ದೂರು ಇತ್ಯರ್ಥಕ್ಕೆ ಇಲಾಖೆ ಪತ್ರ

ಹಟ್ಟಿಚಿನ್ನದಗಣಿ: ಪರಿಶಿಷ್ಟರು ತೊಂದರೆ ಅನುಭವಿಸಿದಲ್ಲಿ ಠಾಣೆಗೆ ದೂರು ಸಲ್ಲಿಸಬೇಕು ಎಂದು ಸಿಪಿಐ ಕೆ.ಹೊಸಕೇರಪ್ಪ ಹೇಳಿದರು.

ಇದನ್ನೂ ಓದಿ: ದೃಢ ಸಂಕಲ್ಪದಿಂದ ಸಮಸ್ಯೆಗೆ ಪರಿಹಾರ

ಸ್ಥಳೀಯ ಠಾಣೆಯಲ್ಲಿ ಆಯೋಜಿಸಿದ್ದ ಎಸ್ಸಿ-ಎಸ್ಟಿ ಕುಂದುಕೊರತೆ ಸಭೆಯಲ್ಲಿ ಭಾನುವಾರ ಮಾತನಾಡಿದರು. ಎಲ್ಲ ಇಲಾಖೆ ಮುಖ್ಯಸ್ಥರನ್ನು ಸಭೆಗೆ ಆಹ್ವಾನಿಸಿದ್ದು, ಕೆಲ ಸಮಸ್ಯೆಗಳಿಗೆ ಪರಿಹಾರ ನೀಡಲಾಗಿದ್ದು, ದೂರುಗಳನ್ನು ಇತ್ಯರ್ಥಗೊಳಿಸಲು ಇಲಾಖೆಗೆ ಪತ್ರ ಬರೆಯುವುದಾಗಿ ತಿಳಿಸಿದರು.

ಗಣಿ ಕಂಪನಿಗೆ ಭೂಮಿ ಕಳೆದುಕೊಂಡ ಸಂತ್ರಸ್ತರಿಗೆ ನೌಕರಿ ನೀಡಬೇಕು. ಬಸ್ ನಿಲ್ದಾಣದಲ್ಲಿ ರಸ್ತೆ ಬದಿ ಅಂಗಡಿ ತೆರವು ಹಾಗೂ ವಿದ್ಯಾರ್ಥಿನಿಯರಿಗೆ ರಕ್ಷಣೆ, ಅಸ್ಪೃಶ್ಯತೆ ಆಚರಣೆ ಹಾಗೂ ವಿದ್ಯಾರ್ಥಿಗಳಿಗೆ ಪಟ್ಟಣ ಪಂಚಾಯಿತಿಯಿಂದ ಪುಸ್ತಕ ನೀಡುವುದು ಸೇರಿ ಎಲ್ಲ ಸಮಸ್ಯೆಗಳನ್ನು ಅಧಿಕಾರಿಗಳು ಈಡೇರಿಸುವ ಭರವಸೆ ನೀಡಿದರು.

ಕೋಠಾ ದಲಿತ ಮುಖಂಡ ಶಿವಣ್ಣ, ಅಂಬೇಡ್ಕರ್ ಸಂಘದ ಗೌರವ ಅಧ್ಯಕ್ಷ ಎಚ್.ಎ.ಲಿಂಗಪ್ಪ, ದಲಿತ ಸಂಘರ್ಷ ಸಮಿತಿ ತಾಲೂಕು ಅಧ್ಯಕ್ಷ ಯಲ್ಲಪ್ಪ ಮಾಚನೂರು, ಮಾನವ ಬಂಧುತ್ವ ವೇದಿಕೆ ತಾಲೂಕು ಸಂಚಾಲಕ ಮಲ್ಲಿಕಾರ್ಜುನ್ ಚಿತ್ರನಾಳ್,

ಅಂಬೇಡ್ಕರ್ ಯುವಕ ಮಂಡಳಿ ಅಧ್ಯಕ್ಷ ವಿನೋದ ಕಮಲದಿನ್ನಿ, ಗಣಿ ಕಂಪನಿ ಕಲ್ಯಾಣ ಅಧಿಕಾರಿ ಸುರೇಶ್ ಆರ್.ಸಿ, ತಾ.ಪಂ ಯೋಜನಾಧಿಕಾರಿ ಮಹಿಬೂಬ, ಕಂದಾಯ ನಿರೀಕ್ಷಕ ಮಲ್ಲಿಕಾರ್ಜುನ, ಜೆಸ್ಕಾಂ ಜೆಇ ರೆಡ್ಡೆಪ್ಪ, ಪ.ಪಂ ಆರೋಗ್ಯ ನಿರೀಕ್ಷಕ ಚಂದ್ರಶೇಖರ್, ಪಿಎಸೈ ಧರ್ಮಪ್ಪ, ಪ್ರಮುಖರಾದ ಮೌನೇಶ ತಪ್ಪಲದೊಡ್ಡಿ ಇತರರಿದ್ದರು.

Share This Article

ನೀವು ಎಷ್ಟು ಆರೋಗ್ಯವಂತರೆಂದು ತಿಳಿಯಲು ನಿಮ್ಮ ನಾಲಿಗೆ ಬಣ್ಣ ಚೆಕ್​ ಮಾಡಿ! ಈ ಬಣ್ಣದಲ್ಲಿದ್ರೆ ತುಂಬಾ ಡೇಂಜರ್​!

ಪ್ರತಿಯೊಬ್ಬರೂ ಆರೋಗ್ಯವಾಗಿರಲು ಬಯಸುತ್ತಾರೆ. ಏಕೆಂದರೆ, ಆರೋಗ್ಯವೇ ಭಾಗ್ಯ. ಎಲ್ಲ ಇದ್ದು ಆರೋಗ್ಯವೇ ಇಲ್ಲದಿದ್ದರೆ ಏನು ಪ್ರಯೋಜನಾ?…

ನಿಮ್ಮ ಜೀವಕ್ಕೆ ಅಪಾಯವನ್ನುಂಟುಮಾಡುವ ಈ 5 ಜನರ ಬಳಿ ನೀವು ಎಂದಿಗೂ ಹೋಗಬೇಡಿ

ಭಾರತದ ಉತ್ತಮ ವಿದ್ವಾಂಸರಲ್ಲಿ ಚಾಣಕ್ಯರು ಒಬ್ಬರು. ಆಡು ಮುಟ್ಟದ ಸೊಪ್ಪಿಲ್ಲ ಎಂಬಂತೆ ಚಾಣಕ್ಯ ತಿಳಿಯದ ವಿಷಯವು…

ಈ ದಿನಾಂಕದಂದು ಜನಿಸಿದವರ ಮೇಲೆ ಲಕ್ಷ್ಮೀ ಕೃಪೆ ಹೆಚ್ಚು! ಹಣದ ಕೊರತೆ ಕಾಡುವುದಿಲ್ಲ, ನೀವೂ ಹುಟ್ಟಿದ್ದು ಇದೇ ದಿನಾನಾ?

ಜ್ಯೋತಿಷ್ಯಶಾಸ್ತ್ರದಲ್ಲಿ ಸಂಖ್ಯಾಶಾಸ್ತ್ರವೂ ಒಂದು. ಇದರ ಪ್ರಕಾರ ವ್ಯಕ್ತಿಯ ಜನ್ಮ ದಿನಾಂಕವು ಅವನ ವ್ಯಕ್ತಿತ್ವದ ಬಗ್ಗೆ ಮತ್ತು…