ನೀರಿನ ಕಾಮಗಾರಿ ಶೀಘ್ರ ಪೂರ್ಣಗೊಳಿಸಿ

pdb (4)
Published on

ಪಡುಬಿದ್ರಿ: ಜಲ್ ಜೀವನ್ ಮಿಷನ್ ಯೋಜನೆ ಹಾಗೂ ಅಮೃತ್ ಯೋಜನೆಯಡಿ ನಡೆಯುತ್ತಿರುವ ಪೈಪ್‌ಲೈನ್ ಕಾಮಗಾರಿ ಗುಣಮಟ್ಟ ಕಾಯ್ದುಕೊಂಡು ತ್ವರಿತವಾಗಿ ಪೂರ್ಣಗೊಳಿಸುವಂತೆ ಜತೆಗೆ ಕುಡಿಯುವ ನೀರಿನ ಜಲಮೂಲ ಕೊರತೆ ಇರುವ ಪ್ರದೇಶಗಳಲ್ಲಿ ಪರ್ಯಾಯ ವ್ಯವಸ್ಥೆ ವಾಡುವಂತೆ ಇಲಾಖಾಧಿಕಾರಿಗಳಿಗೆ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಸೂಚಿಸಿದರು.

ಕಾಪು ತಾಲೂಕು ಆಡಳಿತ ಸೌಧ ಸಭಾಂಗಣದಲ್ಲಿ ಗುರುವಾರ ನಡೆದ ಜಲ್ ಜೀವನ್ ಮಿಷನ್ ಹಾಗೂ ಅಮೃತ ಯೋಜನೆ ಕಾಮಗಾರಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ವಾತನಾಡಿದರು.

ಕಾಪು ಪುರಸಭೆ ಅಧ್ಯಕ್ಷೆ ಹರಿಣಾಕ್ಷಿ ದೇವಾಡಿಗ, ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಕಾರ್ಯಪಾಲಕ ಅಭಿಯಂತರ ಉದಯ್ ಕುವಾರ್ ಶೆಟ್ಟಿ, ಸಹಾಯಕ ಕಾರ್ಯಪಾಲಕ ಅಭಿಯಂತರ ವೆಂಕಟೇಶ್ ಮೂರ್ತಿ, ಕೆಯುಡಬ್ಲುಎಸ್ ಮತ್ತು ಒಳಚರಂಡಿ ಮಂಡಳಿ ಸಹಾಯಕ ಕಾರ್ಯಪಾಲಕ ಅಭಿಯಂತ ಅಜಯ್, ಕಾಪು ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಜೇಮ್ಸ್ ಡಿಸಿಲ್ವ, ಉಡುಪಿ ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ವಿಜಯ ಹಾಗೂ ಗ್ರಾಮ ಪಂಚಾಯಿತಿ ಅಧ್ಯಕ್ಷರು, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net