More

    ಮುಂದಿನ ಮೂರು ವರ್ಷದಲ್ಲಿ ಶಿಕ್ಷಣ ವ್ಯವಸ್ಥೆ ಸಂಪೂಣ ಸುಧಾರಣೆ

    ಸೊರಬ:ಮಕ್ಕಳಿಗೆ ಜ್ಞಾನ ಭಂಡಾರ ನೀಡುವ ಮೂಲಕ ಅವರನ್ನು ದೇಶದ ಆಸ್ತಿಯನ್ನಾಗಿ ಮಾಡುವ ಹೊಣೆ ನಮ್ಮೆಲ್ಲರ ಮೇಲಿದೆ. ಈ ನಿಟ್ಟಿನಲ್ಲಿ ಸರ್ಕಾರಿ ಶಾಲೆಗಳಲ್ಲಿ ಎಲ್ಲ ಶಿಕ್ಷಣ ದೊರೆಯುವಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು.

    ತಾಲೂಕಿನ ಹರೀಶಿ ಗ್ರಾಮದ ಉನ್ನತೀಕರಿಸಿದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಅಮೃತಮಹೋತ್ಸವಕ್ಕೆ ಶನಿವಾರ ರಾತ್ರಿ ಚಾಲನೆ ನೀಡಿ ಮಾತನಾಡಿದರು.
    ರಾಜ್ಯದಲ್ಲಿ 76 ಸಾವಿರ ಶಾಲೆಗಳಿದ್ದು 1.20 ಕೋಟಿ ಮಕ್ಕಳು ಅಧ್ಯಯನ ಮಾಡುತ್ತಿದ್ದಾರೆ. ಇಲಾಖೆಯಲ್ಲಿ ಕೆಲಸ ಮಾಡುವುದು ಚಾಲೆಂಜಿಂಗ್ ಆಗಿದೆ. ಮಕ್ಕಳು ದೇಶದ ಆಸ್ತಿಯಾಗಿದ್ದು ಅವರಿಗೆ ಶಿಕ್ಷಣ ನೀಡುವುದು ಪುಣ್ಯದ ಕೆಲಸವಾಗಿದೆ. 3 ವರ್ಷದಲ್ಲಿ ಶಿಕ್ಷಣ ವ್ಯವಸ್ಥೆ ಸಂಪೂರ್ಣ ಸುಧಾರಣೆ ಮಾಡಿ ಸರ್ಕಾರಿ ಶಾಲೆಯಲ್ಲೇ ಓದಬೇಕು ಎಂಬ ಮನಸ್ಥಿತಿಯು ಮಕ್ಕಳಲ್ಲಿ ಮೂಡುವಂತೆ ಸಮಗ್ರ ಅಭಿವೃದ್ಧಿಪಡಿಸಲಾಗುವುದು. ಪ್ರತಿಯೊಬ್ಬ ವಿದ್ಯಾರ್ಥಿಗಳ ಸುಪ್ತ ಮನಸ್ಸಿನಲ್ಲಿ ಪ್ರತಿಭೆ ಅಡಗಿದ್ದು ಅದನ್ನು ಹೊರಗೆ ತರುವ ಕೆಲಸವನ್ನು ಇಲಾಖೆಯಿಂದ ಮಾಡಲಾಗುವುದು ಎಂದು ತಿಳಿಸಿದರು.
    ಎಸ್‌ಡಿಎಂಸಿ ಅಧ್ಯಕ್ಷ ಧನಂಜಯ ಜಿ.ನಾಯ್ಕ ಅಧ್ಯಕ್ಷತೆ ವಹಿಸಿದ್ದರು. ಮಕ್ಕಳು ಹಾಗೂ ಸ್ಥಳೀಯ ಕಲಾವಿದರು ಸಾಂಸ್ಕೃತಿಕ ಕಾರ್ಯಕ್ರಮ ನೀಡಿದರು. ಅಮೃತ ಮಹೋತ್ಸವ ಆಚರಣಾ ಸಮಿತಿ ಕಾರ್ಯಾಧ್ಯಕ್ಷ ಸುನೀಲ್ ಗೌಡ, ಜಿಪಂ ಮಾಜಿ ಸದಸ್ಯರಾದ ತಬಲಿ ಬಂಗಾರಪ್ಪ, ರಾಜೇಶ್ವರಿ, ತಾಪಂ ಮಾಜಿ ಅಧ್ಯಕ್ಷ ಗಣಪತಿ ಹುಲ್ತಿಕೊಪ್ಪ, ಮಾಜಿ ಸದಸ್ಯ ನಾಗರಾಜ್ ಚಂದ್ರಗುತ್ತಿ, ಬಿಇಒ ಟಿ.ಎಂ.ಸತ್ಯನಾರಾಯಣ, ಮುಖ್ಯಶಿಕ್ಷಕ ವೆಂಕಟೇಶ ಎಂ.ಗಾವಡಿ, ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಕೆ.ವಿ.ಗೌಡ, ಗ್ರಾಪಂ ಅಧ್ಯಕ್ಷೆ ಅನುಸೂಯಾ ಗಣಪತಿ ನಾಯ್ಕ, ಉಪಾಧ್ಯಕ್ಷ ರವಿಕುಮಾರ್, ಸದಸ್ಯರಾದ ಸಾಕ್ಷಿ ಬಾಪಟ್, ಜಯಲಕ್ಷ್ಮೀ, ಮಂಜಮ್ಮ, ವಜ್ರಕುಮಾರ್, ಕೃಷ್ಣ, ಕ್ಷೇತ್ರ ಸಮನ್ವಯ ಅಧಿಕಾರಿ ಧಯಾನಂದ ಕಲ್ಲೇರ್, ಬಿಆರ್ ಪಿ.ಡಿ.ಮಂಜಪ್ಪ, ಉಮಾಪತಿ, ಸುಧಾಕರ್, ಧರ್ಮಪ್ಪ, ಪ್ರಶಾಂತ ನಾಯ್ಕ, ವಸುಂಧರ್ ಭಟ್, ಕೃಷ್ಣಪ್ಪ, ಎಚ್.ಮಂಜುನಾಥ್, ಟಿ.ಶಿವಣ್ಣ, ಚಂದ್ರಹಾಸ ನಾಯ್ಕ, ಪ್ರಶಾಂತ್ ಇತರರಿದ್ದರು.
    ಸಿಆರ್‌ಪಿ ಮಂಜುನಾಥ್ ಕೋರಿ ಗೌಡರ್ ಸ್ವಾಗತಿಸಿದರು. ಮಂದಾರ ನಾಯ್ಕ, ಎ.ಎಂ.ಮಂಜುನಾಥ್ ನಿರೂಪಿಸಿದರು.

    ರಾಜ್ಯದ ಜನತೆ ಕಾಂಗ್ರೆಸ್ ಮೇಲೆ ವಿಶ್ವಾಸವಿಟ್ಟು ಅಧಿಕಾರಕ್ಕೆ ತಂದಿದ್ದರಿಂದ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿದ್ದೇವೆ. ಪದವಿ ಓದಿದ ಯುವಜನತೆ ಕುಗ್ಗಬಾರದು ಎಂದು ಯುವನಿಧಿ ಕಾರ್ಯಕ್ರಮ ಅನುಷ್ಠಾನ ಮಾಡಲಾಗಿದೆ.
    ಮಧು ಬಂಗಾರಪ್ಪ, ಶಿಕ್ಷಣ ಸಚಿವ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts