ಆಳ್ವಾಸ್ ಸೆಂಟ್ರಲ್ ಶಾಲೆಗೆ ಸಮಗ್ರ ಪ್ರಶಸ್ತಿ

05
Published on

ಮೂಡುಬಿದಿರೆ: ಹಳೆಯಂಗಡಿ ಡಾ.ರಾಮಣ್ಣ ಶೆಟ್ಟಿ ಮೆಮೋರಿಯಲ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದ ದ.ಕ. ಜಿಲ್ಲೆಯ ಸಿಬಿಎಸ್‌ಇ ಮತ್ತು ಐಸಿಎಸ್‌ಇ ಶಾಲೆಗಳ ಗುಡ್ಡಗಾಡು ಓಟದ ಸ್ಪರ್ಧೆಯಲ್ಲಿ ಆಳ್ವಾಸ್ ಸೆಂಟ್ರಲ್ ಶಾಲೆ 14 ವರ್ಷ ವಯೋಮಿತಿಯ ಬಾಲಕರ ವಿಭಾಗದ 4ಕಿಮೀ ಓಟದಲ್ಲಿ ಓಂಕಾರ್ ಪ್ರಥಮ ಸ್ಥಾನ ಮತ್ತು ಪುನೀತ್ ಕುಮಾರ್ ತೃತೀಯ ಸ್ಥಾನ ಹಾಗೂ 17 ವರ್ಷ ವಯೋಮಿತಿಯ ಬಾಲಕಿಯರ ವಿಭಾಗದ 4ಕಿಮೀ ಓಟದಲ್ಲಿ ದಿಶಾ ಆರನೇ ಸ್ಥಾನ ಪಡೆದರು.

14 ಹಾಗೂ 17 ವರ್ಷ ಬಾಲಕ ಬಾಲಕಿಯರ ಎರಡು ವಿಭಾಗದಲ್ಲಿ ಒಟ್ಟು 78 ಅಂಕ ಪಡೆದು ಸಮಗ್ರ ಪ್ರಶಸ್ತಿ ಪಡೆಯಿತು. ವಿಜೇತ ಕ್ರೀಡಾಪಟುಗಳನ್ನು ಸಂಸ್ಥೆ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ ಅಭಿನಂದಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net