More

    ಏಕಾಗ್ರತೆ-ಶ್ರದ್ಧೆಯಿಂದ ಅಭ್ಯಾಸ ಮಾಡಿ

    ಸಿಂಧನೂರು: ಸ್ಪರ್ಧಾತ್ಮಕ ಯುಗದಲ್ಲಿ ಮಕ್ಕಳು ನಿರಂತರ ಓದಿನ ಕಡೆ ಗಮನಹರಿಸಿ, ಜೀವನದಲ್ಲಿ ಯಶಸ್ಸು ಸಾಧಿಸಲು ಮುಂದಾಗಬೇಕು ಎಂದು ಪ್ರಧಾನ ಸಿವಿಲ್ ನ್ಯಾಯಾಧೀಶ ಕೋಟೆಪ್ಪ ಕಾಂಬ್ಳೆ ಹೇಳಿದರು.

    ಇದನ್ನೂ ಓದಿ: ಆಸಕ್ತಿ, ಶ್ರದ್ಧೆಯಿಂದ ಕರ್ತವ್ಯ ನಿರ್ವಹಿಸಿ

    ನಗರದ ವಾಸವಿ ಕಲ್ಯಾಣ ಮಂಟಪದಲ್ಲಿ ತಾಲೂಕು ಕಾನೂನು ಸೇವಾ ಸಮಿತಿ, ತಾಲೂಕು ನ್ಯಾಯವಾದಿಗಳ ಸಂಘ, ವಾಸವಿ ಬಾಲಕಿಯರ ಪ್ರೌಢ ಶಾಲೆ ಮತ್ತು ಪದವಿಪೂರ್ವ ಕಾಲೇಜು ಸಂಯುಕ್ತಾಶ್ರಯದಲ್ಲಿ ರಾಷ್ಟ್ರೀಯ ಯುವ ದಿನಾಚರಣೆ ಅಂಗವಾಗಿ ಹಮ್ಮಿಕೊಂಡಿದ್ದ ಕಾನೂನು ಅರಿವು ನೆರವು ಕಾರ್ಯಕ್ರಮದಲ್ಲಿ ಶುಕ್ರವಾರ ಮಾತನಾಡಿದರು.

    ಮಕ್ಕಳು ಕಾನೂನನ್ನು ತಿಳಿದುಕೊಳ್ಳಬೇಕು. ಸ್ವಾಮಿ ವಿವೇಕಾನಂದರ ಆದರ್ಶ ಜೀವನಕ್ಕೆ ಮೈಗೂಡಿಸಿಕೊಳ್ಳಬೇಕು. ಏಕಾಗ್ರತೆ, ಶ್ರದ್ಧೆ ಯಿಂದ ಅಭ್ಯಾಸ ಮಾಡಬೇಕು. ವಿದ್ಯಾರ್ಥಿಗಳು ಗುರು ಹಿರಿಯರ ಮಾರ್ಗದರ್ಶನ ಪಡೆದುಕೊಂಡು ಸಮಾಜದಲ್ಲಿ ಮುಂದೆ ಬರಬೇಕು ಎಂದು ಸಲಹೆ ನೀಡಿದರು.

    2ನೇ ಹೆಚ್ಚುವರಿ ಸಿವಿಲ್ ನ್ಯಾಯಾಧೀಶ ಆಚಪ್ಪ ದೊಡ್ಡಬಸವರಾಜ, ವಕೀಲರ ಸಂಘದ ಅಧ್ಯಕ್ಷ ಎನ್.ರಾಮಗನಗೌಡ, ವಕೀಲ ಎಸ್.ಎಚ್.ಪಿ.ಖಾದ್ರಿ, ವಕೀಲರ ಸಂಘದ ಕಾರ್ಯದರ್ಶಿ ಶಿವಕುಮಾರ ಬೈರೆದೊರೆ, ಖಜಾಂಚಿ ಶರಣಬಸವ ಉಮಲೂಟಿ, ಈರೇಶ ಇಲ್ಲೂರು, ವಾಸವಿ ಪದವಿಪೂರ್ವ ಕಾಲೇಜು ಆಡಳಿತಾಧಿಕಾರಿ ನಾಗರಾಜ ಗುಪ್ತಾ, ವಾಸವಿ ಬಾಲಕಿಯರ ಪ್ರೌಢ ಶಾಲೆಯ ಮುಖ್ಯಗುರು ಎಸ್.ಕೆ.ಪರಂಡಿ, ಪ್ರಾಂಶುಪಾಲ ವಿನೋದ ಗುಪ್ತಾ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts