ಪುಣೆ ಜಿಲ್ಲಾಧಿಕಾರಿ ವಿರುದ್ಧ ಕಿರುಕುಳ ಆರೋಪ! ಏನಿದು ಟ್ರೈನಿ IAS ಅಧಿಕಾರಿ ಪೂಜಾ ಖೇಡ್ಕರ್ ಹೊಸ ಡ್ರಾಮಾ?

Pooja Khedkar

ಮುಂಬೈ: ಇತ್ತೀಚೆಗಷ್ಟೇ ಭಾರೀ ಚರ್ಚೆಗೆ ಗ್ರಾಸವಾಗಿದ್ದ ಮಹಾರಾಷ್ಟ್ರದ ಟ್ರೈನಿ ಐಎಎಸ್​ ಅಧಿಕಾರಿಯಾಗಿರುವ ಪೂಜಾ ಖೇಡ್ಕರ್, ಒಬ್ಬ ಅಧಿಕಾರಿಗೆ ಸರ್ಕಾರ ಕೊಡುವ ಸವಲತ್ತುಗಳನ್ನು ಮೀರಿ ತನಗೆ ಹೇಗೆ ಬೇಕೋ ಹಾಗೆ ಅಧಿಕಾರ ದುರ್ಬಳಕೆ ಮಾಡಿಕೊಂಡ ರೀತಿಗೆ ರಾಜ್ಯ ಸರ್ಕಾರ ಛೀಮಾರಿ ಹಾಕಿತ್ತು. ಪುಣೆಯಲ್ಲಿ ಟ್ರೈನಿ ಕಲೆಕ್ಟರ್ ಆಗಿ ಕೆಲಸ ನಿರ್ವಹಿಸುತ್ತಿದ್ದ ಪೂಜಾ ಅಧಿಕಾರ ದುರ್ಬಳಕೆ ಅತಿಯಾದ ಹಿನ್ನೆಲೆ ಸರ್ಕಾರವೇ ಕ್ರಮ ಕೈಗೊಂಡಿದ್ದು, ವಾಶಿಮ್‌ನಲ್ಲಿ ಸೂಪರ್‌ನ್ಯೂಮರರಿ ಸಹಾಯಕ ಕಲೆಕ್ಟರ್ ಆಗಿ ಕೆಲಸ ಮಾಡಲು ನಿರ್ದೇಶಿಸಿತು.

ಇದನ್ನೂ ಓದಿ: ರೈತರ ಸಾಲಮನ್ನಾಕ್ಕೆ  ಒತ್ತಾಯಿಸಿ  ಎಐಕೆಕೆಎಂಎಸ್ ಪ್ರತಿಭಟನೆ

ಪ್ರೊಬೇಷನರಿ ಐಎಎಸ್ ಅಧಿಕಾರಿಯಾಗಿದ್ದ ಪೂಜಾ ಖೇಡ್ಕರ್ ಪ್ರಕರಣ ತನಿಖೆಯಲ್ಲಿದ್ದು, ಇದರ ಬೆನ್ನಲ್ಲೇ ಆಕೆಯ ಪೋಷಕರನ್ನು ಹುಡುಕುತ್ತಿರುವ ಪೊಲೀಸರು, ವಿಚಾರಣೆಗೆ ಬರುವಂತೆ ಖಡಕ್ ಸೂಚನೆ ರವಾನಿಸಿದ್ದರು. ಫೋನ್​ ಸ್ವಿಚ್​​ಆಫ್​ ಮಾಡಿಕೊಂಡು ಮನೆಯಿಂದ ನಾಪತ್ತೆಯಾಗಿದ್ದಾರೆ. ಇದೆಲ್ಲದರ ಮಧ್ಯೆ ಇದೀಗ ಪುಣೆ ಜಿಲ್ಲಾಧಿಕಾರಿ ಸುಹಾಸ್ ದಿವಾಸೆ ವಿರುದ್ಧ ಕಿರುಕುಳದ ಆರೋಪ ಹೊರಿಸಿರುವ ಪೂಜಾ, ಈ ಕುರಿತು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ವಾಶಿಮ್‌ನಲ್ಲಿ ಪುಣೆ ಜಿಲ್ಲಾಧಿಕಾರಿ ಸುಹಾಸ್ ದಿವಾಸೆ ವಿರುದ್ಧ ಪೂಜಾ ಕಿರುಕುಳ ಆರೋಪ ಹೊರಿಸಿ, ದೂರು ದಾಖಲಿಸುತ್ತಿದ್ದಂತೆ ಆಕೆಯ ನಿವಾಸಕ್ಕೆ ಭೇಟಿ ನೀಡಿದ ಮಹಿಳಾ ಪೊಲೀಸ್ ಸಿಬ್ಬಂದಿ, ಖೇಡ್ಕರ್​ ಅವರಿಂದ ಹೆಚ್ಚಿನ ಮಾಹಿತಿ ಪಡೆದುಕೊಂಡಿದ್ದಾರೆ ಎಂದು ಅಧಿಕಾರಿಯೊಬ್ಬರು ಮಾಹಿತಿ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: ನಾಲ್ವರು ಸೈನಿಕರು ಹುತಾತ್ಮ: ಕಾಶ್ಮೀರದಲ್ಲಿ ಭಯೋತ್ಪಾದಕರ ರಣಕೇಕೆ | ಪ್ರತಿಪಕ್ಷಗಳಿಂದ ತೀವ್ರ ಟೀಕೆ

ಅತ್ತ ತನ್ನ ಪೋಷಕರು ಪೊಲೀಸರ ಕಣ್ತಪ್ಪಿಸಿ, ಮನೆಯಿಂದ ಪರಾರಿಯಾದರೆ, ಇತ್ತ ಪುಣೆಯಿಂದ ವಾಶಿಮ್​ಗೆ ವರ್ಗಾವಣೆಯಾಗಿರುವ ಪೂಜಾ, ಜಿಲ್ಲಾಧಿಕಾರಿ ಸುಹಾಸ್​ ವಿರುದ್ಧ ಈಗ ಕಿರುಕುಳ ಆರೋಪ ಹೊರಿಸಿದ್ದಾರೆ. ಮೇಲ್ನೋಟಕ್ಕೆ ಖೇಡ್ಕರ್ ಹೇಳಿಕೆಗಳನ್ನು ಆಲಿಸಿರುವ ಪೊಲೀಸರು, ದೂರನ್ನು ಪರಿಶೀಲಿಸಿ ಮುಂದೆ ಯಾವ ಕ್ರಮ ಕೈಗೊಳ್ಳಲಿದ್ದಾರೆ ಎಂಬುದನ್ನು ಸದ್ಯ ಕಾದನೋಡಬೇಕಿದೆ,(ಏಜೆನ್ಸೀಸ್).

https://www.vijayavani.net/bengaluru-woman-lost-gold-ornaments-in-a-different-way/

Share This Article

ಮಧ್ಯಾಹ್ನ, ರಾತ್ರಿ ಊಟದಲ್ಲಿ ಜಾಸ್ತಿ ಉಪ್ಪು ಸೇವಿಸಿದ್ರೆ ಕ್ಯಾನ್ಸರ್‌ ಬರೋದು ಪಕ್ಕಾ! ಇರಲಿ ಎಚ್ಚರ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…

ಮಕ್ಕಳಿಗೆ ಬಾಳೆಹಣ್ಣು ಕೊಡುವ ಮುನ್ನ ಈ ವಿಚಾರಗಳು ನಿಮಗೆ ಗೊತ್ತಿರಲಿ ಇಲ್ಲದಿದ್ರೆ ಆರೋಗ್ಯ ಕೆಡಬಹುದು ಎಚ್ಚರ!

ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…

ತೂಕ ಕಳೆದುಕೊಂಡಿದ್ದೀರಾ? ಲಘುವಾಗಿ ಪರಿಗಣಿಸಬೇಡಿ, ನಿಮಗೆ ಈ ಆರೋಗ್ಯ ಸಮಸ್ಯೆಗಳಿರಬಹುದು!

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…

ಈ ಸುದ್ದಿಗಳನ್ನೂ ಮಿಸ್​ ಮಾಡ್ಬೇಡಿ