More

    ಸಕಾಲಕ್ಕೆ ಸಾರ್ವಜನಿಕರ ಕೆಲಸ ಪೂರ್ಣಗೊಳಿಸಿ

    ಕೊಡಗು : ಪೊನ್ನಂಪೇಟೆ ತಾಲೂಕಿಗೆ ಉಸ್ತುವಾರಿ ಅಧಿಕಾರಿಯಾಗಿ ನೇಮಕಗೊಂಡಿರುವ ಕೆಪಿಸಿಎಲ್ ನಿರ್ದೇಶಕ ಸಿ.ನಾಗರಾಜ್ ಬುಧವಾರ ತಾಲೂಕಿನ ಎಲ್ಲ ಅಧಿಕಾರಿಗಳೊಂದಿಗೆ ತಾಲೂಕು ಕಚೇರಿಯಲ್ಲಿ ಸಭೆ ನಡೆಸಿದರು.


    ಈ ವೇಳೆ ಮಾತನಾಡಿದ ಅವರು, ಸರ್ಕಾರದ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಲು ಅಧಿಕಾರಿಗಳು ಸಮರ್ಪಕವಾಗಿ ಕಾರ್ಯನಿರ್ವಹಿಸಬೇಕು. ಹೆಚ್ಚಿನ ಜವಾಬ್ದಾರಿ ನಿರ್ವಹಿಸಿ ಸಕಾಲಕ್ಕೆ ಸಾರ್ವಜನಿಕರ ಕೆಲಸ ಪೂರ್ಣಗೊಳಿಸಬೇಕು ಎಂದರು.


    ಸರ್ಕಾರ ವಾರ್ಷಿಕ 75,000 ಕೋಟಿ ರೂ. ಮೊತ್ತದ ಯೋಜನೆಗಳನ್ನು ಸಿದ್ಧಪಡಿಸಿದರೂ ಸಮರ್ಪಕ ಅನುಷ್ಠಾನವಾಗದೆ ಅಲ್ಲಲ್ಲಿ ದೂರುಗಳು ಕೇಳಿ ಬರುತ್ತಿವೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಉಸ್ತುವಾರಿ ಕಾರ್ಯದರ್ಶಿಗಳು ಹಾಗೂ ತಾಲೂಕು ಮಟ್ಟದಲ್ಲಿ ಉಸ್ತುವಾರಿ ಅಧಿಕಾರಿಗಳನ್ನು ನೇಮಿಸಲಾಗಿದೆ. ಯೋಜನೆಗಳ ಅನುಷ್ಠಾನದಲ್ಲಿ ಸಮಸ್ಯೆಗಳು ಉಂಟಾದಲ್ಲಿ ಮೇಲಿನ ಅಧಿಕಾರಿಗಳಿಗೆ ಮನವರಿಕೆ ಮಾಡಿ ಕೊಟ್ಟು ಬದಲಿ ಮಾರ್ಗೋಪಾಯವನ್ನು ಕಂಡುಕೊಳ್ಳಲು ಪ್ರಯತ್ನಿಸಬೇಕು. ತಾಲೂಕಿನಲ್ಲಿ ವಸತಿ ನಿಲಯ, ಶಿಕ್ಷಣ, ಅಂಗನವಾಡಿ, ಸಮಾಜ ಕಲ್ಯಾಣ ಇಲಾಖೆಗಳ ಅಧಿಕಾರಿಗಳು ಹೆಚ್ಚಿನ ಆಸಕ್ತಿಯಿಂದ ಕಾರ್ಯನಿರ್ವಹಿಸಬೇಕು ಎಂದರು .


    ತಾಲೂಕಿನ ಎಲ್ಲ ಅಧಿಕಾರಿಗಳ ವ್ಯಾಟ್ಸಪ್ ಗ್ರೂಪ್ ಮಾಡಿಕೊಂಡು ಅದರಲ್ಲಿ ಉಸ್ತುವಾರಿ ಅಧಿಕಾರಿಯಾದ ನನ್ನನ್ನು ಸೇರಿಸಿಕೊಂಡರೆ ಎಲ್ಲ ಮಾಹಿತಿ ತಿಳಿದುಕೊಳ್ಳಬಹುದು. ಎಲ್ಲ ವಸತಿ ನಿಲಯಗಳಿಗೆ ಸಿಸಿಟಿವಿ ಕಡ್ಡಾಯವಾಗಿ ಅಳವಡಿಸಿ. ಇಲಖೆಗಳ ಕೆಲಸ ಸಮರ್ಪಕವಾಗಿ ನಿರ್ವಹಿಸಿ ಸಾರ್ವಜನಿಕರಿಂದ ದೂರು ಬಾರದ ಹಾಗೆ ನೋಡಿಕೊಳ್ಳಿ. ಇಲಾಖೆಗಳ ಯೋಜನೆಯ ಪ್ರಗತಿಯನ್ನು ಆಗಾಗ ನನಗೆ ಮಾಹಿತಿ ನೀಡಬೇಕು ಎಂದು ಸೂಚಿಸಿದರು. ವಿರಾಜಪೇಟೆ ತಾಲೂಕು ತಹಶೀಲ್ದಾರ್ ರಾಮಚಂದ್ರ, ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಅಪ್ಪಣ್ಣ, ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts