More

    ಪೂರ್ಣಗೊಂಡ ಎಸ್ಸೆಸ್ಸೆಲ್ಸಿ ಪರೀಕ್ಷೆ : ಈ ವರ್ಷ ಡಿಬಾರ್ ಆದ ವಿದ್ಯಾರ್ಥಿಗಳು, ಅಮಾನತುಗೊಂಡ ಶಿಕ್ಷಕರು ಎಷ್ಟು ಗೊತ್ತಾ? ಇಲ್ಲಿದೆ ಮಾಹಿತಿ

    ಬೆಂಗಳೂರು ರಾಜ್ಯಾದ್ಯಂತ ಮಾ.26ರಿಂದ ಏ.6ರವರೆಗೆ ನಡೆದ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆ-1 ಯಶಸ್ವಿಯಾಗಿ ಪೂರ್ಣಗೊಂಡಿದೆ. ಒಟ್ಟು 6 ಪರೀಕ್ಷೆಯಲ್ಲಿ ನಕಲು ಮಾಡುತ್ತಿದ್ದ ಆರೋಪದ ಮೇಲೆ 11 ವಿದ್ಯಾರ್ಥಿಗಳನ್ನು ಡಿಬಾರ್ ಮತ್ತು 7 ಶಿಕ್ಷಕರು ಅಮಾನತುಗೊಂಡಿದ್ದಾರೆ.

    ಪ್ರಥಮ ಭಾಷೆ ಕನ್ನಡ ಪರೀಕ್ಷೆಯಲ್ಲಿ ಯಾದಗಿರಿ ಜಿಲ್ಲೆಯ ಸುರಪುರ ತಾಲ್ಲೂಕಿನಲ್ಲಿ ಪರೀಕ್ಷಾ ನಿರ್ಲಕ್ಷ್ಯದ ಮೇಲೆ ಇಬ್ಬರು ಮತ್ತು ಇಂಡಿ ತಾಲ್ಲೂಕಿನಲ್ಲಿ ಒಬ್ಬರು ಸೇರಿ 3 ಶಿಕ್ಷಕರು. ಸಮಾಜ ವಿಜ್ಞಾನ ಪರೀಕ್ಷಾ ಕೊಠಡಿಯಲ್ಲಿ ನಕಲು ಮಾಡುತ್ತಿದ್ದ 9 ವಿದ್ಯಾರ್ಥಿಗಳನ್ನು ಡಿಬಾರ್ ಮಾಡಲಾಗಿದೆ. ಧಾರವಾಡದಲ್ಲಿ 4, ರಾಯಚೂರಿನಲ್ಲಿ 3, ಕಲಬುರಗಿ ಮತ್ತು ಬೆಂಗಳೂರು ದಕ್ಷಿಣ ಶೈಕ್ಷಣಿಕ ಜಿಲ್ಲೆಯಲ್ಲಿ ತಲಾ ಒಬ್ಬ ವಿದ್ಯಾರ್ಥಿಯನ್ನು ಡಿಬಾರ್ ಮಾಡಲಾಗಿದೆ.

    ವಿಜ್ಞಾನ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳು ಪರೀಕ್ಷಾ ಕೊಠಡಿಯಲ್ಲಿ ನಕಲು ನಡೆಯುತ್ತಿದ್ದರೂ ಕ್ರಮ ಜರುಗಿಸದ ಕರ್ತವ್ಯಲೋಪದ ಆರೋಪದಡಿ ಚಿತ್ರದುರ್ಗ ಜಿಲ್ಲೆಯಲ್ಲಿ ನಾಲ್ವರು ಶಿಕ್ಷಕರನ್ನು ಅಮಾನತು ಹಾಗೂ ಬಾಗಲಕೋಟೆಯಲ್ಲಿ ನಕಲು ಮಾಡುತ್ತಿದ್ದ ವಿದ್ಯಾರ್ಥಿಯೊಬ್ಬನನ್ನು ಡಿಬಾರ್ ಮಾಡಲಾಗಿದೆ. ಶನಿವಾರ ನಡೆದ ಇಂಗ್ಲಿಷ್ ಪರೀಕ್ಷೆಯಲ್ಲಿ ಯಾವುದೇ ಪರೀಕ್ಷಾ ಅಕ್ರಮ ಕಂಡುಬಂದಿರುವ ವರದಿಯಾಗಿಲ್ಲ.

    ವೆಬ್‌ಕಾಸ್ಟಿಂಗ್ ವ್ಯವಸ್ಥೆ ಜಾರಿಗೊಳಿಸಿದ್ದರಿಂದ ಸ್ವಲ್ಪ ಮಟ್ಟಿಗೆ ಪರೀಕ್ಷಾ ಅಕ್ರಮ ನಿಯಂತ್ರಿಸುವಲ್ಲಿ ಯಶಸ್ವಿಯಾಗಿದೆ. ಆದರೆ, ಪರಿಣಾಮಕಾರಿಯಾಗಿ ಜಾರಿಯಾಗದಿರುವ ಬಗ್ಗೆ ಹಲವು ಶಿಕ್ಷಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts