ಮಂಡ್ಯ: ಸಮಗ್ರ ಸಾವಯವ ಸುಸ್ತಿರ ಕೃಷಿ ಟ್ರಸ್ಟ್‌ನ ವತಿಯಿಂದ ಮಾ.3ರಂದು ನಗರದ ಕರ್ನಾಟಕ ಸಂಘದ ಆವರಣದಲ್ಲಿ ಸಮಗ್ರ ಕೃಷಿ ಜಾಗೃತಿ ಅಭಿಯಾನ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಟ್ರಸ್ಟ್‌ನ ಅಧ್ಯಕ್ಷ ಜೋಗೀಗೌಡ ಹೇಳಿದರು.
ಸಾವಯವ ಕೃಷಿ ಹಾಗೂ ಮಣ್ಣಿನ ಫಲವತ್ತತೆಯನ್ನು ಕಾಪಾಡಿಕೊಂಡು, ಕೃಷಿಯಲ್ಲಿ ಆದಾಯ ಹೆಚ್ಚಿಸಿಕೊಳ್ಳುವ ಕುರಿತು ಪ್ರಗತಿಪರ ಕೃಷಿಕರು ಇತರೇ ಕೃಷಿಕರಿಗೆ ಅರಿವು ಮೂಡಿಸುವ ಉದ್ದೇಶವೇ ಕಾರ್ಯಕ್ರಮದ ಧ್ಯೇಯವಾಗಿದೆ ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಅಂದು ಬೆಳಗ್ಗೆ 10ಗಂಟೆಗೆ ಕಾರ್ಯಕ್ರಮವನ್ನು ಜಿಲ್ಲಾಧಿಕಾರಿ ಡಾ.ಕುಮಾರ ಉದ್ಘಾಟಿಸಲಿದ್ದು, ಟ್ರಸ್ಟ್‌ನ ಅಧ್ಯಕ್ಷ ಜೋಗೀಗೌಡ ಅಧ್ಯಕ್ಷತೆ ವಹಿಸುವರು. ಭಗವಾನ್ ಬುದ್ಧ ಸಮೂಹ ಶಿಕ್ಷಣ ಸಂಸ್ಥೆಯ ಸಂಸ್ಥಾಪಕ ಡಾ.ಯಮದೂರು ಸಿದ್ದರಾಜು ಪ್ರಾಸ್ತಾವಿಕವಾಗಿ ನುಡಿಯಲಿದ್ದಾರೆ. ಜಂಟಿ ಕೃಷಿ ನಿರ್ದೇಶಕ ವಿ.ಎಸ್.ಅಶೋಕ, ತೋಟಗಾರಿಕೆ ಇಲಾಖೆ ಉಪನಿರ್ದೇಶಕಿ ಕೆ.ಎನ್.ರೂಪಶ್ರೀ, ರೇಷ್ಮೆ ಇಲಾಖೆ ಉಪನಿರ್ದೇಶಕ ಪುಟ್ಟಸ್ವಾಮಿ, ಅಂತಾರಾಷ್ಟ್ರೀಯ ಆರ್ಯಭಟ ಪ್ರಶಸ್ತಿ ವಿಜೇತ ಕೃಷ್ಣೇಗೌಡ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿರಲಿದ್ದಾರೆ ಎಂದರು.
ಬೆಳಗ್ಗೆ 10.30ಕ್ಕೆ ಸ್ವಾವಲಂಬಿ ಗ್ರಾಮದ ಪರಿಕಲ್ಪನೆ, 11ಕ್ಕೆ ನೈಸರ್ಗಿಕ ಹಾಗೂ ಪಾರಂಪರಿಕ ಕೃಷಿ, 12ಕ್ಕೆ ಸಮಗ್ರ ಕೃಷಿ ಹಾಗೂ ಮಣ್ಣು ಪುನರ್ ಚೇತನದ ಮಹತ್ವ, ಮಧ್ಯಾಹ್ನ 1ಗಂಟೆಗೆ ದೇಶ ವಿದೇಶದಲ್ಲಿ ಸಾವಯವ ಆಹಾರ ಧಾನ್ಯಗಳ ಬೇಡಿಕೆ ವಿಷಯಗಳ ಕುರಿತು ಉಪನ್ಯಾಸ ನಡೆಯಲಿದೆ. 2.30ಕ್ಕೆ ಮಂಡ್ಯ ಆರ್‌ಎಪಿಸಿಎಂಎಸ್ ಅಧ್ಯಕ್ಷ ಯು.ಸಿ.ಶೇಖರ್ ಅಧ್ಯಕ್ಷತೆಯಲ್ಲಿ ಸಮಾರೋಪ ಕಾರ್ಯಕ್ರಮ ನಡೆಯಲಿದ್ದು, ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ ಸಮಾರೋಪ ನುಡಿಗಳನ್ನಾಡಲಿದ್ದಾರೆ. ಶಾಸಕರಾದ ರವಿಕುಮಾರ್‌ಗೌಡ, ದರ್ಶನ್ ಪುಟ್ಟಣ್ಣಯ್ಯ ಪ್ರಗತಿಪರ ರೈತರನ್ನು ಸನ್ಮಾನಿಸಲಿದ್ದಾರೆ ಎಂದು ವಿವರಿಸಿದರು.
ಟ್ರಸ್ಟ್‌ನ ಸಲಹೆಗಾರ ಡಾ.ವೈ.ಎಸ್.ಸಿದ್ದರಾಜು, ಕಾರ್ಯದರ್ಶಿ ಎಸ್.ಸಿ.ರಂಗೇಗೌಡ, ರಾಧಾಕೃಷ್ಣ, ವಿನಯ್‌ಕುಮಾರ್ ಇದ್ದರು.
ಮಾ.3ರಂದು ಕೃಷಿ ಜಾಗೃತಿ ಅಭಿಯಾನ: ಟ್ರಸ್ಟ್‌ನ ಅಧ್ಯಕ್ಷ ಜೋಗೀಗೌಡ ಮಾಹಿತಿ

ನಿಮ್ಮ ಮಕ್ಕಳನ್ನು ಸ್ಮಾರ್ಟ್‌ಫೋನ್‌ಗಳಿಂದ ದೂರವಿಡುವುದು ಹೇಗೆ? Child Care Tips
Child Care Tips: ನೀವು ಚಿಕ್ಕ ವಯಸ್ಸಿನಲ್ಲಿ ಮಕ್ಕಳಿಗೆ ಮೊಬೈಲ್ ಫೋನ್ ಕೊಡಬಾರದು. ನಿಮ್ಮ ಮಗು ನಿಮ್ಮೊಂದಿಗೆ…
ಈ 3 ರಾಶಿಯ ಮಹಿಳೆಯರು ಹುಟ್ಟಿನಿಂದಲೇ ಅಪಾರ ಬುದ್ಧಿಶಕ್ತಿ ಹೊಂದಿರುತ್ತಾರಂತೆ! ನಿಮ್ಮದೂ ಇದೇ ರಾಶಿನಾ? Zodiac Signs
Zodiac Signs : ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಒಬ್ಬ ವ್ಯಕ್ತಿಯು ಯಾವ ರಾಶಿಚಕ್ರ ಮತ್ತು ನಕ್ಷತ್ರದಲ್ಲಿ…
ಬೇಸಿಗೆ ತಂಪಾಗಿರಲು ಹಾಲು ಹಾಕದ ಮಿಲ್ಕ್ ಶೇಕ್
ಬೇಸಿಗೆಯಲ್ಲೂ ನಮ್ಮನ್ನು ತಂಪಾಗಿಟ್ಟು, ಸಾಮಾನ್ಯವಾಗಿ ಆಗುವ ಸುಸ್ತನ್ನು ಕಡಿಮೆ ಮಾಡುವ ವಿಶೇಷ ಮಿಲ್ಕ್ ಶೇಕ್ ಬಗ್ಗೆ…