More

    ಇಲಾಖೆ ವಿರುದ್ಧವೇ ಕೇಸ್​; ಕೆಲಸದ ಅವಧಿ ಹೆಚ್ಚಿಸಿದ್ದಕ್ಕೆ ಮಾನವಹಕ್ಕುಗಳ ಆಯೋಗಕ್ಕೆ ದೂರು..

    ಬೆಂಗಳೂರು: ಸಬ್ ರಿಜಿಸ್ಟ್ರಾರ್ ಕಚೇರಿ ಸಮಯ ಬೆಳಗ್ಗೆ 8ರಿಂದ ರಾತ್ರಿ 8 ಗಂಟೆವರೆಗೆ ವಿಸ್ತರಿಸಿರುವ ನೋಂದಣಿ ಮತ್ತು ಮುದ್ರಾಂಕ ಇಲಾಖೆ ಕ್ರಮದ ವಿರುದ್ಧ ರಾಜ್ಯ ಮಾನವ ಹಕ್ಕುಗಳ ಆಯೋಗದಲ್ಲಿ ಪ್ರಕರಣ ದಾಖಲಾಗಿದೆ.

    ಈ ಕುರಿತು ವಿಜಯನಗರದ ಬಿ.ಎಚ್. ವೀರೇಶ್ ಎಂಬಾತ, ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಗುತ್ತಿಗೆ ನೌಕರರ ಪರವಾಗಿ ದೂರು ನೀಡಿದ್ದಾರೆ. ಇದರ ಅನ್ವಯ ಪ್ರಕರಣ ದಾಖಲಿಸಿಕೊಂಡಿರುವ ಮಾನವ ಹಕ್ಕುಗಳ ಆಯೋಗ, ಶುಕ್ರವಾರ ಕಾರ್ಮಿಕ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗೆ ಪ್ರಕರಣ ವರ್ಗಾವಣೆ ಮಾಡಿದೆ.

    ರಾಜ್ಯದಲ್ಲಿನ ಸಬ್ ರಿಜಿಸ್ಟ್ರಾರ್ ಕಚೇರಿಗಳ ಸಮಯವನ್ನು ಬೆಳಗ್ಗೆ 8 ರಿಂದ ರಾತ್ರಿ 8 ಗಂಟೆ ವರೆಗೆ ವಿಸ್ತರಿಸಿ ನೋಂದಣಿ ಮತ್ತು ಮುದ್ರಾಂಕ ಇಲಾಖೆ ಆದೇಶ ಹೊರಡಿಸಿದೆ. ಈ ಮೊದಲು ಬೆಳಗ್ಗೆ 10 ರಿಂದ ಸಂಜೆ 5.30ರ ವರೆಗೆ ಕಾರ್ಯ ನಿರ್ವಹಿಸುತ್ತಿತ್ತು.

    ಇದನ್ನೂ ಓದಿ: ಇದ್ದಕ್ಕಿದ್ದಂತೆ ಹೆಚ್ಚಾಯ್ತು ಕೋವಿಡ್​ ಕೇಸ್​; ಚೀನಾದಲ್ಲಿಂದು 2 ವರ್ಷದಲ್ಲೇ ಅತ್ಯಧಿಕ ದೈನಂದಿನ ಪ್ರಕರಣ!

    ಇದೀಗ ಒತ್ತಾಯಪೂರ್ವಕವಾಗಿ 12 ಗಂಟೆಗಳ ಕೆಲಸ ಮಾಡಿಕೊಳ್ಳಲಾಗುತ್ತಿದೆ. ಸಬ್ ರಿಜಿಸ್ಟ್ರಾರ್ ಕಚೇರಿಗಳಲ್ಲಿ ಬಹುತೇಕ ಸಿಬ್ಬಂದಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿದ್ದಾರೆ. ಪ್ರಸ್ತುತ 970 ಡೇಟಾ ಎಂಟ್ರಿ ಆಪರೇಟರ್‌ಗಳು ಕರ್ತವ್ಯ ನಿರ್ವಹಿಸುತ್ತಿದ್ದು, ಇವರಿಗೆ ತಿಂಗಳಿಗೆ 18 ಸಾವಿರ ರೂ. ವೇತನ ಕೊಟ್ಟು 12 ಗಂಟೆಗಳ ಕಾಲ ದುಡಿಸಿಕೊಳ್ಳಲಾಗುತ್ತಿದೆ. ಹೆಚ್ಚುವರಿ ಕೆಲಸಕ್ಕೆ ಹೆಚ್ಚಿನ ಭತ್ಯೆ ಕೊಡುತ್ತಿಲ್ಲ. ಇದು ಕಾರ್ಮಿಕರ ಹಕ್ಕುಗಳ ವಿರೋಧವಾಗಿದೆ. ಈ ಬಗ್ಗೆ ಕ್ರಮ ತೆಗೆದುಕೊಳ್ಳಬೇಕೆಂದು ದೂರಿನಲ್ಲಿ ವೀರೇಶ್ ಮನವಿ ಮಾಡಿದ್ದರು.

    ಇದನ್ನು ಗಂಭೀರವಾಗಿ ಪರಿಗಣಿಸಿದ ಮಾನವ ಹಕ್ಕುಗಳ ಆಯೋಗದ, ಕಾರ್ಮಿಕ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗೆ ಪ್ರಕರಣವನ್ನು ವರ್ಗಾವಣೆ ಮಾಡಿ ತನಿಖೆಗೆ ಸೂಚಿಸಿದೆ. ಮತ್ತೊಂದೆಡೆ ಮನಸ್ಸಿಲ್ಲದ ಮನಸ್ಸಿನಲ್ಲಿ ಸಬ್ ರಿಜಿಸ್ಟ್ರಾರ್ ಕಚೇರಿ ಅಧಿಕಾರಿ, ಸಿಬ್ಬಂದಿ ಬೆಳಗ್ಗೆ 8 ರಿಂದ ರಾತ್ರಿ 8 ಗಂಟೆ ವರೆಗೂ ಸೇವೆ ಸಲ್ಲಿಸುತ್ತಿದ್ದು, ವೈಯಕ್ತಿಕ ಕೆಲಸಗಳಿಗೆ ಅಡ್ಡಿ ಉಂಟಾಗಿದೆ. ಕಂದಾಯ ಇಲಾಖೆ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಗಂಡ-ಹೆಂಡಿರ ಜಗಳ ಕೊಚ್ಚಿ ಚುಚ್ಚಿಕೊಳ್ಳುವ ತನಕ; ಪತ್ನಿಯ ಸಾವು, ಪತಿ ಪರಿಸ್ಥಿತಿ ಗಂಭೀರ..

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts