ಆಂಧ್ರಪ್ರದೇಶ: ತೆಲುಗು ಮತ್ತು ತಮಿಳು ಚಿತ್ರರಂಗದಲ್ಲಿ ತನ್ನ ಕೆಲಸಗಳಿಂದಲೇ ಹೆಚ್ಚು ಗುರುತಿಸಿಕೊಂಡಿರುವ ಡ್ಯಾನ್ಸ್ ಕೋರಿಯೋಗ್ರಾಫರ್ ಶೈಖ್ ಜಾನಿ ಬಾಷಾ ಅಲಿಯಾಸ್ ಜಾನಿ ಮಾಸ್ಟರ್ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಕೇಳಿಬಂದಿದೆ. 21 ವರ್ಷದ ಅನಾಮಧೇಯ ಯುವತಿಯೊಬ್ಬಳು ತನ್ನ ಮೇಲೆ ಜಾನಿ ಮಾಸ್ಟರ್ ಎಂದೇ ಜನಪ್ರಿಯತೆ ಪಡೆದಿರುವ ವ್ಯಕ್ತಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಇದೀಗ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಇದನ್ನೂ ಓದಿ: ವಿಶ್ವ ದಾಖಲೆ ಬರೆದ ಪ್ರಜಾಪ್ರಭುತ್ವ ದಿನ
ವರದಿಯ ಪ್ರಕಾರ, ಹೈದರಾಬಾದ್‌ನ ರಾಯದುರ್ಗಂ ಪೊಲೀಸರಿಗೆ ದೂರು ನೀಡಿರುವ ದೂರುದಾರ ಯುವತಿ, ಜಾನಿ ಮಾಸ್ಟರ್ ಕಳೆದ ಕೆಲವು ತಿಂಗಳುಗಳಿಂದ ತನಗೆ ಲೈಂಗಿಕ ಕಿರುಕುಳ ನೀಡುತ್ತಿದ್ದರು. ತಮ್ಮ ಹೊರಾಂಗಣ ಚಿತ್ರೀಕರಣದ ವೇಳೆ ಈ ಘಟನೆಗಳು ಸಂಭವಿಸಿವೆ ಎಂದು ಆಕೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ರಾಯದುರ್ಗ ಪೊಲೀಸರು ಜೀರೋ ಎಫ್‌ಐಆರ್ ದಾಖಲಿಸಿದ್ದು, ಇದೀಗ ದೂರನ್ನು ನರಸಿಂಗಿ ಪೊಲೀಸರಿಗೆ ವರ್ಗಾಯಿಸಿದ್ದಾರೆ ಎನ್ನಲಾಗಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಮಾತನಾಡಿ, “ಚೆನ್ನೈ, ಮುಂಬೈ ಮತ್ತು ಹೈದರಾಬಾದ್ ಸೇರಿದಂತೆ ವಿವಿಧ ನಗರಗಳಲ್ಲಿ ಚಿತ್ರೀಕರಣದ ಸಮಯದಲ್ಲಿ ಜಾನಿ ತನ್ನ ಮೇಲೆ ಅನೇಕ ಬಾರಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ದೂರುದಾರರು ತಿಳಿಸಿದ್ದಾರೆ. ಇದಲ್ಲದೇ ಆತ ನರಸಿಂಗಿಯಲ್ಲಿರುವ ಯುವತಿಯ ನಿವಾಸದಲ್ಲಿ ಹಲವಾರು ಬಾರಿ ಆಕೆ ಮೇಲೆ ಹಲ್ಲೆ ನಡೆಸಿದ್ದಾನೆ ಎಂದು ಹೇಳಿದ್ದಾರೆ. ಯುವತಿ ನರಸಿಂಗಿ ಮೂಲದ ನಿವಾಸಿಯಾಗಿದ್ದು, ಪ್ರಕರಣವನ್ನು ಅಲ್ಲಿನ ಪೊಲೀಸರಿಗೆ ವರ್ಗಾಯಿಸಿದ್ದೇವೆ. ಪ್ರಕರಣದ ಮುಂದಿನ ತನಿಖೆಯನ್ನು ನರಸಿಂಗಿ ಪೊಲೀಸರು ಕೈಗೊಳ್ಳಲಿದ್ದಾರೆ” ಎಂದು ಹೇಳಿದರು.
ಇದನ್ನೂ ಓದಿ: ಕೋಲ್ಕತ ಹತ್ಯೆ ಕೇಸ್: ತನಿಖಾಧಿಕಾರಿಗಳ ಕಣ್ಣಿಗೆ ಮಣ್ಣೆರಚುವ ಪ್ರಯತ್ನ! ಸಂದೀಪ್ ವಿರುದ್ಧ ಸಿಬಿಐ ಗರಂ
ಜಾನಿ ಮಾಸ್ಟರ್ ವಿರುದ್ಧ ಐಪಿಸಿಯ ಸೆಕ್ಷನ್ 376 (ಅತ್ಯಾಚಾರ), ಕ್ರಿಮಿನಲ್ ಬೆದರಿಕೆ (506) ಮತ್ತು ಸ್ವಯಂಪ್ರೇರಣೆಯಿಂದ ಗಾಯಗೊಳಿಸುವುದು (323) ಕಲಂ (2) ಮತ್ತು (ಎನ್) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಜಾನಿ ಮಾಸ್ಟರ್ ವಿರುದ್ಧ ದೂರು ದಾಖಲಾಗಿರುವುದು ಇದೇ ಮೊದಲಲ್ಲ, ಈ ವರ್ಷದ ಜೂನ್‌ನಲ್ಲಿ ಡ್ಯಾನ್ಸರ್ ಸತೀಶ್ ಕೂಡ ಜಾನಿ ಮಾಸ್ಟರ್ ವಿರುದ್ಧ ದೂರು ನೀಡಿದ್ದರು. ಜಾನಿ ಸಿನಿಮಾ ಶೂಟಿಂಗ್‌ನಲ್ಲಿ ಕೆಲಸ ಕೊಡಿಸದಂತೆ ತಡೆಯುತ್ತಿದ್ದಾರೆ ಎಂದು ಸತೀಶ್ ಆರೋಪಿಸಿದ್ದರು,(ಏಜೆನ್ಸೀಸ್).
ಪ್ರಿಯಕರನ ಆ ಒಂದು ಕಂಡಿಷನ್ಗೆ ಹೆದರಿ ಬ್ರೇಕಪ್ ಮಾಡಿಕೊಂಡ ‘ಸೀತಾ ಮಹಾಲಕ್ಷ್ಮಿ’! 7 ತಿಂಗಳ ಹಿಂದಿನ ರಹಸ್ಯ ಬಯಲು