More

    ಒಂದು ವಾರದೊಳಗೆ ಬಡ್ತಿ ಪ್ರಕ್ರಿಯೆ ಪೂರ್ಣಗೊಳಿಸಿ: ಶಿಕ್ಷಣ ಇಲಾಖೆ ಆಯುಕ್ತರಿಗೆ ಸಚಿವರ ಸೂಚನೆ

    ಬೆಂಗಳೂರು: ಪ್ರಾಥಮಿಕ ಶಾಲಾ ಶಿಕ್ಷಕರನ್ನು ಪ್ರೌಢಶಾಲಾ ಶಿಕ್ಷಕರಾಗಿ ಬಡ್ತಿ ನೀಡುವ ಪ್ರಕ್ರಿಯೆ ಒಂದು ವಾರದೊಳಗೆ ಪೂರ್ಣಗೊಳಿಸುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರಿಗೆ ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ಸೂಚನೆ ನೀಡಿದ್ದಾರೆ.

    ರಾಜ್ಯದ ಹಲವಾರು ಜಿಲ್ಲೆಗಳಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕರ ಹುದ್ದೆಯಿಂದ ಪ್ರೌಢಶಾಲಾ ಶಿಕ್ಷಕರ ಹುದ್ದೆಗೆ ಪದೋನ್ನತಿ ನೀಡಲಾಗುತ್ತಿದೆ. ಕೆಲ ಜಿಲ್ಲೆಗಳಲ್ಲಿ ಈ ಬಡ್ತಿ ಪ್ರಕ್ರಿಯೆ ಪೂರ್ಣಗೊಂಡಿರುವುದಿಲ್ಲ. ಪ್ರಸ್ತುತ ಬಡ್ತಿ ಪ್ರಕ್ರಿಯೆ ಸ್ಥಗಿತಗೊಳಿಸಿದ್ದರಿಂದ ಕೆಲವು ಜಿಲ್ಲೆಗಳ ಶಿಕ್ಷಕರಿಗೆ ತೊಂದರೆ ಆಗಿರುವ ಬಗ್ಗೆ ಶಿಕ್ಷಕರು ಮನವಿ ಸಲ್ಲಿಸಿದ್ದಾರೆ. ಹೀಗಾಗಿ ಪ್ರಸ್ತುತ ತಡೆ ಹಿಡಿದಿರುವ ಪದೋನ್ನತಿ ಪ್ರಕ್ರಿಯೆಗೆ ಅನುಮತಿ ನೀಡಬೇಕು. ಬಡ್ತಿ ಪ್ರಕ್ರಿಯೆ ಒಂದು ವಾರದೊಳಗೆ ಪೂರ್ಣಗೊಳಿಸಬೇಕು ಎಂದು ಇಲಾಖೆ ಆಯುಕ್ತ ಡಾ.ಕೆ.ಜಿ.ಜಗದೀಶ್​ಗೆ ಸಚಿವರು ಸೂಚನೆ ನೀಡಿದ್ದಾರೆ.

    ಇದನ್ನೂ ಓದಿ: ಜಾರ್ಖಂಡ್ ಕ್ರಿಕೆಟ್ ಸಂಸ್ಥೆಗೆ ಧೋನಿ ಬಾಕಿ ಉಳಿಸಿಕೊಂಡ 1,800 ರೂಪಾಯಿಯಿಂದ ವಿವಾದ!

    ಮೈಸೂರು ವಿಭಾಗದ ಶಿಕ್ಷಕರಿಗೆ ಬಡ್ತಿ ನೀಡಬೇಕು ಎಂದು ಆಗ್ರಹಿಸಿ ವಿಧಾನ ಪರಿಷತ್ ಸದಸ್ಯರು ಇತ್ತೀಚೆಗೆ ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರ ಕಚೇರಿ ಎದುರು ಪ್ರತಿಭಟನೆ ನಡೆಸಿದ್ದರು. ಈ ಸಂಬಂಧ ಸಚಿವರು ಪ್ರಕ್ರಿಯೆ ಆರಂಭಿಸುವ ಭರವಸೆ ನೀಡಿದ್ದರು. ಅದರಂತೆ ಆಯುಕ್ತರಿಗೆ ಸೂಚನೆ ನೀಡಿದ್ದಾರೆ ಎಂದು ತಿಳಿದುಬಂದಿದೆ.

    ಹೃದಯ ಚೆನ್ನಾಗಿ ಕೆಲಸ ಮಾಡ್ಬೇಕು ಅಂದ್ರೆ ಬಾದಾಮಿ ತಿನ್ಬೇಕಂತೆ…

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts