ನವದೆಹಲಿ: ಜಮ್ಮು-ಕಾಶ್ಮೀರದ ಗುಲ್ಮಾರ್ಗ್‌ನಲ್ಲಿ ಅಕ್ಟೋಬರ್ 24ರಂದು ನಡೆದಿದ್ದ ಭಯೋತ್ಪಾದಕರ ದಾಳಿಯಲ್ಲಿ ಭಾರತೀಯ ಸೇನೆಯ ಇಬ್ಬರು ಯೋಧರು ಸೇರಿದಂತೆ ನಾಲ್ವರು ಮೃತಪಟ್ಟಿದ್ದು, ಭದ್ರತೆ ಮತ್ತು ಶಾಂತಿ ಸ್ಥಾಪಿಸುವಲ್ಲಿ ಕೇಂದ್ರ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ (Rahul Gandhi) ವಾಗ್ದಾಳಿ ನಡೆಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ರಾಹುಲ್ (Rahul Gandhi), ಘಟನೆಗೆ ಸಂಬಂಧಿಸಿದಂತೆ ಸರ್ಕಾರ ಕೂಡಲೇ ಸೇನಾ ಹಾಗೂ ನಾಗರೀಕರ ಸುರಕ್ಷತೆಯ ಜವಾಬ್ದಾರಿಯನ್ನು ಖಾತರಿಪಡಿಸಬೇಕು ಎಂದು ಆಗ್ರಹಿಸಿದ್ದಾರೆ.
गुलमर्ग, जम्मू-कश्मीर में सेना के वाहन पर हुए कायराना हमले में हमारे वीर जवानों की शहादत का समाचार अत्यंत दुखद है। हमले में दो पोर्टर्स ने भी अपनी जान गंवा दी। शहीदों को नमन करता हूं और सभी शोकाकुल परिवारों के प्रति अपनी गहरी संवेदनाएं व्यक्त करता हूं।
केंद्र की NDA सरकार की…
— Rahul Gandhi (@RahulGandhi) October 25, 2024
ಜಮ್ಮು ಮತ್ತು ಕಾಶ್ಮೀರದ ಗುಲ್ಮಾರ್ಗ್‌ನಲ್ಲಿ ಸೇನಾ ವಾಹನದ ಮೇಲೆ ಉಗ್ರರು ನಡೆಸಿದ ದಾಳಿಯಲ್ಲಿ ನಮ್ಮ ವೀರ ಯೋಧರು ಹುತಾತ್ಮರಾದ ಸುದ್ದಿ ಅತ್ಯಂತ ದುಃಖಕರವಾಗಿದೆ. ಇಬ್ಬರು ಪೋರ್ಟರ್‌ಗಳು ಸಹ ಪ್ರಾಣ ಕಳೆದುಕೊಂಡಿದ್ದಾರೆ. ದಾಳಿಯಲ್ಲಿ ಹುತಾತ್ಮರಾದವರಿಗೆ ಶ್ರದ್ಧಾಂಜಲಿ ಸಲ್ಲಿಸುತ್ತೇನೆ ಮತ್ತು ದುಃಖತಪ್ತ ಕುಟುಂಬಗಳಿಗೆ ಸಂತಾಪ ವ್ಯಕ್ತಪಡಿಸುತ್ತೇನೆ.
ಸರ್ಕಾರದ ನೀತಿಗಳು ಜಮ್ಮು ಮತ್ತು ಕಾಶ್ಮೀರದಲ್ಲಿ ಭದ್ರತೆ ಮತ್ತು ಶಾಂತಿಯನ್ನು ಸ್ಥಾಪಿಸುವಲ್ಲಿ ಸಂಪೂರ್ಣವಾಗಿ ವಿಫಲವಾಗಿವೆ. ಅವರ ಹೇಳಿಕೆಗಳಿಗೆ ವ್ಯತಿರಿಕ್ತವಾಗಿ, ನಿರಂತರ ಭಯೋತ್ಪಾದಕ ಚಟುವಟಿಕೆಗಳು, ನಮ್ಮ ಸೈನಿಕರ ಮೇಲಿನ ದಾಳಿಗಳು ಮತ್ತು ನಾಗರಿಕರ ಉದ್ದೇಶಿತ ಹತ್ಯೆಗಳಿಂದ ರಾಜ್ಯವು ಅಪಾಯದ ನೆರಳಿನಲ್ಲಿ ಬದುಕುತ್ತಿದೆ ಎಂದು ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ (Rahul Gandhi) ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪೋಸ್ಟ್ ಮಾಡಿದ್ದಾರೆ.
Muda Scam| ಲೋಕಾಯುಕ್ತ ಪೊಲೀಸರಿಂದ CM Siddaramaiah ಪತ್ನಿ ವಿಚಾರಣೆ
301 ರನ್ಗಳ ಭರ್ಜರಿ ಲೀಡ್ ಪಡೆದ NewZealand; ಸರಣಿ ಕೈತಪ್ಪುವ ಭೀತಿಯಲ್ಲಿ Team India