More

    ಮಳಲೂರು ಏತ ನೀರಾವರಿ ಯೋಜನೆ ಪೂರ್ಣಗೊಳಿಸಿ

    ಚಿಕ್ಕಮಗಳೂರು: ಪ್ರಸಕ್ತ ವರ್ಷದಲ್ಲಿಯೇ ಮಳಲೂರು ಏತ ನೀರಾವರಿ ಯೋಜನೆ ಕಾಮಗಾರಿ ಪೂರ್ಣಗೊಳಿಸಿ ರೈತರಿಗೆ ನೀರೊದಗಿಸಬೇಕು ಎಂದು ರಾಜ್ಯ ರೈತ ಸಂಘ ಜಿಲ್ಲಾಧ್ಯಕ್ಷ ಗುರುಶಾಂತಪ್ಪ ಒತ್ತಾಯಿಸಿದರು.

    ಜಿಲ್ಲಾ ಉಸ್ತುವಾರಿ ಸಚಿವ, ಶಾಸಕ, ಜಿಲ್ಲಾಧಿಕಾರಿ ಹಾಗೂ ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳು ಮತ್ತು ರೈತರನ್ನು ಒಳಗೊಂಡ ಸಭೆ ನಡೆಸಿ ಕಾಮಗಾರಿ ಪೂರ್ಣಗೊಳಿಸಲು ಕ್ರಮಕೈಗೊಳ್ಳಬೇಕು ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ಒತ್ತಾಯಿಸಿದರು.
    ಕಾಮಗಾರಿ ಪೂರ್ಣಗೊಳಿಸುವ ಕುರಿತು ಸಂಘದಿಂದ ಸಚಿವರಿಗೆ ಮನವಿ ನೀಡಲಿದ್ದು, ನಿಗದಿತ ಸಮಯದಲ್ಲಿ ಸೂಕ್ತ ಕ್ರಮ ಕೈಗೊಳ್ಳದಿದ್ದರೆ ಮುಂಬರುವ ಲೋಕಸಭೆ ಚುನಾವಣೆ ಬಹಿಷ್ಕರಿಸುವುದರ ಜತೆಗೆ ಮೂಡಿಗೆರೆ ಶಾಸಕಿ ನಯನಾ ಮೋಟಮ್ಮ ಅವರ ಮನೆ ಮುಂದೆ ಧರಣಿ ನಡೆಸುವುದಾಗಿ ಎಚ್ಚರಿಕೆ ನೀಡಿದರು.
    ಸದಾ ಬರಗಾಲಕ್ಕೆ ತುತ್ತಾಗುವ ಮಳಲೂರು, ಕಲ್ಲಹಳ್ಳಿ, ಕಬ್ಬಿಹಳ್ಳಿ, ಸಿರ್ಗಾಪುರ, ಬಿಗ್ಗನಹಳ್ಳಿ, ತಗಡೂರು, ಕದ್ರಿಮಿದ್ರಿ ಗ್ರಾಮಗಳ ಸುಮಾರು 1600 ಎಕರೆ ಪ್ರದೇಶಕ್ಕೆ ನೀರಾವರಿ ಕಲ್ಪಿಸುವುದರ ಜತೆಗೆ ಆ ಭಾಗದ ಕುಡಿಯುವ ನೀರಿನ ಬವಣೆ ತಪ್ಪಿಸುವ ಸಲುವಾಗಿ ಮಳಲೂರು ಏತ ನೀರಾವರಿ ಯೋಜನೆ ರೂಪಿಸಲಾಗಿತ್ತು. ಯೋಜನೆಗೆ 1998ರಲ್ಲಿ ಆಡಳಿತಾತ್ಮಕ ಅನುಮೋದನೆ ನೀಡಿ 2000ನೇ ಇಸವಿಯಲ್ಲಿ 2.52 ಕೋಟಿ ರೂ. ಮೊತ್ತದ ಕಾಮಗಾರಿಗೆ ಚಾಲನೆ ನೀಡಲಾಗಿತ್ತು ಎಂದರು.
    ಜಾಕ್‌ವೆಲ್, ಇಂಟೇಕ್‌ವೆಲ್, ರೈಸಿಂಗ್‌ಮೇನ್, ಪಂಪ್‌ಹೌಸ್ ಪಂಪ್‌ಸೆಟ್ ಅಳವಡಿಕೆ ಹಾಗೂ ಮೊದಲ ಹಂತಕ್ಕೆ ನೀರು ಹರಿಸಲು ಪೈಪ್‌ಲೈನ್ ಅಳವಡಿಕೆ ಕಾಮಗಾರಿ ಪೂರ್ಣಗೊಂಡು 15 ವರ್ಷಗಳು ಕಳೆದಿವೆ. 2ನೇ ಹಂತದಲ್ಲಿ ಗುರುತ್ವಾಕರ್ಷಣೆ ಮೂಲಕ ನೀರು ಹರಿಸುವ ನಾಲೆ ಕಾಮಗಾರಿ ಕುಂಟುತ್ತ ಸಾಗಿದೆ ಎಂದು ವಿವರಿಸಿದರು.
    ರೈತ ಸಂಘದ ಮಾಜಿ ಜಿಲ್ಲಾಧ್ಯಕ್ಷ ಎಂ.ಸಿ.ಬಸವರಾಜು, ರಾಜ್ಯ ಸಮಿತಿ ಸದಸ್ಯ ಕೆ.ಕೆ.ಕೃಷ್ಣೇಗೌಡ, ತಾಲೂಕು ಅಧ್ಯಕ್ಷ ಚಂದ್ರಶೇಖರ್, ತಾಲೂಕು ಕಾರ್ಯದರ್ಶಿ ಲೋಕೇಶ್, ಹಿರೇಮಗಳೂರು ಹಾಗೂ ಕಾರ್ಯಾಧ್ಯಕ್ಷ ಮಲ್ಲುಂಡಪ್ಪ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts