More

    ಸಿಎಂ ಸಿದ್ದರಾಮಯ್ಯ ವಿರುದ್ಧ ದೂರು

    ಚಿಕ್ಕಮಗಳೂರು: ಪರಿಶಿಷ್ಟರು ಎಂಬ ಕಾರಣಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಏಕವಚನದಲ್ಲಿ ಸಂಬೋಧಿಸಿರುವ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜದ್ರೋಹ ಹಾಗೂ ಮಾನನಷ್ಟ ಮೊಕ್ಕದ್ದಮೆ ದಾಖಲಿಸಬೇಕು ಎಂದು ಒತ್ತಾಯಿಸಿ ಜಿಲ್ಲಾ ಬಿಜೆಪಿ ಎಸ್ಟಿ ಮೋರ್ಚಾ ಪದಾಧಿಕಾರಿಗಳು ಎರಡನೇ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಯೋಗೇಂದ್ರ ನಾಥ್ ಅವರಿಗೆ ಮನವಿ ಸಲ್ಲಿಸಿದರು.

    ಚಿತ್ರದುರ್ಗದಲ್ಲಿ ನಡೆದ ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಕುರಿತು ಏಕವಚನದಲ್ಲಿ ಮಾತನಾಡಿದ್ದಾರೆ. ಈ ಮೂಲಕ ರಾಷ್ಟ್ರಪತಿ ಹುದ್ದೆಗೆ ಅಗೌರವ ಸಲ್ಲಿಸಿದ್ದಾರೆ. ಹೀಗಾಗಿ ಅವರ ವಿರುದ್ಧ ಸುಮೋಟೋ ಪ್ರಕರಣ ದಾಖಲಿಸಿಕೊಳ್ಳಬೇಕು ಎಂದು ಒತ್ತಾಯಿಸಿದರು.
    ರಾಷ್ಟ್ರಪತಿ ಅವರನ್ನೇ ಹಿಯಾಳಿಸುವ ಮನಸ್ಥಿತಿ ಹೊಂದಿರುವ ಸಿದ್ದರಾಮಯ್ಯ ಅವರಿಗೆ ಪರಿಶಿಷ್ಟರ ಬಗ್ಗೆ ಯಾವ ಅಭಿಪ್ರಾಯವಿದೆ ಎನ್ನುವುದು ಗೊತ್ತಾಗುತ್ತದೆ. ದಲಿತರು, ಹಿಂದುಳಿದವರ ಪರ ಎಂದು ಹೇಳಿಕೊಳ್ಳುವ ಸಿದ್ದರಾಮಯ್ಯ ಅವರ ಇನ್ನೊಂದು ಮುಖ ಅನಾವರಣಗೊಂಡಿದೆ ಎಂದರು.
    ಬಿಜೆಪಿ ಎಸ್ಟಿ ಮೋರ್ಚಾ ಜಿಲ್ಲಾಧ್ಯಕ್ಷ ಕೆ.ಪಿ.ವೆಂಕಟೇಶ್, ಪ್ರಮುಖರಾದ ನಂದೀಶ್ ಮದಕರಿ, ಮಧುಕುಮಾರ, ಕೇಶವ್, ಮೋಹನ್, ಹಂಪಯ್ಯ, ಸೀತಾರಾಮ ಭರಣ್ಯ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts