More

    ಪ್ರಧಾನಿ ಮೋದಿ, ಜೆ.ಪಿ.ನಡ್ಡಾ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು

    ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿಯವರು ಕೈಗೊಂಡಿದ್ದ ಪ್ರಚಾರದಲ್ಲಿನ ಹೇಳಿಕೆಗಳೇ ಈಗ ಕೆಲವೊಂದು ಮುಳುವಾಗಿ ಪರಿಣಮಿಸಿವೆ. ಮಾತ್ರವಲ್ಲ, ಇದೇ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ವಿರುದ್ಧ ದೂರು ನೀಡಲಾಗಿದೆ.

    ಇದನ್ನೂ ಓದಿ: ಬಿ.ಎಲ್. ಸಂತೋಷ್ ವಿರುದ್ಧ ಸುಳ್ಳು ಸುದ್ದಿ ಸೃಷ್ಟಿಸಿದ್ದ ಯುವಕನ ಬಂಧನ

    ಪ್ರಧಾನಿ ಮೋದಿ ಹಾಗೂ ಜೆ.ಪಿ.ನಡ್ಡಾ ವಿರುದ್ಧ ಕಾಂಗ್ರೆಸ್ ನಾಯಕರು ಚುನಾವಣಾ ಆಯೋಗಕ್ಕೆ ದೂರು ನೀಡಿದ್ದಾರೆ. ಮೋದಿ ಹಾಗೂ ನಡ್ಡಾ ನೀಡಿದ್ದ ಹೇಳಿಕೆಗಳನ್ನು ಉಲ್ಲೇಖಿಸಿ ಅವರ ವಿರುದ್ಧ ಕಾನೂನುಕ್ರಮ ಜರುಗಿಸಬೇಕು ಎಂದು ಚುನಾವಣಾ ಆಯೋಗಕ್ಕೆ ದೂರು ನೀಡಿ ಮನವಿ ಮಾಡಿಕೊಳ್ಳಲಾಗಿದೆ.

    ಇದನ್ನೂ ಓದಿ: ‘ಲಾಲ್ ಸಲಾಂ’ ಸಲುವಾಗಿ ‘ಮೊಯಿದೀನ್ ಭಾಯ್’ ಆದ ರಜನಿಕಾಂತ್: ಹೇಗಿದೆ ನೋಡಿ ಸೂಪರ್​ಸ್ಟಾರ್​ ​ಲುಕ್!​

    ಬಿಜೆಪಿ ಸೋತರೆ ಕೇಂದ್ರ ಸರ್ಕಾರದ ಯೋಜನೆಗಳನ್ನು ರದ್ದು ಮಾಡುವುದಾಗಿ ಜೆ.ಪಿ.ನಡ್ಡಾ ಹೇಳಿಕೆ ನೀಡಿದ್ದಾರೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಭಾರತದಿಂದ ಕರ್ನಾಟಕ ಬೇರ್ಪಡಿಸುವ ಸಂಚು ನಡೆದಿದೆ ಎಂದು ಮೋದಿ ಹೇಳಿದ್ದಾರೆ. ಹೀಗಾಗಿ ಅವರಿಬ್ಬರ ವಿರುದ್ಧವೂ ಕ್ರಮ ಜರುಗಿಸಬೇಕು ಎಂದು ದೂರಿನಲ್ಲಿ ಕೋರಲಾಗಿದೆ.

    ಎಲೆಕ್ಟ್ರಿಕ್ ದ್ವಿಚಕ್ರವಾಹನಗಳ ಬೆಲೆಯಲ್ಲಿ ಭಾರಿ ಇಳಿಕೆ; ಕಾರಣ ಇದು..

    ‘ಲಾಲ್ ಸಲಾಂ’ ಸಲುವಾಗಿ ‘ಮೊಯಿದೀನ್ ಭಾಯ್’ ಆದ ರಜನಿಕಾಂತ್: ಹೇಗಿದೆ ನೋಡಿ ಸೂಪರ್​ಸ್ಟಾರ್​ ​ಲುಕ್!​

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts