚ್.ಡಿ.ವಿಶ್ವನಾಥ್ ಟಿಇಟಿ ಮತ್ತು ಜಿಪಿಎಸ್‌ಟಿಆರ್ ಪರೀಕ್ಷೆಗಳ ಬಗ್ಗೆ ಮಾಹಿತಿ ನೀಡಿದರು. ಟ್ರಸ್ಟ್‌ನ ಕಾರ್ಯದರ್ಶಿ ಡಾ.ಕೆ.ಬಿ.ಬೋರಯ್ಯ, ಖಜಾಂಚಿ ಎಸ್.ಲೋಕೇಶ್ ಇದ್ದರು. ಜಿಲ್ಲೆಯ ವಿವಿಧ ಬಿಇಡಿ ಕಾಲೇಜಿನ 300ಕ್ಕೂ ಹೆಚ್ಚು ವಿದ್ಯಾರ್ಥಿಗಳು ಮತ್ತು 15 ಜನ ಪ್ರಾಧ್ಯಾಪಕರು ಹಾಜರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts