More

    ಕ್ಷಯರೋಗ ಮುಕ್ತ ಜಿಲ್ಲೆಗೆ ಸಂಕಲ್ಪಿಸಿ

    ಹಾವೇರಿ: ಕ್ಷಯರೋಗದ ಬಗೆಗೆ ಉದಾಸೀನ ಬೇಡ. ಸಕಾಲದಲ್ಲಿ ಚಿಕಿತ್ಸೆ ಪಡೆದುಕೊಂಡು ರೋಗದ ನಿಮೂಲನೆಗೆ ಎಲ್ಲರೂ ಸಂಕಲ್ಪ ಮಾಡಬೇಕು ಎಂದು ಹುಕ್ಕೇರಿಮಠದ ಸದಾಶಿವ ಸ್ವಾಮೀಜಿ ಹೇಳಿದರು.

    ಜಿಲ್ಲಾಡಳಿತ, ಜಿಪಂ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾಸ್ಪತ್ರೆ, ಜಿಲ್ಲಾ ಕ್ಷಯರೋಗ ನಿಯಂತ್ರಣ ಕೇಂದ್ರ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಯೋಗದಲ್ಲಿ ಬುಧವಾರ ನಗರದ ಶಿವಬಸವ ಕಲ್ಯಾಣಮಂಟಪದಲ್ಲಿ ಆಯೋಜಿಸಿದ್ದ ವಿಶ್ವ ಕ್ಷಯರೋಗ ದಿನಾಚರಣೆಗೆ ಚಾಲನೆ ನೀಡಿ ಅವರು ಮಾತನಾಡಿದರು. ಕ್ಷಯರೋಗದ ರೋಗದ ಲಕ್ಷಣಗಳು ಕಂಡುಬಂದರೆ ಕೂಡಲೆ ಆಸ್ಪತ್ರೆಗೆ ತೆರಳಿ ಪರೀಕ್ಷಿಸಿಕೊಳ್ಳಬೇಕು. ರೋಗ ಪತ್ತೆಯಾದಲ್ಲಿ ಸರಿಯಾದ ಚಿಕಿತ್ಸೆ ಪಡೆದುಕೊಳ್ಳಿ. ಸರ್ಕಾರ ಈ ರೋಗಿಗಳಿಗೆ ಉಚಿತ ಔಷಧವನ್ನು ನೀಡುವುದರ ಜೊತೆಗೆ ಪೌಷ್ಟಿಕ ಆಹಾರಕ್ಕಾಗಿ ಪ್ರತಿತಿಂಗಳು 500 ರೂ.ಗಳ ಸಹಾಯಧನ ನೀಡುತ್ತಿದೆ. ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದರು.

    ಜಿಪಂ ಅಧ್ಯಕ್ಷ ಏಕನಾಥ ಬಾನುವಳ್ಳಿ ಮಾತನಾಡಿ, ಕೋವಿಡ್ ಹಿನ್ನಲೆಯಲ್ಲಿ ಕ್ಷಯರೋಗಿಯ ಪತ್ತೆ ಕಾರ್ಯಗಳು ಸರಿಯಾಗಿ ಆಗಿಲ್ಲ. ರೋಗದ ಲಕ್ಷಣವಿರುವ ವ್ಯಕ್ತಿಗಳು ಆಸ್ಪತ್ರೆಗೆ ತೆರಳಿ ಸರ್ಕಾರ ನೀಡುವ ಸೌಲಭ್ಯಗಳನ್ನು ಸದುಪಯೋಗ ಪಡಿಸಿಕೊಂಡು ರೋಗದಿಂದ ಮುಕ್ತರಾಗಬೇಕು ಎಂದರು.

    ಕಾರ್ಯಕ್ರಮದಲ್ಲಿ್ಲ ಸಾವಿರ ಕ್ಷಯರೋಗಿಗಳಿಗೆ ಆಹಾರ ಕಿಟ್ ವಿತರಿಸಿದ ಸಮಾಜ ಸೇವಕ ಶಶಿಧರ ಯಲಿಗಾರ ಹಾಗೂ ಈ ವರ್ಷದಲ್ಲಿ ಉತ್ತಮ ಸೇವೆಗೈದ ಜಿಲ್ಲೆಯ ಎಲ್ಲ ತಾಲೂಕುಗಳ ವೈದ್ಯರು, ವೈದ್ಯಾಧಿಕಾರಿಗಳು, ಆಶಾ ಕಾರ್ಯಕರ್ತೆಯರು ಹಾಗೂ ನರ್ಸ್​ಗಳನ್ನು ಸನ್ಮಾನಿಸಲಾಯಿತು.

    ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿ ಡಾ. ನೀಲೇಶ ಎಂ.ಎನ್., ಜಿಪಂ ಉಪಾಧ್ಯಕ್ಷೆ ರಾಜೇಶ್ವರಿ ಕಲ್ಲೇರ, ನಗರಸಭೆ ಅಧ್ಯಕ್ಷ ಸಂಜೀವಕುಮಾರ ನೀರಲಗಿ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಶಿವಕುಮಾರ ಸಂಗೂರ, ಜಿಲ್ಲಾ ವಾರ್ತಾಧಿಕಾರಿ ಡಾ. ಬಿ.ಆರ್. ರಂಗನಾಥ್, ಟಿಎಚ್​ಒ ಡಾ. ಪ್ರಭಾಕರ ಕುಂದೂರ, ಜಿಲ್ಲಾ ಕ್ಷಯರೋಗ ಚಿಕಿತ್ಸಕ ಜಗದೀಶ ಪಾಟೀಲ ಇತರರಿದ್ದರು.

    ಅಭಿಯಾನಕ್ಕೆ ಕೈಜೋಡಿಸಿ

    ಜಿಲ್ಲೆಯನ್ನು ಕ್ಷಯರೋಗ ಮುಕ್ತಗೊಳಿಸಲು ಎಲ್ಲರೂ ಕೈಜೋಡಿಸಿ ಸಹಕಾರ ನೀಡುವಂತೆ ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ ಹೇಳಿದರು. ಜಿಲ್ಲಾಸ್ಪತ್ರೆ ಆವರಣದಲ್ಲಿ ಆಯೋಜಿಸಿದ್ದ ಜಾಗೃತಿ ಜಾಥಾಗೆ ಚಾಲನೆ ನೀಡಿ ಮಾತನಾಡಿದ ಅವರು, 2025ರ ವೇಳೆಗೆ ನಮ್ಮ ರಾಜ್ಯವನ್ನು ಕ್ಷಯರೋಗ ಮುಕ್ತ ರಾಜ್ಯವನ್ನಾಗಿಸುವ ಸಂಕಲ್ಪ ಹೊಂದಿದ್ದೇವೆ. ಈ ರೋಗ ಮಾರಣಾಂತಿಕವಲ್ಲ. ಜನರು ಸಕಾಲದಲ್ಲಿ ಚಿಕಿತ್ಸೆ ಪಡೆದರೆ ಸಂಪೂರ್ಣವಾಗಿ ಗುಣವಾಗಬಹುದು ಎಂದರು. ಡಿಎಚ್​ಒ ಡಾ. ಎಚ್.ಎಸ್. ರಾಘವೇಂದ್ರಸ್ವಾಮಿ, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ಪಿ.ಆರ್. ಹಾವನೂರ, ಆಶಾ ಕಾರ್ಯಕರ್ತೆಯರು, ವಿದ್ಯಾರ್ಥಿಗಳಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts