ರೋಹಿಣಿ ಸಿಂಧೂರಿ ವಿರುದ್ಧ ಲೋಕಾಯುಕ್ತಕ್ಕೆ ದೂರು: ಕಾರಣ ಇದೇ ನೋಡಿ..

rohini
Published on

ಬೆಂಗಳೂರು: ಕರ್ನಾಟಕದ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಮತ್ತೊಮ್ಮೆ ವಿವಾದಕ್ಕೆ ಸಿಲುಕಿದ್ದಾರೆ. ಖ್ಯಾತ ಬಾಲಿವುಡ್ ಗಾಯಕ ಲಕ್ಕಿ ಅಲಿ ಅವರಿಗೆ ಸೇರಿದ ಭೂಮಿಯನ್ನು ಒತ್ತುವರಿ ಮಾಡಿಕೊಂಡಿದ್ದಕ್ಕಾಗಿ ರೋಹಿಣಿ ವಿರುದ್ಧ ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ.

ರೋಹಿಣಿ ಸಿಂಧೂರಿ ಬೆಂಬಲದೊಂದಿಗೆ ಅವರ ಪತಿ ಸುಧೀರ್ ರೆಡ್ಡಿ ಮತ್ತು ಮಧುಸೂದನ್ ರೆಡ್ಡಿ ನ್ಯೂ ಯಲಹಂಕ ಟೌನ್‌ನಲ್ಲಿರುವ ತಮ್ಮ ಟ್ರಸ್ಟ್ ಭೂಮಿಯನ್ನು ಅತಿಕ್ರಮಿಸಿದ್ದಾರೆ. ಹೀಗಾಗಿ ರೋಹಿಣಿ ಸಿಂಧೂರಿ ಅಧಿಕಾರ ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ಅವರು ತಮ್ಮ ದೂರಿನಲ್ಲಿ ತಿಳಿಸಿದ್ದಾರೆ.

ಈ ಹಿಂದೆ ಐಎಎಸ್ ಅಧಿಕಾರಿ ಡಿ.ಕೆ.ರವಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಂಧೂರಿ ವಿರುದ್ಧ ಹಲವು ಆರೋಪಗಳು ಕೇಳಿ ಬಂದಿದ್ದವು. ಇತ್ತೀಚೆಗಷ್ಟೇ ಐಪಿಎಸ್ ಅಧಿಕಾರಿ ರೂಪಾ ಮೌದ್ಗಲ್ ಹಾಗೂ ರೋಹಿಣಿ ಸಿಂಧೂರಿ ನಡುವಿನ ವಿವಾದ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದು ಗೊತ್ತೇ ಇದೆ

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net