More

  ರೈತರಿಗೆ ಹಕ್ಕುಪತ್ರ ನೀಡಲು ಒತ್ತಾಯ

  ಅರಸೀಕೆರೆ: ಬಗರ್ ಹುಕುಂ ಸಾಗುವಳಿ ಯೋಜನೆಯಡಿ ಭೂಮಿ ಉಳುಮೆ ಮಾಡುತ್ತಿರುವ ರೈತರಿಗೆ ಹಕ್ಕುಪತ್ರ ನೀಡುವಂತೆ ಒತ್ತಾಯಿಸಿ ರೈತ ಸಂಘದ ಮುಖಂಡರು ಜಿಲ್ಲಾಧಿಕಾರಿ ಕಚೇರಿಗೆ ಗುರುವಾರ ಪಾದಯಾತ್ರೆ ನಡೆಸಿದರು.

  ಪ್ರವಾಸಿ ಮಂದಿರದಿಂದ ಹೊರಟ ರೈತರು ಬಸವೇಶ್ವರ ವೃತ್ತದಲ್ಲಿ ಜಮಾಯಿಸಿ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿದರು. ಸಂಘಟನೆಯ ರಾಜ್ಯ ಸಂಚಾಲಕ ಕನಕಂಚೇನಹಳ್ಳಿ ಪ್ರಸನ್ನಕುಮಾರ್ ಮಾತನಾಡಿ, ಬೇಲೂರು ತಾಲೂಕಿನ ಹಳೆಬೀಡು ಹೋಬಳಿ ಐದಳ್ಳ ಕಾವಲಿನಲ್ಲಿ ಅಂದಾಜು ಎರಡೂವರೆ ಸಾವಿರ ಎಕರೆ ಭೂಮಿಯನ್ನು ಹಲವು ವರ್ಷಗಳಿಂದ ಅನ್ನದಾತರು ಉಳುಮೆ ಮಾಡುತ್ತಾ ಬಂದಿದ್ದು ಇದುವರೆಗೂ ಹಕ್ಕುಪತ್ರ ನೀಡಿಲ್ಲ. ಈ ಸಂಬಂಧ ರಾಷ್ಟ್ರಪತಿ, ರಾಜ್ಯಪಾಲರು ಹಾಗೂ ಮುಖ್ಯಮಂತ್ರಿ ಭೇಟಿ ಮಾಡಿ ಮನವಿ ಸಲ್ಲಿಸಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ಆದ್ದರಿಂದ ಮತ್ತೊಮ್ಮೆ ಹೋರಾಟಕ್ಕಿಳಿಯಲಾಗಿದೆ. ಅರಣ್ಯ ಇಲಾಖೆ ಅಧಿಕಾರಿಗಳು ಕಿರುಕುಳ ನೀಡುವುದನ್ನು ನಿಲ್ಲಿಸಬೇಕು ಎಂದು ಅಗ್ರಹಿಸಿದರು.

  ಮುಖಂಡರಾದ ನಿಂಗಪ್ಪ, ಅಯೂಬ್ ಪಾಷ, ಏಜಾಜ್, ದಸ್ತಗೀರ್ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts