21 C
Bengaluru
Thursday, January 23, 2020

ಕಸ್ಟಮ್ಸ್​ ಅಧಿಕಾರಿಗಳ ವಿರುದ್ಧ ಸಿಬಿಐಗೆ ದೂರು

Latest News

ಮೊಕದ್ದಮೆ ಹಿಂಪಡೆಯಲು ಒತ್ತಾಯ

ಮೈಸೂರು: ಮಾನಸಗಂಗೋತ್ರಿಯಲ್ಲಿ ಎನ್‌ಆರ್‌ಸಿ, ಸಿಎಎ ವಿರೋಧಿಸಿ ನಡೆದ ಪ್ರತಿಭಟನೆ ಸಂದರ್ಭ ‘ಫ್ರೀ ಕಾಶ್ಮೀರ’ ಫಲಕ ಪ್ರದರ್ಶನಕ್ಕೆ ಸಂಬಂಧಿಸಿದಂತೆ ವಿದ್ಯಾರ್ಥಿಗಳ ಮೇಲೆ ಹೂಡಿರುವ ಮೊಕದ್ದಮೆ...

ವಿದ್ಯಾಭ್ಯಾಸದ ಸಂದರ್ಭ ಪ್ರತಿಭಟನೆ ಬೇಡ

ಮೈಸೂರು: ಶಿಕ್ಷಣಕ್ಕೆ ಸಂಬಂಧಿಸಿದ ಸಮಸ್ಯೆಗಳಿದ್ದಲ್ಲಿ ವಿಶ್ವವಿದ್ಯಾಲಯಗಳ ಒಳಗೆ ಬಗೆಹರಿಸಿಕೊಳ್ಳಬೇಕೇ ಹೊರತು, ವಿದ್ಯಾಭ್ಯಾಸದ ಸಂದರ್ಭದಲ್ಲಿ ಪ್ರತಿಭಟನೆಗಳಿಗೆ ಮುಂದಾಗಬಾರದು ಎಂದು ಲೋಕಾಯುಕ್ತ ನಿವೃತ್ತ ನ್ಯಾಯಮೂರ್ತಿ ಸಂತೋಷ್...

ಮಹಿಳೆಯರಿಗೆ ಶೇ.50ರಷ್ಟು ಮೀಸಲಾತಿ ಜಾರಿಗೊಳಿಸಿ

ಮೈಸೂರು: ವಿಧಾನಸಭೆ, ಲೋಕಸಭೆಯಲ್ಲಿ ಮಹಿಳೆಯರಿಗೆ ಶೇ. 50ರಷ್ಟು ಮೀಸಲಾತಿ ಜಾರಿಗೊಳಿಸಬೇಕು ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದರು. ಕರ್ನಾಟಕ ಪ್ರದೇಶ ಮಹಿಳಾ...

ಕೇಂದ್ರದ ಬಿಜೆಪಿ ಸರ್ಕಾರ ಬಿದ್ದ ದಿನ ಪೌರತ್ವ ತಿದ್ದುಪಡಿ ಕಾಯ್ದೆಯೂ ರದ್ದಾಗುತ್ತದೆ: ನಿವೃತ್ತ ಐಎಎಸ್​ ಅಧಿಕಾರಿ ಕಣ್ಣನ್​ ಗೋಪಿನಾಥನ್​

ಧಾರವಾಡ: ಪೌರತ್ವ ತಿದ್ದುಪಡಿ ಕಾಯ್ದೆ ಇಡೀ ರಾಷ್ಟ್ರಕ್ಕೆ ಸಂಬಂಧಿಸಿದ ಹಿನ್ನೆಲೆಯಲ್ಲಿ ಎಲ್ಲ ರಾಜ್ಯಗಳಲ್ಲೂ ಹೋರಾಟ ತೀವ್ರಗೊಂಡಿದೆ ಎಂದು ನಿವೃತ್ತ ಐಎಎಸ್​ ಅಧಿಕಾರಿ ಕಣ್ಣನ್​...

ಕಾಲೇಜ್ ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ

ಹಾವೇರಿ: ಇಲ್ಲಿನ ಪಿಬಿ ರಸ್ತೆಯಲ್ಲಿರುವ ಜಿಎಚ್ ಕಾಲೇಜ್​ನಲ್ಲಿ ಹೆಜ್ಜೇನು ದಾಳಿಯಿಂದ 30ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ಬುಧವಾರ ಮಧ್ಯಾಹ್ನ ಸಂಭವಿಸಿದೆ.

ಬೆಂಗಳೂರು: ವಿದೇಶದಿಂದ ಸರಕು ತರುವ ಸೋಗಿನಲ್ಲಿ ಗೋಲ್ಡ್ ಸ್ಮಗ್ಲಿಂಗ್ ನಡೆಸುವವರಿಂದ ಲಂಚ ಪಡೆದು ಸಹಕರಿಸಿದ್ದಾರೆ ಎನ್ನಲಾದ ಪ್ರಕರಣದಲ್ಲಿ 21 ಕಸ್ಟಮ್್ಸ ಅಧಿಕಾರಿಗಳ ವಿರುದ್ಧ ಸಿಬಿಐಗೆ ಆರೋಪಿಯೇ ದೂರು ನೀಡಿದ್ದಾನೆ.

ಚಿನ್ನ ಕಳ್ಳಸಾಗಣೆ ದಂಧೆ ನಡೆಸುತ್ತಿದ್ದ ಎಚ್​ಎಎಲ್ ನಿವಾಸಿ ಕೃಪಾಲಿನಿ ಎಂಬಾತನ ವಿರುದ್ಧ 2015ರಲ್ಲಿ ಕಸ್ಟಮ್್ಸ ಅಧಿಕಾರಿಗಳು ಪ್ರಕರಣ ದಾಖಲಿಸಿ ಆತನ ಮನೆ ಮೇಲೆ ದಾಳಿ ನಡೆಸಿ ದಾಖಲೆ ಜಪ್ತಿ ಮಾಡಿದ್ದರು. ಕೃಪಾಲಿನಿ 2019ರಲ್ಲಿ 21 ಕಸ್ಟಮ್್ಸ ಅಧಿಕಾರಿಗಳು ಹಾಗೂ 8 ಖಾಸಗಿ ವ್ಯಕ್ತಿಗಳ ವಿರುದ್ಧ ದೂರು ನೀಡಿದ್ದು, ಸಿಬಿಐ ತನಿಖೆ ಬಳಿಕ ಸತ್ಯಾಸತ್ಯತೆ ಬಹಿರಂಗಗೊಳ್ಳಲಿದೆ.

ಪ್ರಕರಣದ ವಿವರ: ಕೃಪಾಲಿನಿ ಕೆಲ ವರ್ಷದ ಹಿಂದೆ ಎಚ್​ಎಎಲ್​ನಲ್ಲಿ ನೆಕ್ಸಚ್ ಆಂಡ್ ಟೆಕ್ನಾಲಜಿ ಕಂಪನಿ ಆರಂಭಿಸಿ ವಿದೇಶದಿಂದ ಸರಕು ತರಿಸುತ್ತಿದ್ದ. 2015ರ ಸೆಪ್ಟೆಂಬರ್​ನಲ್ಲಿ ಕೃಪಾಲಿನಿಗೆ ಸೇರಿದ ಸರಕುಗಳು ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಬಂದಿತ್ತು. 2015ರ ಸೆ.4ರಂದು ಸರಕನ್ನು ವಿಮಾನ ನಿಲ್ದಾಣದ ಸುಂಕ ಅಧೀಕ್ಷಕರುಕ್ಲಿಯರ್ ಮಾಡಿದ್ದರು. ಬಳಿಕ ಗುಪ್ತಚರ ಇಲಾಖೆ ಅಧಿಕಾರಿಗಳು ಕೃಪಾಲಿನಿಗೆ ಸೇರಿದ ಸರಕನ್ನು ಪರಿಶೀಲಿಸುವಂತೆ ಕಸ್ಟಮ್್ಸ ಅಧಿಕಾರಿಗಳಿಗೆ ಸೂಚಿಸಿದ್ದರು. ಪರಿಶೀಲಿಸಿದಾಗ ಚಿನ್ನ ಕಳ್ಳಸಾಗಣೆ ಮಾಡುತ್ತಿದ್ದ ವಿಚಾರ ಬೆಳಕಿಗೆ ಬಂದಿತ್ತು.

ಜಾಮೀನು ಪಡೆದಿದ್ದ: ದಾಳಿ ಬಳಿಕ ಕೃಪಾಲಿನಿ ಸೆಷನ್ಸ್ ಕೋರ್ಟ್ ನಲ್ಲಿ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದ. 2015ರ ನ.21ಕ್ಕೆ ನ್ಯಾಯಾಲಯ ಜಾಮೀನು ಮಂಜೂರು ಮಾಡಿತ್ತು. ಆ ಸಂದರ್ಭದಲ್ಲಿ ತನ್ನ ಸರಕು ಕ್ಲಿಯರ್ ಮಾಡಿದ್ದಕ್ಕೆ ಕಸ್ಟಮ್್ಸ ಸೂಪರಿಂಟೆಂಡೆಂಟ್ 10 ಲಕ್ಷ ರೂ. ಲಂಚ ಪಡೆದಿರುವುದಾಗಿ ಕೃಪಾಲಿನಿ ಆರೋಪಿಸಿದ್ದ.

ಸಿಬಿಐಗೆ ದೂರು: 2 ವರ್ಷದ ಬಳಿಕ (2017 ಮಾ.14) ಪ್ರಕರಣಕ್ಕೆ ಸಂಬಂಧಿಸಿದಂತೆ 21 ಕಸ್ಟಮ್್ಸ ಅಧಿಕಾರಿಗಳು ಹಾಗೂ ತನ್ನ ವಿರುದ್ಧ ಸಾಕ್ಷಿಯಾಗಿದ್ದ 8 ಮಂದಿ ವಿರುದ್ಧ ಕೃಪಾಲಿನಿ ಸಿಬಿಐ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಿದ್ದ. ತನ್ನ ಸರಕು ಬಿಡುಗಡೆ ಮಾಡಲು 21 ಕಸ್ಟಮ್್ಸ ಅಧಿಕಾರಿಗಳು 10 ಲಕ್ಷ ರೂ.ಗೆ ಬೇಡಿಕೆಯಿಟ್ಟಿದ್ದರು ಎಂದು ದೂರಿನಲ್ಲಿ ಉಲ್ಲೇಖಿಸಿದ್ದ. ಸಿಬಿಐ ನ್ಯಾಯಾಲಯ ಪ್ರಕರಣದ ತನಿಖೆ ನಡೆಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿತ್ತು. ಆದರೆ, ಸಿಬಿಐಗೆ ತನಿಖೆ ನಡೆಸುವಂತೆ ಸೂಚಿಸಲು ಸಿಬಿಐ ಕೋರ್ಟ್​ಗೆ ಅಧಿಕಾರ ಇಲ್ಲ ಎಂದು ಕಸ್ಟಮ್ ಅಧಿಕಾರಿಗಳು ಹೈಕೋರ್ಟ್​ನಲ್ಲಿ ಅರ್ಜಿ ಸಲ್ಲಿಸಿದ್ದರು. ಹೈಕೋರ್ಟ್ ಸಿಬಿಐ ಅಧಿಕಾರಿಗಳ ಪರ ಆದೇಶ ನೀಡಿತ್ತು.

