More

    ಕಡ್ಡಾಯವಾಗಿ ಮಾಸ್ಕ್ ಧರಿಸಿ ಹೊಣೆಗಾರಿಕೆ ನಿಭಾಯಿಸಿ

    ಬೆಳಗಾವಿ: ಕರೊನಾ ಸೋಂಕು ಹರಡುವುದನ್ನು ತಡೆಗಟ್ಟಲು ಮತ್ತು ಸೋಂಕಿನಿಂದ ಪಾರಾಗಲು ಪ್ರತಿಯೊಬ್ಬರೂ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಎಂದು ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ ಹೇಳಿದರು.

    ಬೆಳಗಾವಿ ನಗರದಲ್ಲಿ ಮಾಸ್ಕ್ ದಿನಾಚರಣೆ ಅಂಗವಾಗಿ ಜಿಲ್ಲಾಡಳಿತ, ಜಿಪಂ, ಆರೋಗ್ಯ ಇಲಾಖೆ ಹಾಗೂ ಮಹಾನಗರ ಪಾಲಿಕೆ ವತಿಯಿಂದ ಅಶೋಕ ವೃತ್ತದಿಂದ ರಾಣಿ ಚನ್ನಮ್ಮ ವೃತ್ತದವರೆಗೆ ಗುರುವಾರ ಆಯೋಜಿಸಿದ್ದ ಜಾಗೃತಿ ಜಾಥಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

    ನಾಲ್ಕೈದು ತಿಂಗಳಿಂದ ದೇಶದಲ್ಲಿ ಕರೊನಾ ವೈರಸ್ ಸೋಂಕಿತರ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಹಾಗಾಗಿ ಸಾರ್ವಜನಿಕರು ದೈಹಿಕ ಅಂತರ ಕಾಪಾಡಿಕೊಂಡು ಆರೋಗ್ಯ ರಕ್ಷಿಸಿಕೊಳ್ಳಲು ಮುಂದಾಗಬೇಕು. ಮಾಸ್ಕ್ ಧರಿಸುವ ವಿಚಾರವಾಗಿ ನಿರ್ಲಕ್ಷೃ ಮಾಡಬಾರದು. ಈ ಕುರಿತು ಸರ್ಕಾರವು ನಿರಂತರ ಜಾಗೃತಿ ಮೂಡಿಸುತ್ತಿದೆ. ಹಾಗಾಗಿ ಸಾರ್ವಜನಿಕರು ಸಹ ಕರೊನಾ ಸೋಂಕು ಸಂಪೂರ್ಣವಾಗಿ ನಿರ್ಮೂಲನೆ ಮಾಡಲು ಸಹಕರಿಸಬೇಕು ಎಂದರು.

    ಜಿಲ್ಲಾಧಿಕಾರಿ ಡಾ. ಎಸ್.ಬಿ. ಬೊಮ್ಮನಹಳ್ಳಿ ಮಾತನಾಡಿ, ಕರೊನಾ ಸೋಂಕು ತಡೆಗಟ್ಟಲು ಮತ್ತು ಜನರ ಆರೋಗ್ಯ ಸಂರಕ್ಷಣೆಗಾಗಿ ಸರ್ಕಾರ ನಿರಂತರ ಶ್ರಮಿಸುತ್ತಿದೆ. ಮನೆಯಿಂದ ಹೊರಬರುವ ಮುನ್ನ ಪ್ರತಿಯೊಬ್ಬರೂ ಮಾಸ್ಕ್ ಧರಿಸಿಕೊಳ್ಳಬೇಕು ಎಂದು ಸೂಚಿಸಿದರು. ಮಹಾನಗರ ಪೊಲೀಸ್ ಆಯುಕ್ತ ಬಿ.ಎಸ್. ಲೋಕೇಶಕುಮಾರ್, ಕೋವಿಡ್-19 ವಿಶೇಷ ಅಧಿಕಾರಿ ರಾಜೇಂದ್ರ ಚೋಳನ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ, ಜಿಪಂ ಸಿಇಒ ಡಾ. ಕೆ.ವಿ. ರಾಜೇಂದ್ರ ಇತರರು ಇದ್ದರು.

    ಮಾಸ್ಕ್ ಧರಿಸದೆ ಓಡಾಟ ನಡೆಸಿದರೆ ಅಂತಹವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ. ಹಾಗಾಗಿ ಪ್ರತಿಯೊಬ್ಬರೂ ಜಿಲ್ಲಾಡಳಿತ ಹಾಗೂ ಸರ್ಕಾರದ ಮಾರ್ಗದರ್ಶನ ಪಾಲನೆ ಮಾಡಬೇಕು. ನಮ್ಮ ಆರೋಗ್ಯದೊಂದಿಗೆ ಸಾಮಾಜಿಕ ಸ್ವಾಸ್ಥೃವನ್ನೂ ಕಾಪಾಡಲು ಎಲ್ಲರೂ ಕೈಜೋಡಿಸಬೇಕು.
    | ಸುರೇಶ ಅಂಗಡಿ, ರೈಲ್ವೆ ಖಾತೆ ರಾಜ್ಯ ಸಚಿವ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts