ಜೋಶಿ ವಿರುದ್ಧ ರಾಜ್ಯಪಾಲರಿಗೆ ದೂರು

blank

 

ಬೆಂಗಳೂರು: ಕೋವಿಡ್ ತನಿಖಾ ಆಯೋಗದ ನೇತೃತ್ವ ವಹಿಸಿರುವ ನ್ಯಾ.ಮೈಕಲ್ ಕುನ್ಹಾ ವಿರುದ್ಧ ಹೇಳಿಕೆ ನೀಡಿದ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಮೇಲೆ ಕ್ರಮಕೈಗೊಳ್ಳಬೇಕು ಎಂದು ರಾಜ್ಯ ಸರ್ಕಾರದ ಮುಖ್ಯ ವಕ್ತಾರ ದಿನೇಶ್ ಗುಂಡೂರಾವ್ ಹಾಗೂ ಕಂದಾಯ ಸಚಿವ ಕೃಷ್ಣಬೈರೇಗೌಡ ರಾಜ್ಯಪಾಲರಿಗೆ ದೂರು ಸಲ್ಲಿಸಿದ್ದಾರೆ.
ಸೋಮವಾರ ರಾಜಭವನಕ್ಕೆ ತೆರಳಿದ ಸಚಿವದ್ವಯರು, ಜಸ್ಟೀಸ್ ಮೈಕಲ್ ಕುನ್ಹಾ ಅವರ ವಯಕ್ತಿಕ ನಿಂದಿಸಲಾಗಿದೆ. ಅವರನ್ನು ನಿಂದಿಸುವ ಮೂಲಕ ಆಯೋಗದ ಮೇಲೆ ಒತ್ತಡ ಹೇರುವ ಪ್ರಯತ್ನ ಮಾಡಲಾಗಿದೆ ಎಂದು ಅಸಮಾಧಾನ ಹೊರಹಾಕಿದರು.
ದೂರು ಸಲ್ಲಿಕೆ ಬಳಿಕ ಸುದ್ದಿಗಾರರೊಂದಿಗೆ ಮಾಹಿತಿ ಹಂಚಿಕೊಂಡ ಸಚಿವ ದಿನೇಶ್ ಗುಂಡೂರಾವ್, ನಿವೃತ್ತ ನ್ಯಾಯಮೂರ್ತಿಯಾಗಿ ಜಸ್ಟೀಸ್ ಕುನ್ಹಾ ಅತ್ಯಂತ ಪ್ರಮಾಣಿಕವಾಗಿ ಕಾರ್ಯನಿರ್ವಹಿಸಿದವರು. ಅಂತವರ ಮೇಲೆ ಜವಾಬ್ದಾರಿಯುತ ಸ್ಥಾನದಲ್ಲಿದ್ದು ಪ್ರಲ್ಹಾದ್ ಜೋಶಿ ಬೇಜವಾಬ್ದಾರಿ ಹೇಳಿಕೆ ನೀಡಿದ್ದಾರೆ. ತಮ್ಮ ಹೇಳಿಕೆಗೆ ಪ್ರಲ್ಹಾದ ಜೋಶಿ ಕ್ಷಮೆ ಕೇಳಬೇಕು ಎಂದರು.
ಕೇಂದ್ರ ಸಚಿವರು ಎಂದಾಕ್ಷಣ ಏನು ಬೇಕಾದರು ಮಾತನಾಡಬಹುದು ಎಂಬ ಅಹಂಕಾರ ಪ್ರವೃತ್ತಿಯಲ್ಲಿ ಪ್ರಲ್ಹಾದ ಜೋಶಿಯವರಿದ್ದಾರೆ. ಇತ್ತಿಚೆಗೆ ಜೋಶಿ ಅವರು ಹೇಳಿಕೆಗಳು ಅಹಂಕಾರದಿಂದ ಕೂಡಿವೆ. ಜಸ್ಟೀಸ್ ಆಗಿದ್ದವರನ್ನ ಕಾಂಗ್ರೆಸ್ ಏಜೆಂಟ್ ಎಂದರೆ ಏನರ್ಥ. ಜೋಶಿಯವರು ರಾಜಕಾರಣಿಗಳಾದ ನಮ್ಮ ಮೇಲೆ ಮಾತನಾಡಲಿ. ಅಥವಾ ಕಾನೂನು ಹೋರಾಟ ನಡೆಸಲಿ. ಆದರೆ ಗೌರವಾನ್ವಿತ ನ್ಯಾಯಮೂರ್ತಿಗಳ ವೈಯಕ್ತಿಕ ನಿಂದನೆ ಸರಿಯಲ್ಲ ಎಂದು ಹೇಳಿದರು.
ಕುನ್ಹಾ ಆಯೋಗ ಅಂತಿಮ ವರದಿ ಸಲ್ಲಿಸುವ ಮುನ್ನ ಅವರ ಮೇಲೆ ಒತ್ತಡ ತರುವ ಪ್ರಯತ್ನವನ್ನ ಪ್ರಲ್ಜಾದ್ ಜೋಶಿ ನಡೆಸಿಸುತ್ತಿದ್ದಾರೆ. ಕುನ್ಹಾ ಅವರನ್ನ ಕಾಂಗ್ರೆಸ್ ಏಜೆಂಟ್ ಎಂದಿರುವುದು ಒತ್ತಡ ತಂತ್ರದ ಒಂದು ಭಾಗ. ವರದಿಯನ್ನು ವಿಮರ್ಷಿಸಲಿ.ನಮ್ಮ ತನಿಖಾ ಆಯೋಗಗಳು, ವ್ಯವಸ್ಥೆಗಳ ವಿರುದ್ಧ ಮಾತನಾಡುತ್ತಿರುವುದು ದುರಂತ. ಈ ರೀತಿ ನಿಂದನೆಗಳನ್ನ ಮಾಡಿದರೆ ಮುಂದೆ ಯಾರು ಕೂಡ ತನಿಖೆ ನಡೆಸುವ ಜವಾಬ್ದಾರಿ ತೆಗೆದುಕೊಳ್ಳಲು ಮುಂದೆ ಬರದಿರುವ ಪರಿಸ್ಥಿತಿ ನಿರ್ಮಾಣವಾಗಬಹುದು ಎಂದು ಹೇಳಿದರು.
ಕಮಿಷನ್ ಆ್ ಎನ್‌ಕ್ವೈರಿ ಆಕ್ಟ್ 1952 ಪ್ರಕಾರ ಪ್ರಲ್ಹಾದ್ ಜೋಶಿ ಹೇಳಿಕೆ ಕಾನೂನು ಬಾಹಿರವಾಗಿದೆ. 6 ತಿಂಗಳ ವರೆಗೆ ಶಿಕ್ಷೆ ವಿಧಿಸಲು ಕಾನೂನಿನಲ್ಲಿ ಅವಕಾಶವಿದೆ. ಹೀಗಾಗಿ ಈ ವಿಚಾರವನ್ನ ರಾಷ್ಟ್ರಪತಿಗಳ ಗಮನಕ್ಕೆ ತಂದು ಕ್ರಮ ಕೈಗೊಳ್ಳಲು ರಾಜ್ಯಪಾಲರಿಗೆ ದೂರು ಸಲ್ಲಿಸಲಾಗಿದೆ ಎಂದರು.
ರಾಜ್ಯಪಾಲರು ನಮ್ಮ ಅಹಾವಾಲುಗಳನ್ನು ತಾಳ್ಮೆಯಿಂದ ಆಲಿಸಿದ್ದು, ಈ ರೀತಿಯ ವೈಯಕ್ತಿಕ ಹೇಳಿಕೆಗಳನ್ನು ನೀಡುವುದು ಸರಿಯಲ್ಲ ಎಂದು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು ಎಂದು ಇದೇ ವೇಳೆ ತಿಳಿಸಿದರು.

Share This Article

ಈ 3 ನಕ್ಷತ್ರದವರು ಕೋಟೇಶ್ವರ ಯೋಗದೊಂದಿಗೆ ಹುಟ್ತಾರೆ! ಇವರನ್ನು ಅರಸಿ ಬರುತ್ತೆ ಅಪಾರ ಸಂಪತ್ತು | Birth of Stars

Birth of Stars : ಹುಟ್ಟಿದ ತಕ್ಷಣ ಜನ್ಮ ದಿನಾಂಕ ಹಾಗೂ ಹುಟ್ಟಿದ ಗಳಿಗೆಯನ್ನು ಬರೆದಿಡಲಾಗುತ್ತದೆ.…

ನಿಮ್ಮ ಕನಸಿನಲ್ಲಿ ಹಾವು ಕಾಣಿಸಿಕೊಂಡರೆ ಅದರರ್ಥ ಏನು ಗೊತ್ತಾ? ಇಲ್ಲಿದೆ ನೋಡಿ ಅಚ್ಚರಿ ಸಂಗತಿ | Snakes in a Dream

Snakes in a Dream : ಯಾವುದೇ ವ್ಯಕ್ತಿ ನಿದ್ರೆಗೆ ಜಾರಿದಾಗ ಸಹಜವಾಗಿ ಎದುರಾಗುವ ಸಂಗತಿಯೆಂದರೆ,…

ಈ ವಸ್ತುಗಳು ನಿಮ್ಮ ಮನೆಯಲ್ಲಿದ್ದರೆ ಈ ಕೂಡಲೇ ಹೊರಗೆ ಎಸೆಯಿರಿ… ಇಲ್ಲದಿದ್ರೆ ಅಪಾಯ ತಪ್ಪಿದ್ದಲ್ಲ! Household items

Household items : ಎಂದಾದರೂ ಮನೆಯನ್ನು ವಿಷಪೂರಿತಗೊಳಿಸುವ ವಸ್ತುಗಳು ಬಗ್ಗೆ ನೀವು ಯೋಚನೆ ಮಾಡಿದ್ದೀರಾ? ಮಾರುಕಟ್ಟೆಯಲ್ಲಿ…