4 ವರ್ಷದ ಬಳಿಕ ಹೈಕೋರ್ಟ್​ಗೆ ಮೊರೆ: ಪ್ರಕರಣ ನಡೆದು 4 ವರ್ಷದ ಬಳಿಕ ಕೃಪಾಲಿನಿ ಹೈಕೋರ್ಟ್​ಗೆ ರಿಟ್ ಪಿಟಿಷನ್ ಹಾಕಿ ಕಸ್ಟಮ್್ಸ ಅಧಿಕಾರಿಗಳ ವಿರುದ್ಧ ತನಿಖೆ ನಡೆಸುವಂತೆ ನಿರ್ದೇಶನ ಪಡೆದುಕೊಂಡಿದ್ದ. ಈ ಆಧಾರದ ಮೇಲೆ ಸಿಬಿಐ 2017ರಲ್ಲಿ ಕಸ್ಟಮ್್ಸ ಅಧಿಕಾರಿಗಳು ಸೇರಿ 29 ಮಂದಿ ವಿರುದ್ಧ ಎಫ್​ಐಆರ್ ದಾಖಲಿಸಿಕೊಂಡಿತ್ತು. ಈ ಬೆಳವಣಿಗೆ ಬಳಿಕ ಕಸ್ಟಮ್್ಸ ಅಧಿಕಾರಿಗಳು ಸಿಬಿಐ ನ್ಯಾಯಾಲಯಕ್ಕೆ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದರು. ಇತ್ತೀಚೆಗೆ ಸಿಬಿಐ ನ್ಯಾಯಾಲಯ ಕಸ್ಟಮ್್ಸ ಅಧಿಕಾರಿಗಳಿಗೆ ಜಾಮೀನು ಮಂಜೂರು ಮಾಡಿದೆ.

ಹಣಕ್ಕಾಗಿ ಒತ್ತಾಯ ಮಾಡಿದರೆ ಅಪರಾಧ ಆಗುವುದಿಲ್ಲ. ಒತ್ತಾಯಿಸಿ ಹಣ ಪಡೆದಿರಬೇಕು. ಜತೆಗೆ ಕೆಲಸ ಬಾಕಿ ಇದ್ದರೆ ಅಪರಾಧವಾಗುತ್ತದೆ.

| ಸಿ.ಜಿ ಸುಂದರ್ ಹಿರಿಯ ವಕೀಲ

ಅವಿನಾಶ ಮೂಡಂಬಿಕಾನ

ವಿಡಿಯೋ ನ್ಯೂಸ್

VIDEO: ಮಾವುತನ ಊಟದ ಎಲೆಯಿಂದ ತುತ್ತು ಅನ್ನ ತಿಂದು, ನೆಟ್ಟಿಗರ...

ತಿರುವನಂತಪುರ: ಆನೆಗಳ ಆಟ, ದಾಳಿ, ಮರ ಹತ್ತುವುದು ಹೀಗೆ ಹಲವು ವಿಡಿಯೋಗಳು ಈಗಾಗಲೇ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿವೆ. ಆದರೆ ಈಗ ವೈರಲ್​ ಆಗಿರುವ ಆನೆಯ ವಿಡಿಯೋ ಸಾಮಾಜಿಕ ಬಳಕೆದಾರರ ಮನಸ್ಸು ಗೆದ್ದಿದೆ. ಹಸಿದ...

VIDEO| ರಾಷ್ಟ್ರಪತಿ ರಾಮನಾಥ್​ ಕೋವಿಂದ್​ರಿಂದ ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ...

ನವದೆಹಲಿ: ದೆಹಲಿಯ ರಾಷ್ಟ್ರಪತಿ ಭವನದಲ್ಲಿ ಇಂದು ನಡೆದ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ರಾಮನಾಥ್​ ಕೋವಿಂದ್​ ಅವರು ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಶಸ್ತಿ ಪ್ರದಾನ ಮಾಡಿದರು. ವಿವಿಧ ಕ್ಷೇತ್ರಗಳಲ್ಲಿ ಅದ್ವಿತೀಯ ಸಾಧನೆ ಮಾಡಿದ...

VIDEO| ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ...

ಲಖನೌ: ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ ಪೂರಕವಾದ ಘಟನೆ ಇದಾಗಿದೆ. ಉತ್ತರ ಪ್ರದೇಶದ ನೋಯ್ಡಾದಲ್ಲಿ ನಡೆದ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ನೋಯ್ಡಾದಲ್ಲಿ ಅಂಗಡಿ ಹೊರಭಾಗದಲ್ಲಿ ಇಟ್ಟಿದ್ದ ಬಾಕ್ಸ್​ನಿಂದ...

VIDEO| ನಟಿಯಾಗಿರೋ ಆಲಿಯಾ ಇದೀಗ ಶೆಫ್​: ಬಾಲಿವುಡ್​ ಬ್ಯೂಟಿಯ ಅಡುಗೆ...

ಮುಂಬೈ: ಬಾಲಿವುಡ್​ ಬ್ಯೂಟಿ ಆಲಿಯಾ ಭಟ್ ನಟನೆ ಜತೆಗೆ ಹೊಸ ಸಾಹಸಕ್ಕೆ ಕೈಹಾಕಿದ್ದಾರೆ. ನಟಿಯಾಗಿರುವ ಆಲಿಯಾ ಇದೀಗ ಶೆಫ್ ಆಗಿದ್ದು, ಹೊಸ ಬಗೆಯ ಅಡುಗೆ ಪರಿಚಯಿಸಲು ಮುಂದಾಗಿದ್ದಾರೆ. ಯೂಟ್ಯೂಬ್​ನಲ್ಲಿ ಆಲಿಯಾ ಭಟ್...

VIDEO| ಅತಿವೇಗದ ಎಸೆತ, ಮಥೀಶಾ ಪಥಿರಣ ವಿಶ್ವದಾಖಲೆ!

ಬ್ಲೂಮ್​ಫಾಂಟೆನ್: ಶ್ರೀಲಂಕಾ ವಿರುದ್ಧ ಭಾನುವಾರ ನಡೆದ 19 ವಯೋಮಿತಿ ಏಕದಿನ ವಿಶ್ವಕಪ್ ಟೂರ್ನಿಯ ಮುಖಾಮುಖಿಯಲ್ಲಿ ಭಾರತ ತಂಡ 90 ರನ್​ಗಳಿಂದ ಗೆಲುವು ಸಾಧಿಸಿತು. ಆದರೆ, ಲಂಕಾ ಕಡೆಯಿಂದಲೂ ಸ್ಮರಣೀಯ ದಾಖಲೆಯೊಂದು...

VIDEO| ತಮಿಳಿನ ಕೌನ್​ ಬನೇಗಾ ಕರೋಡ್​ಪತಿ ಶೋನಲ್ಲಿ 1 ಕೋಟಿ...

ಚೆನ್ನೈ: ತಮಿಳು ಆವೃತ್ತಿಯ ಕೌನ್​ ಬನೇಗಾ ಕರೋಡ್​ಪತಿ(ಕೊಡೀಶ್ವರಿ) ರಿಯಾಲಿಟಿ ಶೋನಲ್ಲಿ ವಿಕಲಾಂಗ ಮಹಿಳೆಯೊಬ್ಬಳು ಬರೋಬ್ಬರಿ 1 ಕೋಟಿ ರೂ. ಬಹುಮಾನ ಮೊತ್ತವನ್ನು ಗೆದ್ದು ಎಲ್ಲರ ಗಮನ ಸೆಳೆದಿದ್ದಾಳೆ.ಮದುರೈ ನಿವಾಸಿಯಾಗಿರುವ ಕೌಶಲ್ಯ...