More

    ನಟ ಶಿವರಾಜ್​ಕುಮಾರ್​ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು; ಕಾರಣ ಹೀಗಿದೆ

    ಬೆಂಗಳೂರು: ರಾಜ್ಯದಲ್ಲಿ ಲೋಕಸಭೆ ಚುನಾವಣೆಯ ಕಾವು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಅಭ್ಯರ್ಥಿಗಳು ಮತದಾರರನ್ನು ತಮ್ಮತ್ತ ಸೆಳೆಯಲು ಇನ್ನಿಲ್ಲದ ಕಸರತ್ತನ್ನು ಮಾಡುತ್ತಿದ್ದಾರೆ. ಈಗಾಗಲೇ ಟಿಕೆಟ್​ ಗಿಟ್ಟಿಸಿಕೊಂಡಿರುವ ಅಭ್ಯರ್ಥಿಗಳು ಪ್ರಚಾರ ಕಾರ್ಯ ಆರಂಭಿಸಿದ್ದು, ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಪತ್ನಿ ಗೀತಾ ಪರ ಹ್ಯಾಟ್ರಿಕ್​ ಹೀರೋ ಡಾ. ಶಿವರಾಜ್​ಕುಮಾರ್​ ಬಿರುಸಿನ ಪ್ರಚಾರ ಮಾಡುತ್ತಿದ್ದಾರೆ.

    ಇದೀಗ ಶಿವರಾಜ್​ಕುಮಾರ್​ ವಿರುದ್ಧ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು ಸಲ್ಲಿಸಿದ್ದು, ಅವರ ನಟನೆಯ ಚಿತ್ರ, ಜಾಹೀರಾತು ಹಾಗೂ ಬ್ಯಾನರ್​ಗಳನ್ನು ನಿಷೇಧಿಸುವಂತೆ ಒಬಿಸಿ ಮೋರ್ಚಾ ಆಗ್ರಹಿಸಿದೆ. ಮೋರ್ಚಾದ ಅಧ್ಯಕ್ಷ ಆರ್​. ರಘು ಅವರು ಚುನಾವಣಾ ಅಧಿಕಾರಿಗಳಿಗೆ ಪತ್ರ ಬರೆದು ಕ್ರಮಕ್ಕೆ ಆಗ್ರಹಿಸಿದ್ದಾರೆ.

    ಇದನ್ನೂ ಓದಿ: ಸಿಎಸ್​ಕೆ ನಾಯಕತ್ವ ದಿಢೀರ್​ ಹಸ್ತಾಂತರ; ಧೋನಿ ನಿರ್ಧಾರದ ಬಗ್ಗೆ ಕೋಚ್​ ಫ್ಲೆಮಿಂಗ್​ ಹೇಳಿದ್ದಿಷ್ಟು

    ಪತ್ರದಲ್ಲೇನಿದೆ?

    ರಾಜ್ಯದಲ್ಲಿ ಪ್ರಭಾವಿ ವ್ಯಕ್ತಿ ಆಗಿರುವ ಶಿವರಾಜ್​ಕುಮಾರ್​ ಅವರು ರಾಜ್ಯದ್ಯಂತ ಕಾಂಗ್ರೆಸ್​ ಪಕ್ಷದ ಪರ ಚುನಾವಣಾ ಪ್ರಚಾರ ಮಾಡುತ್ತಿದ್ದಾರೆ. ಸಿನಿಮಾ ಮತ್ತು ವೈಯಕ್ತಿಕ ವರ್ಚಸ್ಸಿನ ಮೂಲಕ ಅವರು ರಾಜ್ಯದಲ್ಲಿ ಪ್ರಭಾವ ಹೊಂದಿದ್ದಾರೆ. ಲೋಕಸಭಾ ಚುನಾವಣೆ ಮುಗಿಯುವ ತನಕ ಶಿವರಾಜ್​ಕುಮಾರ್​ ಅವರ ಸಿನಿಮಾ, ಜಾಹೀರಾತು, ಬಿಲ್​ಬೋರ್ಡ್​ಗಳನ್ನು ಪ್ರದರ್ಶನ ಮಾಡದಂತೆ ಚಿತ್ರಮಂದಿರ, ಟಿವಿ ಚಾನೆಲ್​, ಸೋಶಿಯಲ್​ ಮೀಡಿಯಾ ಹಾಗೂ ಸ್ಥಳೀಯ ಸಂಸ್ಥೆಗಳಿಗೆ ಆದೇಶ ನೀಡಬೇಕು ಎಂದು ಚುನಾವಣಾ ಆಯೋಗಕ್ಕೆ ಮನವಿ ಮಾಡಿಕೊಳ್ಳುತ್ತೇನೆ. ಚುನಾವಣಾ ಆಯೋಗವು ನ್ಯಾಯಯುತವಾದ ಚುನಾವಣೆಯನ್ನು ನಡೆಸುತ್ತದೆ ಎಂದು ನನಗೆ ಭರವಸೆ ಇದೆ. ನನ್ನ ಮನವಿಗೆ ಆಯೋಗವು ಸ್ಪಂದಿಸುತ್ತದೆ ಮತ್ತು ಸೂಕ್ತ ಕ್ರಮ ಕೈಗೊಳ್ಳುತ್ತದೆ ಎಂದು ನಂಬಿದ್ದೇನೆ ಎಂದು ಬಿಜೆಪಿ ಒಬಿಸಿ ಮೋರ್ಚಾ ಅಧ್ಯಕ್ಷ ರಘು ಬರೆದಿರುವ ಪತ್ರದಲ್ಲಿ ಉಲ್ಲೇಖಿಸಲಾಗಿದೆ.

    ಕರ್ನಾಟಕದಲ್ಲಿ ಎರಡು ಹಂತಗಳಲ್ಲಿ ಲೋಕಸಭಾ ಚುನಾವಣೆ ನಡೆಯಲಿದೆ. ಮೊದಲ ಹಂತದಲ್ಲಿ 14 ಕ್ಷೇತ್ರಗಳಿಗೆ ಏಪ್ರಿಲ್​ 26ರಂದು ಮತದಾನ ನಡೆಯಲಿದ್ದು, 2ನೇ ಹಂತದಲ್ಲಿ ಮೇ 7ರಂದು ಇನ್ನುಳಿದ 14 ಕ್ಷೇತ್ರಗಳಲ್ಲಿ ಮತನಾದ ನಡೆಯಲಿದೆ. ಗೀತಾ ಶಿವರಾಜ್​ಕುಮಾರ್​ ಸ್ಪರ್ಧಿಸುತ್ತಿರುವ ಶಿವಮೊಗ್ಗದಲ್ಲಿ ಮೇ 7ರಂದು ಮತದಾನ ನಡೆಯಲಿದ್ದು, ಜೂನ್​​ 04ರಂದು ಫಲಿತಾಂಶ ಪ್ರಕಟವಾಗಲಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts